ಬಿಜೆಪಿ ಆಡಳಿತದಲ್ಲಿ ರಾಜ್ಯದಲ್ಲಿ ಸಾಂಸ್ಕೃತಿಕ ಭಯೋತ್ಪಾದನೆ : ಸಿದ್ದರಾಮಯ್ಯ ಕಿಡಿ
ಕುಪ್ಪಳಿಯಿಂದ ತೀರ್ಥಹಳ್ಳಿಯವರೆಗೆ ಪಾದಯಾತ್ರೆ ; ಆರಗ ಜ್ಞಾನೇಂದ್ರ ಅಜ್ಞಾನಿ ಎಂದ ಸಿದ್ದು
Team Udayavani, Jun 15, 2022, 6:16 PM IST
ತೀರ್ಥಹಳ್ಳಿ : ಭಾರತೀಯ ಜನತಾ ಪಕ್ಷದ ಆಡಳಿತದಲ್ಲಿ ರಾಜ್ಯದಲ್ಲಿ ಸಾಂಸ್ಕೃತಿಕ ಭಯೋತ್ಪಾದನೆ ನಡೆಯುತ್ತಿದ್ದು ಇದರ ವಿರುದ್ದ ಕನ್ನಡಿಗರು ಹೋರಾಟ ಮಾಡಬೇಕಾದ ಅನಿವಾರ್ಯತೆಯಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ರೋಹಿತ್ ಚಕ್ರವರ್ತಿ ನೇತೃತ್ವದ ಪಠ್ಯ ಪರಿಷ್ಕರಣ ಸಮಿತಿ ರಚಿಸಿರುವ ಪಠ್ಯಕ್ರಮವನ್ನು ವಜಾಗೊಳಿಸುವಂತೆ ಆಗ್ರಹಿಸಿ ಬುಧವಾರ ಕುಪ್ಪಳಿಯಿಂದ ತೀರ್ಥಹಳ್ಳಿಯವರೆಗೆ ನಡೆದ ಪಾದಯಾತ್ರೆಯ ಮುಕ್ತಾಯದಲ್ಲಿ ಪಟ್ಟಣದ ಸಂಸ್ಕೃತಿ ಮಂದಿರದ ಎದುರು ನಡೆದ ಸಭೆಯಲ್ಲಿ ಮಾತನಾಡಿ, ಕನ್ನಡದ ಅಸ್ಮಿತೆಗೆ ಧಕ್ಕೆಯುಂಟಾಗುವ ಸಂದರ್ಭ ಎದುರಾದಾಗ ಪಕ್ಷಾತೀತವಾಗಿ ಹೋರಾಟ ನಡೆಸಬೇಕಿದೆ. ಮಾಜಿ ಸಚಿವ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ನಡೆದಿರುವ ಈ ಪಾದಯಾತ್ರೆ ಇದಕ್ಕೆ ಮಾದರಿಯಾಗಿದ್ದು ಇಂದಿಲ್ಲಿ ಆರಂಭಗೊಂಡಿರುವ ಹೋರಾಟ
ನಿರಂತರವಾಗಿ ಮುಂದುವರೆಯಬೇಕಿದೆ ಎಂದರು.
ಸಂವಿಧಾನದ ಬಗ್ಗೆ ಗೌರವ ಇಲ್ಲದ ಮನುವಾದಿ ಸಂಘಪರಿವಾರದವರಿಗೆ ಸಮಾನತೆ, ಜಾತ್ಯಾತೀತತೆ,ಸಮಾನ ಅವಕಾಶಗಳು ಬೇಕಿಲ್ಲಾ. ಮಹಾಪುರುಷರ ಚರಿತೆಯನ್ನೇ ತಿರುಚಿ ಮಕ್ಕಳಿಗೆ ವಿಷ ಉಣಿಸುವ ಪ್ರಯತ್ನ ನಡೆದಿದೆ. ಪಠ್ಯ ಪರಿಷ್ಕರಣ ಸಮಿತಿಯನ್ನು ವಿಸರ್ಜನೆ ಮಾಡಿದರೆ ಸಾಲದು. ಪಠ್ಯಕ್ರಮವನ್ನೂ ಕೈ ಬಿಡಬೇಕು. ಮಕ್ಕಳಿಗೆ ವಿದ್ಯೆ ಕಲಿಸುವುದಕ್ಕೆ ಶಿಕ್ಷಣ ಸಚಿವ ನಾಗೇಶ್ ಯೋಗ್ಯರಲ್ಲಾ ಎಂದೂ ಹೇಳಿದರು.
