ತಂಬಾಕಿನ ಉತ್ಪನ್ನ ಬಳಕೆಗೆ ಕಡಿವಾಣ-ಜಾಗೃತಿ ಅತ್ಯಗತ್ಯ
ಗಾಂಜಾ ಬೆಳೆಯುವ ಮೂಲಕ ಕಾನೂನು ಉಲ್ಲಂಘಿಸುತ್ತಿರುವುದು ಕಂಡು ಬರುತ್ತಿದೆ.
Team Udayavani, Nov 23, 2022, 6:39 PM IST
ಶಿವಮೊಗ್ಗ: ಮನುಷ್ಯನನ್ನು ಹೊರತುಪಡಿಸಿ ಮತ್ತಾವ ಪ್ರಾಣಿಯೂ ತಂಬಾಕನ್ನು ತಿನ್ನುವುದಿಲ್ಲ. ಇಂತಹ ಹಾನಿಕಾರಕ ತಂಬಾಕಿನ ಉತ್ಪನ್ನಗಳಿಂದ ನಾವೆಲ್ಲ ದೂರ ಇರಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ತಿಳಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ ಮತ್ತು ಜಿ.ಪಂ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಆಶ್ರಯದಲ್ಲಿ ನ.21 ರಂದು ಜಿಲ್ಲಾ ತರಬೇತಿ ಕೇಂದ್ರದಲ್ಲಿ ಸಮುದಾಯ ಆರೋಗ್ಯಾಧಿ ಕಾರಿಗಳಿಗೆ ಏರ್ಪಡಿಸಲಾಗಿದ್ದ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಎಲ್ಲಿಯವರೆಗೆ ನಾವು ಒಳ್ಳೆಯ ವರಾಗುವುದಿಲ್ಲವೋ ಅಲ್ಲಿಯವರೆಗೆ ಎಷ್ಟೇ ಒಳ್ಳೆಯ ಕಾನೂನು ತಂದರೂ ಪರಿಣಾಮಕಾರಿಯಾಗಿ ಅದು ಜಾರಿಯಾಗುವುದಿಲ್ಲ. ಆದ್ದರಿಂದ ನಾವೆಲ್ಲ ಪ್ರಜ್ಞಾವಂತರಾಗಿ ಕಾನೂನು, ನಿಯಮಗಳನ್ನು ಅನುಸರಿಸಬೇಕು. ಮುಖ್ಯವಾಗಿ ಮಕ್ಕಳನ್ನು ತಂಬಾಕು ವಸ್ತುಗಳಿಂದ ದೂರವಿಡಬೇಕು ಎಂದರು.
ತಂಬಾಕು ಬಳಕೆ ಕುರಿತಾಗಿ ಅನೇಕ ರೀತಿಯ ನಿರ್ಬಂಧಗಳಿದ್ದರೂ ಜನ ಅದಕ್ಕೆ ಹೆದರುತ್ತಿಲ್ಲ. ಕೆಲವು ಮೆಡಿಸಿನ್ ತಯಾರಿಕೆಗೆ ಮಾತ್ರ ತಂಬಾಕು ಬೆಳೆಯಲು ಅನುಮತಿ ಇದೆ. ಆದರೆ ಬಗರ್ ಹುಕುಂ ಜಮೀನು, ಅರಣ್ಯ ಭೂಮಿಯಲ್ಲಿ ಅಕ್ರಮವಾಗಿ ತಂಬಾಕು ಬೆಳೆಯಲಾಗುತ್ತಿದೆ. ಆದರೆ ಜನ ಹೆದರಿಕೊಂಡು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡುತ್ತಿಲ್ಲ. ಜಿಲ್ಲೆಯಲ್ಲಿ ತಂಬಾಕು ಪ್ರಕರಣಗಳು ಹೆಚ್ಚಾಗುತ್ತಿದ್ದು ಅದಕ್ಕೆ ಕಡಿವಾಣ ಹಾಕಬೇಕು ಎಂದರು.
