ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕಿ
Team Udayavani, Apr 30, 2019, 5:23 PM IST
ಹೊಸನಗರ: ತಾಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ದಂಧೆ ಕುರಿತು ಅಧಿಕಾರಿಗಳು ಸೂಕ್ತ ಕ್ರಮ ಜರುಗಿಸಬೇಕು ಎಂದು ಶಾಸಕ ಹರತಾಳು ಹಾಲಪ್ಪ ಸೂಚಿಸಿದರು.
ತಾಲ್ಲೂಕಿನಲ್ಲಿ ಅಕ್ರಮ ಮರಳುಗಾರಿಕೆ ಮತ್ತು ಅಕ್ರಮ ದಂಧೆ ವ್ಯಾಪಕವಾಗಿ ನಡೆಯುತ್ತಿರುವ ಬಗ್ಗೆ ಇಲ್ಲಿನ ತಾಲೂಕು ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದ ಶಾಸಕರು ತಾಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ಮರಳು ಎತ್ತುವಳಿ ಮತ್ತು ಸಾಗಾಟಕ್ಕೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ತಾಲೂಕಿನ ಹರಿಯುವ ಶರಾವತಿ ಮತ್ತು ಅದರ ಉಪನದಿಗಳ ಪಾತ್ರದಲ್ಲಿ ಅಕ್ರಮವಾಗಿ ಮರಳುದಂಧೆ ನಡೆಯುತ್ತಿದೆ. ಯಾವುದೇ ಪರವಾನಗಿ ಇಲ್ಲಿದೆ ಎಗ್ಗಿಲ್ಲದೆ ಮರಳು ದಂಧೆ ನಡೆಯುತ್ತಿದೆ. ಮರಳು ದಂಧೆಕೋರರು ಕಳ್ಳದಾರಿ ಸೇರಿದಂತೆ ರಾಜಮಾರ್ಗದಲ್ಲಿಯೇ ಸಾಗಾಟ ನಡೆಸುತ್ತಿದ್ದಾರೆ. ಇಲ್ಲಿ ಅಧಿಕಾರಿಗಳ ಭಯವಿಲ್ಲವಾಗಿದೆ. ಆದ್ದರಿಂದ ಬಡವರು ರೈತರು ಗೃಹೋಪಯೋಗಿ ಕೆಲಸಕ್ಕೆ ಮರಳು ಲಭ್ಯವಾಗುತ್ತಿಲ್ಲ. ತಾಲೂಕಿನ ವಿವಿಧೆಡೆಗಳಲ್ಲಿ ನಡೆಯುತ್ತಿರುವ ಅಕ್ರಮ ತಡೆಯಲೇಬೇಕು ಎಂದರು.
ಅವೈಜ್ಞಾನಿಕ ಕ್ರಮ: ತಾಲೂಕಿನ ಮರಳುಗಾರಿಕೆ ಯಾರ್ಡ್‌ಗಳಲ್ಲಿ ಅವೈಜ್ಞಾನಿಕ ಕ್ರಮ ಜಾರಿಯಲ್ಲಿದೆ. ಭಾರೀ ಗಾತ್ರದ ಯಂತ್ರಗಳನ್ನು ಬಳಸಲಾಗುತ್ತಿದೆ. ಇದರಿಂದ ನದಿ ಪಾತ್ರಕ್ಕೆ ಧಕ್ಕೆಯಾಗಲಿದೆ. ಅಲ್ಲದೆ ನದಿ ಸುತ್ತ ಮುತ್ತಲ ಪ್ರದೇಶದ ಅಂತರ್ಜಲ ಬತ್ತುವ ಭೀತಿ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ತಾಲೂಕಿನಲ್ಲಿ ಮೂರು ಮರಳು ಗಣಿಗಾರಿಕೆ ಕ್ವಾರಿಗಳಿವೆ. ಇಲ್ಲಿ ಯಾವೊಂದು ಕ್ವಾರಿಯೂ ನಿಯಮ ಪಾಲಿಸುತ್ತಿಲ್ಲ. ಇತ್ತ ಅಧಿಕಾರಿಗಳು ತಿರುಗಿ ನೋಡುತ್ತಿಲ್ಲ ಎಂದರೆ ಏನು ಅರ್ಥ. ಇಲಾಖೆ ಇತ್ತ ಗಮನ ನೀಡಿ ತಪ್ಪಿತಸ್ಥ ಮರಳು ಗಣಿಗಾರಿಕೆ ವಿರುದ್ಧ ಕ್ರಮ ಜರುಗಿಸಬೇಕು ಎಂದು ಸೂಚಿಸಿದರು.