ಗೃಹ ಸಚಿವ ಆರಗ ಜ್ಞಾನೇಂದ್ರರನ್ನು ಅಜ್ಞಾನಿ ಎಂದು ಟೀಕಿಸಿದ ಮಾಜಿ ಸಿಎಂ, 40 ವರ್ಷಗಳ ನನ್ನ ರಾಜಕೀಯ ಜೀವನದಲ್ಲಿ ಇವರಂತ ಅಸಮರ್ಥ ಗೃಹ ಸಚಿವರನ್ನು ನೋಡಿಲ್ಲಾ. ಕಿಮ್ಮನೆ ರತ್ನಾಕರ್ ರಾಜ್ಯ ಕಂಡ ಕೆಲವೇ ರಾಜಕಾರಣಿಗಳಲ್ಲಿ ಒಬ್ಬ ಯೋಗ್ಯ ಮತ್ತು ಸಜ್ಜನ ರಾಜಕಾರಣಿಯಾಗಿದ್ದಾರೆ.ಗ್ರಾಪಂ ಸದಸ್ಯ ಕೂಡಾ ಅಧಿಕಾರ ಬಿಟ್ಟು ಕೊಡದ ಈ ಕಾಲದಲ್ಲಿ ತಮಗೆ ದೊರೆತಿದ್ದ ಸಚಿವ ಸ್ಥಾನವನ್ನು ಬಿಟ್ಟುಕೊಟ್ಟಿದ್ದರು ಎಂದರು.
ಸಮಾರಂಭವನ್ನು ಉದ್ಘಾಟಿಸಿದ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷ ಪ್ರೊ ಜಿ.ಎಸ್.ಸಿದ್ದರಾಮಯ್ಯ, ನೂರಾರು ವರ್ಷಗಳಿಂದ ಶಿಕ್ಷಣ ವಂಚಿತರಾಗಿರುವ ಹಳ್ಳಿಗಾಡಿನ ಮಕ್ಕಳನ್ನು ಶಿಕ್ಷಣ ವಂಚಿತರನ್ನಾಗಿ ಮಾಡುತ್ತಿರುವುದಕ್ಕೆ ಆಳುವವರು ನಾಚಿಕೆ ಪಡಬೇಕಿದೆ. ದೇಶ ಕಟ್ಟುವ ಮನಸ್ಸುಗಳಿಗೆ ದೇಶಪ್ರೇಮದ ಹೆಸರಿನಲ್ಲಿ ಮಾನಸಿಕ ಕೊಳಚೆಯಾದ ದ್ವೇಷವನ್ನು ಬಿತ್ತುವ ಪ್ರಯತ್ನ ಅಪಾಯಕಾರಿಯಾಗಿದೆ. ಕರ್ನಾಟಕದ ಸಾರ್ವಭೌಮತೆಯ ಅಸ್ಮಿತೆಯನ್ನು ಸಾರುವ ನಾಡಗೀತೆಯನ್ನೇ ಅಪಮಾನಗೊಳಿಸಿರುವ ವಿಕಾರ ಮನಸ್ಸಿನ ವ್ಯಕ್ತಿಯನ್ನು ಸಮರ್ಥಿಸಿಕೊಳ್ಳುವ ಈ ಸರ್ಕಾರಕ್ಕೆ ನಾಡಗೀತೆಯನ್ನು ಹಾಡುವ ನೈತಿಕತೆಯೂ ಇಲ್ಲವಾಗಿದೆ ಎಂದೂ ಹೇಳಿದರು.