ಅಪರ ಜಿಲ್ಲಾಧಿಕಾರಿ ಡಾ|ನಾಗೇಂದ್ರ ಎಫ್ ಹೊನ್ನಳ್ಳಿ ಮಾತನಾಡಿ, ಸುಶಿಕ್ಷಿತರೆನಿಸಿಕೊಂಡ ವ್ಯಕ್ತಿಗಳೇ ಶಾಲಾ ಅವಧಿ ಮುಗಿದ ನಂತರ ಶಾಲಾ ಆವರಣದಲ್ಲಿ ತಂಬಾಕು, ಮದ್ಯಪಾನ, ಧೂಮಪಾನ, ಇನ್ನಿತರೆ ಮಾದಕ ವಸ್ತುಗಳನ್ನು ಸೇವನೆ ಮಾಡುವ ಮೂಲಕ ವಿಕೃತ ಮನಸ್ಥಿತಿ ಬೆಳೆಸಿಕೊಂಡಿರುವುದು ವಿಷಾದಕರ ಎಂದರು.
ಪೊಲೀಸ್ ಉಪ ಅಧಿಕ್ಷಕರಾದ ಪ್ರಭು ಮಾತನಾಡಿ, ಇಂದಿಗೂ ಸಹ ಕೆಲ ರೈತರು ಜಮೀನುಗಳಲ್ಲಿ ಗಾಂಜಾ ಬೆಳೆಯುವ ಮೂಲಕ ಕಾನೂನು ಉಲ್ಲಂಘಿಸುತ್ತಿರುವುದು ಕಂಡು ಬರುತ್ತಿದೆ. ಒಂದೆಡೆ ಈ ತಂಬಾಕು ದುಷ್ಪರಿಣಾಮದ ಬಗ್ಗೆ ಅರಿವು ಕಾರ್ಯಾಗಾರ ಮಾಡುತ್ತಿದ್ದು ಮತ್ತೂಂದೆಡೆ ಜನ ಇಂತಹ ಕೃತ್ಯಗಳಲ್ಲಿ ತೊಡಗಿರುವುದು ವಿಪರ್ಯಾಸ ಎಂದರು.
ಅಧ್ಯಕ್ಷತೆ ವಹಿಸಿದ್ದ ಡಿಎಚ್‌ಒ ಡಾ|ರಾಜೇಶ್ ಸುರಗಿಹಳ್ಳಿ ಮಾತನಾಡಿ, ತಂಬಾಕು ದುಷ್ಪರಿಣಾಮಗಳ ಕುರಿತು ಸಮುದಾಯದಲ್ಲಿ ಅರಿವು ಮೂಡಿಸುವ ಮಹತ್ವದ ಜವಾಬ್ದಾರಿ ಸಮುದಾಯ ಆರೋಗ್ಯ ಅಧಿಕಾರಿಗಳ ಮೇಲಿದ್ದು ಸಮರ್ಪಕವಾಗಿ ನಿಭಾಯಿಸುವ ಮೂಲಕ ಸಮಾಜದ ಸ್ವಾಸ್ಥ್ಯ ಕಾಪಾಡಬೇಕು ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಜಣ್ಣ ಸಂಕಣ್ಣನವರ್, ಆರ್‌ಸಿಎಚ್‌ಒ ಡಾ|ನಾಗರಾಜ ನಾಯ್ಕ, ಜಿಲ್ಲಾ ಸರ್ವೇಕ್ಷಣಾಧಿ ಕಾರಿ ಡಾ|ಓ.ಮಲ್ಲಪ್ಪ, ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಹೇಮಂತ್ ರಾಜ್, ಶಿವಕುಮಾರ್ ಎಸ್.ಟಿ., ರವಿರಾಜ್ ಇತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
B. Y. Raghavendra: 10 ವರ್ಷದಲ್ಲಿ ವಕ್ಫ್ ಆಸ್ತಿ ಶೇ.135 ಹೆಚ್ಚಳ
Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿಟ್ಟು ವ್ಯಕ್ತಿ ನಾಪತ್ತೆ ಪ್ರಕರಣ; ಶವ ಪತ್ತೆ
ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?
Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.