ವನ್ಯಜೀವಿಗಳಿಂದ ಬೆಳೆ ಹಾನಿ:ಸೋಲಾರ್ ಬೇಲಿ ನಿರ್ಮಿಸಿ
Team Udayavani, Sep 28, 2018, 2:30 PM IST
ತೀರ್ಥಹಳ್ಳಿ: ವನ್ಯ ಜೀವಿಗಳಿಂದ ಸಾಗುವಳಿ ಪ್ರದೇಶ ಬೆಳೆಗಳಿಗೆ ಹಾನಿಯಾಗುತ್ತಿದ್ದು, ನಿಯಂತ್ರಣಕ್ಕಾಗಿ ಸೋಲಾರ್ ಬೇಲಿ ನಿರ್ಮಾಣಕ್ಕೆ ಅಗತ್ಯ ಸಹಕಾರ ನೀಡುವಂತೆ ಆಗ್ರಹಿಸಿ ಆರಗ ಗ್ರಾಪಂ ಅಧ್ಯಕ್ಷ ಜಗದೀಶ್ ನೇತೃತ್ವದಲ್ಲಿ ನೆಕ್ಕರಗೋಡು ಗ್ರಾಮದ ರೈತರ ನಿಯೋಗ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಿವಶಂಕರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಕಳೆದ ಕೆಲವು ತಿಂಗಳಿಂದ ಆರಗ ಭಾಗದ ಹಲವೆಡೆ ವನ್ಯಜೀವಿಗಳಿಂದ ಸಾಗುವಳಿ ಪ್ರದೇಶದ ಬೆಳೆಗಳಿಗೆ ಅಪಾರ ಹಾನಿಯಾಗುತ್ತಿದೆ. ಬೆಳೆಗಳನ್ನು ರಕ್ಷಿಸಲು ರೈತರು ಹರಸಾಹಸ ಪಡುವಂತಾಗಿದೆ. ಬೆಳೆ ರಕ್ಷಣೆಗಾಗಿ ಸಾಗುವಳಿ ಪ್ರದೇಶದಲ್ಲಿ ಸೋಲಾರ್ ಬೇಲಿಯನ್ನು ನಿರ್ಮಾಣಗೊಳಿಸುವಂತಾದರೆ ಬೆಳೆಗಳನ್ನು ಸಂರಕ್ಷಿಸಿಕೊಳ್ಳಬಹುದು. ಈ ಭಾಗದಲ್ಲಿ ಕಾಡುಕೋಣಗಳ ವಿಪರೀತ ಹಾವಳಿಯಿಂದ ಬೆಳೆ ನಾಶವಾಗುತ್ತಿದೆ ಎಂದು ರೈತರು ಮನವಿಯಲ್ಲಿ ಆಗ್ರಹಿಸಿದರು.
ಮನವಿ ಸ್ವೀಕರಿಸಿದ ಅರಣ್ಯ ಇಲಾಖೆಯ ಅಧಿಕಾರಿ ಮಾತನಾಡಿ, ಸೋಲಾರ್ ಬೇಲಿ ನಿರ್ಮಾಣಕ್ಕೆ ಅರಣ್ಯ ಇಲಾಖೆಯಲ್ಲಿ ಹಲವು ಷರತ್ತುಗಳಿವೆ. ಇದರ ಅನ್ವಯ ಸಹಾಯಧನದ ಅವಕಾಶವಿದೆ. ಸೋಲಾರ್ ಬೇಲಿ ನಿರ್ಮಾಣಕ್ಕೆ ಅಗತ್ಯ ಅನುದಾನ ಕೋರಿ ಮೇಲಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು. ರೈತರಾದ ಕೃಷ್ಣಮೂರ್ತಿ ಮಂಜುನಾಥ್, ಗಿರೀಶ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandapura: ನಿಂತಿದ್ದ ಕಾರಿಗೆ ಇನ್ನೊಂದು ಕಾರು ಡಿಕ್ಕಿ ಹೊಡೆದು ಕಾರು ಪಲ್ಟಿ
Sagara: ವಿದ್ಯುತ್ ಟ್ರಾನ್ಸ್ ಫಾರ್ಮರ್‌ಗೆ ನೇಣು ಬಿಗಿದು ಯುವಕ ಆತ್ಮಹತ್ಯೆ
Sagara: ಮಿಡಿ ಮಾವು, ವಿಶ್ವವಿದ್ಯಾಲಯದ ನಡೆದಾಡುವ ವಿಶ್ವಕೋಶ ಬಿ.ವಿ.ಸುಬ್ಬರಾವ್ ಇನ್ನಿಲ್ಲ
KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
Sagara: ಕಾಶಿಯಾತ್ರೆಯ ಪ್ಯಾಕೇಜ್ ರೂವಾರಿ ಇನ್ನಿಲ್ಲ; ಮನೆ ಮಾಡಿನಿಂದ ಬಿದ್ದು ಸಾವು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.