ಸರಕಾರಿ ಯಾರ್ಡ್ ರಚಿಸಿ: ತಾಲೂಕಿನಲ್ಲಿ ಖಾಸಗಿ ವ್ಯಕ್ತಿಗಳ ಮರಳು ಗಣಿಗಾರಿಕೆ ಕ್ವಾರಿಗಳಿಗೆ ಎಲ್ಲಾ ತೆರನಾದ ಸೌಲಭ್ಯ ದೊರಕುತ್ತಿದೆ. ಯಾರ್ಡ್ ನಿರ್ಮಾಣಕ್ಕೆ ಸ್ಥಳಾವಕಾಶ, ಪರವಾನಗಿ ಅಡೆತಡೆಗಳು ನಿವಾರಣೆ ಆಗುತ್ತಿವೆ. ಅಧಿಕಾರಿಗಳು ಈ ಬಗ್ಗೆ ಹೆಚ್ಚಿನ ನಿಗಾ ವಹಿಸುತ್ತಾರೆ ಎಂದರು.
ಸರಕಾರಿ ಮರಳು ಯಾರ್ಡ್ ನಿರ್ಮಾಣ ಇನ್ನೂ ನನೆಗುದಿಯಲ್ಲಿಯೇ ಇದೆ. ಇದಕ್ಕೆ ಇನ್ನೂ ಸ್ಥಳಾವಕಾಶ ಸಾಧ್ಯವಾಗಿಲ್ಲ. ತಾಲ್ಲೂಕಿನಲ್ಲಿ ಬಹುಬೇಗ ಸರಕಾರಿ ಮರಳು ಯಾರ್ಡ್ ನಿರ್ಮಾಣ ಆಗಬೇಕು ಎಂದು ತಿಳಿಸಿದರು.
ಸರಕಾರಿ ಮರಳು ಯಾರ್ಡ್ ನಿರ್ಮಾಣವಾದಲ್ಲಿ ಅಕ್ರಮ ಮರಳು ವಹಿವಾಟು ದಂಧೆಗೆ ಕಡಿವಾಣ ಹಾಕಬಹುದಾಗಿದೆ. ಇತ್ತ ಅಧಿಕಾರಿಗಳು ಗಮನ ಹರಿಸಿ ವಾರದೊಳಗೆ ವರದಿ ಕೊಡಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ತಹಶೀಲ್ದಾರ್ ಎಂ. ಸಿದ್ದೇಶ್, ಗಣಿ ಮತ್ತು ಭೂ ವಿಜ್ಞನ ಇಲಾಖೆಯ ಅಧಿಕಾರಿ ರಶ್ಮಿ, ಲೋಕೋಪಯೋಗಿ ಇಲಾಖೆ ಎಇಇ ಶೇಷಪ್ಪ, ತಾಪಂ ಇಒ ಡಾ| ರಾಮಚಂದ್ರ ಭಟ್, ಜಿಪಂ ಎಇಇ ಹಾಲೇಶಪ್ಪ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ರಿಪ್ಪನ್ ಪೇಟೆ ಸಮೀಪ ಹಿಟ್ ಅಂಡ್ ರನ್; ಬೈಕ್ ಸವಾರ ಸಾವು
Shivamogga: ಮುಂದುವರಿದ ಕರಡಿಗಳ ಹಾವಳಿ; ಸ್ಥಳೀಯರಲ್ಲಿ ತೀವ್ರ ಆತಂಕ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Shimoga: ಮೊಬೈಲ್ ಕೊಡದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ಟಿಟಿ ರೋಡ್‌ನಲ್ಲಿವೆ 4 ಬಾವಿ; ನೀರಿದೆ, ನಿರ್ವಹಣೆಯೇ ಇಲ್ಲ!
Sandalwood: ಭೂಗತ ಲೋಕದತ್ತ ʼಕ್ಯಾಪಿಟಲ್ ಸಿಟಿʼ
Vijay Hazare Trophy; ಅಭಿನವ್ ಮನೋಹರ್ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ
Udupi: ದೊಡ್ಡಣ್ಣ ಗುಡ್ಡೆ ದೇವಸ್ಥಾನ; ಕಲ್ಕುಡ-ಕಲ್ಲುರ್ಟಿ ದೈವಗಳ ನೂತನ ಗುಡಿಗೆ ಶಿಲಾನ್ಯಾಸ
Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.