ಪ್ರಕೃತಿ ವಿಕೋಪ ನಿಧಿಯಡಿರೂ.39.54 ಲಕ್ಷ ಪರಿಹಾರ ವಿತರಣೆ
Team Udayavani, Sep 3, 2018, 5:04 PM IST
ಹೊಸನಗರ: ತಾಲೂಕಿನಲ್ಲಿ ಅಕಾಲಿಕ ಮಳೆಯಿಂದಾಗಿ ಪ್ರಕೃತಿ ವಿಕೋಪದ ನಿಧಿಯಲ್ಲಿ ಸುಮಾರು ರೂ.39.54
ಲಕ್ಷ ರೂ. ಪರಿಹಾರ ಧನ ನೀಡಲಾಗಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ತಾಪಂ ಸಭಾಂಗಣದಲ್ಲಿ ಪ್ರಕೃತಿ ವಿಕೋಪ ನಿಧಿಯಲ್ಲಿ ಫಲಾನುಭವಿಗಳಿಗೆ ಪರಿಹಾರ ಧನದ ಚೆಕ್ ವಿತರಿಸಿ
ಅವರು ಮಾತನಾಡಿದರು. ನಗರ ಹೋಬಳಿಯಲ್ಲಿ ಅತಿ ಹೆಚ್ಚು ಹಾನಿಯಾಗಿದ್ದು, 44 ಮನೆಗಳು, 180 ಎಕರೆ ಕೃಷಿ ಜಮೀನು, 161 ಎಕರೆ ಅಡಕೆ ತೋಟ ಹಾನಿ. 4 ಪ್ರಾಣಿ ನಾಶ ಸೇರಿದಂತೆ ಒಟ್ಟು ರೂ.22.24 ಲಕ್ಷ ಪರಿಹಾರ ವಿತರಿಸಲಾಗಿದೆ ಎಂದರು.
ಹುಂಚಾ ಹೋಬಳಿಯಲ್ಲಿ 7 ಮನೆ, 28 ಎಕರೆ ಕೃಷಿ ಜಮೀನು, 2 ಎಕರೆ ಅಡಕೆ ತೋಟ, 4 ಪ್ರಾಣಿನಾಶ ಎಲ್ಲಾ
ಸೇರಿ ಒಟ್ಟು ರೂ.2.17 ಲಕ್ಷ ನೀಡಲಾಗಿದೆ ಎಂದರು. ಶಾಸಕ ಹರತಾಳು ಹಾಲಪ್ಪ ಮಾಹಿತಿ ನೀಡಿ, ಕಸಬಾ
ಹೋಬಳಿಯಲ್ಲಿ ಕಾಲು ಸಂಕ ದಾಟುವಾಗ ಕಾಲು ಜಾರಿ ಆಕಸ್ಮಿಕ ಮರಣ ಹೊಂದಿದ ಎರಡು ಕುಟುಂಬಕ್ಕೆ ರೂ.10 ಲಕ್ಷ ಪರಿಹಾರ ಸೇರಿದಂತೆ ಒಟ್ಟು 10.69 ಲಕ್ಷ ನೆರೆ ಹಾನಿ ಸಂತ್ರಸ್ತರಿಗೆ ಪರಿಹಾರ ವಿತರಸಲಾಗಿದೆ ಎಂದು
ತಿಳಿಸಿದರು. ಕೆರೆಹಳ್ಳಿ ಹೋಬಳಿಯಲ್ಲಿ 20ಮನೆ ಹಾನಿ, ಒಂದು ಪ್ರಾಣಿ ಹಾನಿ ಸೇರಿದಂತೆ ಸುಮಾರು ರೂ.5.1 ಲಕ್ಷ
ಪರಿಹಾರ ನೀಡಲಾಗಿದೆ ಎಂದರು.
ನೆರೆ ಹಾನಿ ಸಮೀಕ್ಷೆಯನ್ನು ಪ್ರಾಮಾಣಿಕವಾಗಿ ಎಲ್ಲಾ ಇಲಾಖೆಗಳ ಸಹಕಾರದಿಂದ ಮಾಡಿ. ಲೋಪವಾದರೆ
ಸಂಬಂಧಪಟ್ಟವರ ಮೇಲೆ ಕ್ರಮ ಜರುಗಿಸುವುದಾಗಿ ಅವರು ಎಚ್ಚರಿಸಿದರು. ಜಿಪಂ ಸದಸ್ಯರಾದ ಸುರೇಶ ಸ್ವಾಮಿರಾವ್, ಶ್ವೇತಾ ಬಂಡಿ, ತಾಪಂ ಅಧ್ಯಕ್ಷ ವಾಸಪ್ಪ ಗೌಡ, ಉಪಾಧ್ಯಕ್ಷೆ ಸುಶೀಲಮ್ಮ, ತಹಶೀಲ್ದಾರ್ ಚಂದ್ರಶೇಖರ ನಾಯ್ಕ, ಕಾರ್ಯ ನಿರ್ವಾಹಕ ಅಧಿಕಾರಿ ರಾಮಚಂದ್ರ ಭಟ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
Belthangady: ಕಡೆಗೂ ಬಂತು ಇಂದಿರಾ ಕ್ಯಾಂಟೀನ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.