ಮಾಜಿ ಸಭಾಪತಿ ರಮೇಶ್‌ಕುಮಾರ್ ಮಾತನಾಡಿ, ನೇರವಾಗಿ ಸಂವಿಧಾನವನ್ನು ಮುಟ್ಟುವ ಧೈರ್ಯವಿಲ್ಲದ ಬಿಜೆಪಿ ಅನ್ಯಮಾರ್ಗದಿಂದ ಜನರ ಮನಸ್ಸನ್ನು ಕೆಡಿಸುವ ಕೆಲಸ ಮಾಡುತ್ತಿದೆ. ಮಾನವ ನಿರ್ಮಿತ ವಿನಾಶಕಾರಿ ಜಾತಿ ವ್ಯವಸ್ಥೆಯಲ್ಲಿ ವೈಚಾರಿಕ ದಾರಿದ್ರ್ಯದಿಂದ ನರಳುತ್ತಿರುವ ನಾವು ಈ ನೆಲದ ಕುವೆಂಪು, ಕಡಿದಾಳು ಮಂಜಪ್ಪ, ಶಾಂತವೇರಿ ಮುಂತಾದವರ ಹೆಸರು ಹೇಳುವ ಅರ್ಹತೆಯನ್ನು ಕಳೆದುಕೊಂಡಿದ್ದೇವೆ. ಆದರೆ
ಮಾಜಿ ಸಿಎಂ ಸಿದ್ದರಾಮಯ್ಯನವರು ಮಾತ್ರ ನಿರ್ಭಯವಾಗಿ ನೈತಿಕತೆಯ ಬಗ್ಗೆ ಮಾತನಾಡುವ ಅರ್ಹತೆಯನ್ನು ಉಳಿಸಿಕೊಂಡಿದ್ದಾರೆ ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಕಾರ್ಯಕ್ರಮದ ಆಯೋಜಕ ಕಿಮ್ಮನೆ ರತ್ನಾಕರ್, ಪ್ರಗತಿಪರ ಚಿಂತಕರು,ಸಾಹಿತಿಗಳ ಸಹಕಾರದೊಂದಿಗೆ ನಡೆಯುತ್ತಿರುವ ಈ ಕಾರ್ಯಕ್ರಮ ಇಡೀ ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಒಂದು ಕೋಟಿ ಮಕ್ಕಳ ಮನಸ್ಸನ್ನು ಕೆಡಿಸುವ ಈ ಪ್ರಕರಣದ ಬಗ್ಗೆ ನಾಡಿನ ಚಿಂತಕರು ಮುಂದಾದಲ್ಲಿ ಈ ಸರ್ಕಾರ ತಕ್ಕ ಬೆಲೆಯನ್ನು ನೀಡಬೇಕಾದ ಸ್ಥಿತಿ ನಿರ್ಮಾಣವಾಗಲಿದೆ ಎಂದರು.
ಈ ಸಂದರ್ಭದಲ್ಲಿ ವಿಶ್ವಮಾನವ ವೇದಿಕೆಯ ಸಂಚಾಲಕ ಕಡಿದಾಳು ದಯಾನಂದ್, ಡಾ.ನಾ ಡಿಸೋಜಾ, ಮಾಜಿ ಶಾಸಕ ವೈ.ಎಸ್.ವಿ.ದತ್ತಾ, ರೈತ ಮುಖಂಡರಾದ ಕೆ.ಟಿ.ಗಂಗಾಧರ್ ಹಾಗೂ ಬಸವರಾಜಪ್ಪ, ಶಿಕ್ಷಣ ತಜ್ಞ ನಿರಂಜನ ಆರಾಧ್ಯ, ಎಚ್.ಎಸ್. ಸುಂದರೇಶ್ ಮುಂತಾದವರು ವೇದಿಕೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.