ವಿಧಾನ ಮಂಡಲದ ಅಧಿವೇಶನದಲ್ಲಿ ಸಂವಿಧಾನ ಕುರಿತು ಚರ್ಚಿಸುವುದು ತಪ್ಪಲ್ಲ : ಸಿ.ಟಿ.ರವಿ
Team Udayavani, Feb 16, 2020, 9:40 PM IST
ಶಿವಮೊಗ್ಗ: ವಿಧಾನ ಮಂಡಲದ ಅಧಿವೇಶನದಲ್ಲಿ ಸಂವಿಧಾನ ಕುರಿತು ಚರ್ಚಿಸುವುದು ತಪ್ಪಲ್ಲ ಎಂದು ಸಚಿವ ಸಿ.ಟಿ.ರವಿ ಅಭಿಪ್ರಾಯಪಟ್ಟಿದ್ದಾರೆ.
ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿ, ಮುಂಬರುವ ವಿಧಾನ ಮಂಡಲ ಅಧಿವೇಶನದ ಆರಂಭದ ಎರಡು ದಿನ ಸಂವಿಧಾನ ಕುರಿತು ಚರ್ಚೆ, ವಿಚಾರ ವಿನಿಮಯ ಹಮ್ಮಿಕೊಂಡಿರುವ ನಿರ್ಧಾರ ಸರಿಯಾಗಿದೆ. ಅತಿವೃಷ್ಟಿ, ರೈತರ ಸಮಸ್ಯೆ, ರಾಜ್ಯದ ಜ್ವಲಂತ ಸಮಸ್ಯೆ ಬಗ್ಗೆ ಚರ್ಚಿಸಲು ಅಧಿವೇಶನದಲ್ಲಿ ಸಾಕಷ್ಟು ಕಾಲಾವಕಾಶ ಸಿಗಲಿದೆ. ಸಂವಿಧಾನದ ಕುರಿತು ಚರ್ಚೆ ನಡೆಸುವುದರಿಂದ ಉಳಿದ ಸಮಸ್ಯೆಗಳ ಬಗ್ಗೆ ಚರ್ಚೆಗೆ ತೊಂದರೆಯಾಗಲಿದೆ ಎಂಬ ಅನಿಸಿಕೆ ಸರಿಯಲ್ಲ. ಎಲ್ಲ ಜನಪ್ರತಿನಿಧಿಗಳಿಗೂ ಸಂವಿಧಾನದ ಕಾರ್ಯವೈಖರಿ, ಕಾರ್ಯವ್ಯಾಪ್ತಿ ಬಗ್ಗೆ ಸಂಪೂರ್ಣ ಅರಿವು ಇರುವುದಿಲ್ಲ. ಹೀಗಾಗಿ, ಅನೇಕ ವೇಳೆ ಸಂವಿಧಾನವನ್ನು ತಪ್ಪಾಗಿ ಅರ್ಥೈಸುವ ಅಪಾಯವಿರುತ್ತದೆ. ಈಗ ಸಿಎಎ ವಿರುದ್ಧ ಕೇಳಿ ಬರುತ್ತಿರುವ ಸುಳ್ಳು ಸುದ್ದಿಗಳಿಗೂ ಇದೇ ಕಾರಣ. ಸಂಸದ ಅನಂತಕುಮಾರ ಹೆಗಡೆ ಸಂವಿಧಾನ ಬದಲಾಯಿಸುತ್ತೇವೆ ಎಂದಿದ್ದನ್ನು ಅನೇಕರು ತಪ್ಪಾಗಿ ಗ್ರಹಿಸಿದ್ದಾರೆ. ಇದುವರೆಗೆ ಸಂವಿಧಾನ ಎಷ್ಟು ಬಾರಿ ತಿದ್ದುಪಡಿಯಾಗಿಲ್ಲ ಎಂದು ಪ್ರಶ್ನಿಸಿದರು.
ಬಂಜಾರಾ ಅಕಾಡೆಮಿ:
ಈ ಬಾರಿಯ ಬಜೆಟ್‌ನಲ್ಲಿ ಬಂಜಾರಾ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಘೋಷಣೆ ಮಾಡಲಾಗುವುದು. ಸೂರಗೊಂಡನಕೊಪ್ಪದಲ್ಲಿ ಸೇವಾಲಾಲ್ ಜಯಂತ್ಯುತ್ಸವದಲ್ಲಿ ಬಂಜಾರಾ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ರಚನೆಗೆ ಆ ಸಮುದಾಯದವರಿಂದ ಮನವಿ ಮಾಡಲಾಗಿತ್ತು. ಈ ಬಗ್ಗೆ ಸಿಎಂ ಜತೆ ಚರ್ಚಿಸಿದ್ದೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.