ಎಂಪಿಎಂ ಪುನಶ್ಚೇತನಕ್ಕೆ ನಿರ್ಧಾರ
Team Udayavani, Jun 7, 2020, 7:51 AM IST
ಶಿವಮೊಗ್ಗ: ಜಿಲ್ಲೆಯ ಪ್ರತಿಷ್ಠಿತ ಕಾರ್ಖಾನೆಗಳಲ್ಲಿ ಒಂದಾಗಿದ್ದ ಭದ್ರಾವತಿಯ ಮೈಸೂರು ಕಾಗದ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯ ಸಭೆಯಲ್ಲಿ ಶನಿವಾರ ಮಹತ್ವದ ನಿರ್ಧಾರ ಕೈಗೊಳ್ಳಲಾಯಿತು.
ಈ ಸಂಬಂಧ ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿದ್ದ ಅರಣ್ಯ ಮತ್ತು ಕೈಗಾರಿಕಾ ಇಲಾಖೆ ಸೇರಿದಂತೆ ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಸ್ಥಗಿತಗೊಂಡಿದ್ದ ಎಂ.ಪಿ.ಎಂ. ಕಾಗದ ಕಾರ್ಖಾನೆಯನ್ನು ಪುನರಾರಂಭಿಸಲು ರೂಪುರೇಷೆಗಳನ್ನು ಸಿದ್ಧಪಡಿಸಿ, ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ಇರುವ ಅರಣ್ಯ ಸಂಪತ್ತನ್ನು ಬಳಸಿಕೊಂಡು ಕಾರ್ಖಾನೆಯನ್ನು ಸುಸ್ಥಿತಿಯಲ್ಲಿ ಮುಂದುವರಿಸಿಕೊಂಡು ಹೋಗುವಂತೆ ಅವರು ಅ ಧಿಕಾರಿಗಳಿಗೆ ಸೂಚಿಸಿದರು. ಕಾರ್ಖಾನೆಯನ್ನು ಪುನರಾರಂಭಿಸುವ ಸಂಬಂಧ ಸಂಸದ ಬಿ.ವೈ. ರಾಘವೇಂದ್ರ ಅವರು ಮುಖ್ಯಮಂತ್ರಿಗಳ ಗಮನ ಸೆಳೆದು ಒತ್ತಾಯಿಸಿದ್ದರು. ಸಭೆಯಲ್ಲಿ ಸಂಸದ ಬಿ.ವೈ. ರಾಘವೇಂದ್ರ , ಅರಣ್ಯ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಸಂದೀಪ್‌ಗದೆ, ಕೈಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗೌರವ ಗುಪ್ತಾ, ಡಿಸಿಸಿಎಫ್ ಸಂಜಯ್ ಮೋಹನ್, ಆರ್ಥಿಕ ಇಲಾಖೆಯ ಕಾರ್ಯದರ್ಶಿ ಏಕರೂಪ ಕೌರ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಭೀಕರ ಅಪಘಾತ… ರಿಕ್ಷಾ ಚಾಲಕ ಸೇರಿ ಇಬ್ಬರು ಮೃತ್ಯು, ಮೂವರಿಗೆ ಗಾಯ
Anandapura: ಬಟ್ಟೆ ತೊಳೆಯಲು ಹೋದ ಮಹಿಳೆ ಕೆರೆಗೆ ಬಿದ್ದು ಮೃತ್ಯು
Hosanagara: ಬಿಸಿ ಟೀ ಮೈ ಮೇಲೆ ಬಿದ್ದು ಗಂಭೀರ ಗಾಯಗೊಂಡಿದ್ದ ಎರಡು ವರ್ಷದ ಮಗು ಸಾವು
Anandapura: ಚಾಲಕನ ನಿಯಂತ್ರಣ ತಪ್ಪಿದ ಬಸ್; ಹಲವರಿಗೆ ಗಾಯ
Hosanagara: ಹಾಡುಹಗಲೇ ಮನೆಯ ಬೀಗ ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.