ಸಿಂಪಿ ಸಮಾಜದಿಂದ ಶಿಸ್ತುಬದ್ಧ ಜೀವನ: ಹಾಲಪ್ಪ
Team Udayavani, Jun 8, 2018, 5:35 PM IST
ಸಾಗರ: ರಾಜ್ಯದ ಹಿಂದುಳಿದ ವರ್ಗದಲ್ಲಿ ಸಿಂಪಿ ನಾಮದೇವ ಸಮಾಜ ಸಹ ಒಂದಾಗಿದೆ. ಆದರೆ ಸಾಗರದಲ್ಲಿ ಸಣ್ಣ ಜನಸಂಖ್ಯೆ ಹೊಂದಿರುವ ಸಿಂಪಿ ಸಮಾಜ ಅತ್ಯಂತ ಶಿಸ್ತುಬದ್ಧ ಜೀವನ ನಡೆಸುತ್ತಿದೆ ಎಂದು ಶಾಸಕ ಹರತಾಳು ಹಾಲಪ್ಪ ಮೆಚ್ಚುಗೆ ವ್ಯಕ್ತಪಡಿಸಿದರು.
ನಗರದ ಅಶೋಕ ರಸ್ತೆಯಲ್ಲಿರುವ ಹರಿಮಂದಿರದಲ್ಲಿ ಬುಧವಾರ ನಾಮದೇವ ಸಿಂಪಿ ಸಮಾಜದ ವತಿಯಿಂದ ನೀಡಲಾದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಸಿಂಪಿ ಸಮಾಜ ಹಿಂದಿನಿಂದಲೂ ಬಿಜೆಪಿಯನ್ನು ಬೆಂಬಲಿಸಿಕೊಂಡು ಬಂದಿದ್ದು, ಈ ಬಾರಿ ಸಹ ಅದನ್ನು ಮುಂದುವರಿಸಿದೆ. ಈ ಹಿನ್ನೆಲೆಯಲ್ಲಿ ನೀವು ಅಭಿನಂದಿಸುವುದಕ್ಕಿಂತ ನಾನು ನಿಮ್ಮನ್ನು ಅಭಿನಂದಿಸುವುದೇ ಸೂಕ್ತ ಎಂದು ಹೇಳಿದರು. ರಾಜ್ಯದಲ್ಲಿ ಹಿಂದುಳಿದ ಸಮಾಜ ದೊಡ್ಡ ಪ್ರಮಾಣದಲ್ಲಿದೆ. ತಾಲೂಕಿನಲ್ಲಿ ಸಹ ಹಿಂದುಳಿದ ಸಮಾಜದ ಬಹುಸಂಖ್ಯಾತರು ಎನಿಸಿಕೊಂಡವರು ಸರ್ಕಾರದ ಬಹುತೇಕ ಸೌಲಭ್ಯಗಳನ್ನು ತಮ್ಮದಾಗಿಸಿಕೊಂಡು ಬಿಡುತ್ತಾರೆ. ಆದರೆ ನನ್ನ ಅವ ಧಿಯಲ್ಲಿ
ಅಂತಹ ಅಚಾತುರ್ಯ ನಡೆಯಲು ಅವಕಾಶ ಕೊಡುವುದಿಲ್ಲ. ಎಲ್ಲ ಜನಾಂಗಕ್ಕೂ ಸರ್ಕಾರದ ಯೋಜನೆ ಸಮಪ್ರಮಾಣದಲ್ಲಿ ಹಂಚಿಕೆಯಾಗುವಂತೆ ನಿಗಾ ವಹಿಸಲಾಗುತ್ತದೆ. ಜೊತೆಗೆ ಸಮುದಾಯ ಭವನ ನಿರ್ಮಾಣ ಮಾಡುವ ನಿಮ್ಮ ಆಶಯಕ್ಕೆ ಸ್ಪಂದಿಸುವುದಾಗಿ ಭರವಸೆ ನೀಡಿದರು.
ನಾಮದೇವ ಸಿಂಪಿ ಸಮಾಜದ ಅಧ್ಯಕ್ಷ ಕಾಶಿನಾಥ ಚೌಧರಿ ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಸದಸ್ಯ ಸಂತೋಷ್ ಆರ್. ಶೇಟ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಟಿ.ಡಿ. ಮೇಘರಾಜ್, ಕಾರ್ಯದರ್ಶಿ ಚೇತನರಾಜ್ ಕಣ್ಣೂರು, ಕೃಷ್ಣಮೂರ್ತಿ ಬೆನ್ನೂರು ಇದ್ದರು. ಗಣೇಶ್ ಚೌಧರಿ ಸ್ವಾಗತಿಸಿದರು. ದಿಲೀಪ್ ಚೌಧರಿ ವಂದಿಸಿದರು. ಪವನ್
ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Shimoga: ಮೊಬೈಲ್ ಕೊಡದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ
Holehonnur: ಎರಡು ಪ್ರತ್ಯೇಕ ರಸ್ತೆ ಅಪಘಾತ
Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್; ಕುಟುಂಬದ 4 ಫೌಂಡೇಶನ್ ಆಸ್ತಿ ಹಂಚಿಕೆ
Tribute Dr.Singh: ಡಾ.ಸಿಂಗ್ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ
Supreme Court: ಕ್ರೆಡಿಟ್ ಕಾರ್ಡ್ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!
Tribute Dr.Singh: ಆರ್ಥಿಕ ಭಾಗ್ಯ ವಿಧಾತ…ಡಾ.ಮನಮೋಹನ್ ಸಿಂಗ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.