ಮತ್ತೆ 7 ಮಂದಿಗೆ ಕೋವಿಡ್
Team Udayavani, Jun 28, 2020, 9:59 AM IST
ಶಿವಮೊಗ್ಗ: ಶಿಕಾರಿಪೂರ ತಾಲೂಕಿನ ಖವಾಸಪೂರ ಗ್ರಾಮದ 80 ವರ್ಷದ ವೃದ್ಧೆಯ ಅಂತ್ಯ ಸಂಸ್ಕಾರದಲ್ಲಿ ಭಾಗವಹಿ ಸಿದ್ದ ಏಳು ಮಂದಿಗೆ ಕೋವಿಡ್ ದೃಢಪಟ್ಟಿದ್ದು, ಶಿಕಾರಿಪುರದಲ್ಲಿ ಆತಂಕ ಸೃಷ್ಟಿಯಾಗಿದೆ.
ಪಿ-9546 ಮಹಿಳೆ ಕೋವಿಡ್ ದಿಂದ ಮೃತಪಟ್ಟಿದ್ದು, ಈಕೆ ಜತೆ ಪ್ರಾಥಮಿಕ ಸಂಪರ್ಕ ಹೊಂದಿದ್ದ 9 ಜನರನ್ನು ಕ್ವಾರಂಟೈನ್ ಮಾಡಲಾಗಿತ್ತು. ಎಲ್ಲರೂ ಮಹಿಳೆಯ ಸಂಬಂಧಿಕರೇ ಆಗಿದ್ದಾರೆ. ಶುಕ್ರವಾರ ಮಗ ಮತ್ತು ಮೊಮ್ಮಗನಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಶನಿವಾರ ಏಳು ಜನರಿಗೆ ಪಾಸಿಟಿವ್ ಬಂದಿದೆ.
ಒಟ್ಟಾರೆ ಮಹಿಳೆಯೊಬ್ಬರಿಂದಲೇ ಇದುವರೆಗೆ 9 ಜನರಿಗೆ ಸೋಂಕು ಹರಡಿದೆ. ಎಲ್ಲರಿಗೂ ಚಿಕಿತ್ಸೆ ನೀಡಲಾಗುತ್ತಿದೆ.ನಗರದ ಪ್ರತಿಷ್ಠಿತ ಆಸ್ಪತ್ರೆಯೊಂದರ ವೈದ್ಯರಿಗೂ ಪಾಸಿಟಿವ್ ಬಂದಿದೆ. ಇವರಿಗೆ ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲ. ಆದರೆ, ಯಾರಿಂದ ಸೋಂಕು ತಗುಲಿದೆ ಎಂಬುದು ಇನ್ನೂ ಪತ್ತೆಯಾಗಿಲ್ಲ. ಇನ್ನುಳಿದಂತೆ ಹೊಸನಗರ ಮತ್ತು ಶಿರಾಳಕೊಪ್ಪದಲ್ಲಿ ತಲಾ ಒಂದು ಪ್ರಕರಣ ಪತ್ತೆಯಾಗಿವೆ. ಇವರಿಗೂ ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲ. ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.