ಶಿವಮೊಗ್ಗದಲ್ಲಿ ದುಷ್ಮನ್ ಚಿತ್ರೀಕರಣಕ್ಕೆ ಚಾಲನೆ
Team Udayavani, Sep 28, 2020, 7:51 PM IST
ಶಿವಮೊಗ್ಗ: “ದುಷ್ಮನ್’ ಕನ್ನಡ ಚಲನಚಿತ್ರ ಚಿತ್ರೀಕರಣ ನಗರದಲ್ಲಿ ಭರದಿಂದ ಸಾಗಿದೆ. ಭಾನುವಾರ ಕೋಟೆ ಶ್ರೀ ರಾಮಾಂಜನೇಯ ದೇವಸ್ಥಾನದಲ್ಲಿ ಜಿ.ಪಂ. ಸದಸ್ಯ ಕಲಗೋಡು ರತ್ನಾಕರ್ ಚಿತ್ರೀಕರಣಕ್ಕೆ ಆಕ್ಷನ್ ಹೇಳಿದರು.
ನಂತರ ಮಾತನಾಡಿದ ಅವರು, ಈ ಚಿತ್ರ ಯುವ ಸಮೂಹದ ದುಶ್ಚಟಗಳನ್ನು ದೂರ ಮಾಡುವ ನಿಟ್ಟಿನಲ್ಲಿ ಸಂದೇಶ ಸಾರುವ ಚಿತ್ರವಾಗಿದೆ. ಶಿವಮೊಗ್ಗದ ನಟ, ನಟಿಯರು ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ಸಂತೋಷದ ವಿಷಯವಾಗಿದೆ ಎಂದು ಚಿತ್ರಕ್ಕೆ ಶುಭ ಹಾರೈಸಿದರು.
ಕಾರ್ಯಕಾರಿ ನಿರ್ಮಾಪಕ ಹಾಗೂ ನುಡಿಗಿಡ ಪತ್ರಿಕೆ ಸಂಪಾದಕ ಎಚ್.ಎನ್. ಮಂಜುನಾಥ್ ಮಾತನಾಡಿ, ಚಿತ್ರೀಕರಣ ಶಿವಮೊಗ್ಗದ ಸುತ್ತಮುತ್ತ ಇನ್ನು 15 ದಿನಗಳ ಕಾಲ ನಡೆಯಲಿದೆ. ನಾಯಕ, ನಾಯಕಿ ಹೊಸಬರಾದರೂ ತುಂಬಾ ಅದ್ಭುತವಾಗಿ ನಟಿಸುತ್ತಿದ್ದಾರೆ. ಗಾಂಜಾ, ಅμàಮು ಸೇರಿದಂತೆ ಮಾದಕ ವಸ್ತುಗಳಿಗೆ ಯುವ ಸಮೂಹ ಬಲಿಯಾಗುತ್ತಿರುವುದು ವಿಷಾದಕರವಾಗಿದೆ. ಇದನ್ನುಸಂಪೂರ್ಣವಾಗಿ ತೊಡೆದುಹಾಕುವ ಸಂದೇಶ ನೀಡುವ ಚಿತ್ರ “ದುಷ್ಮನ್’ ಆಗಿದೆ. ಮಾದಕ ವಸ್ತುಗಳು ಒಂದು ರೀತಿಯಲ್ಲಿ ಯುವ ಜನಾಂಗದ ದುಷ್ಮನ್ ಆಗಿದ್ದು, ಇದನ್ನು ಹೊಡೆದೋಡಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.
ನಿರ್ದೇಶಕ ಮುತ್ತು ಮಾತನಾಡಿ, ಶಿವಮೊಗ್ಗದಲ್ಲಿ ಚಿತ್ರೀಕರಣವಾಗುತ್ತಿರುವುದು ತುಂಬಾ ಸಂತೋಷವಾಗಿದೆ. ಇಲ್ಲಿ ಸಾಂಸ್ಕೃತಿಕ ವಾತಾವರಣವಿದ್ದು, ಜೋಗ ಸೇರಿದಂತೆ ಜಿಲ್ಲೆಯ ಐತಿಹಾಸಿಕ ಸ್ಥಳಗಳನ್ನು ಚಿತ್ರದಲ್ಲಿ ಬಳಸಿಕೊಳ್ಳಲಾಗುವುದು ಎಂದರು. “ದುಷ್ಮನ್’ ಚಿತ್ರದ ಹಲವು ಭಾಗಗಳು ಇಂದು ಕೋಟೆ ಶ್ರೀ ರಾಮಾಂಜನೇಯ ದೇವಾಲಯದಲ್ಲಿ ಚಿತ್ರೀಕರಣಗೊಂಡಿದ್ದು, ಹಾಸ್ಯಲೋಕದ ದಿಗ್ಗಜರಾದ ರಂಗಾಯಣ ರಘು ಸೇರಿದಂತೆ ಹಲವು ಹೆಸರಾಂತ ಕಲಾವಿದರು ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ನಟ ಕೆಂಪೇಗೌಡ ಚಿತ್ರದ ಪ್ರಮುಖ ಹಾಸ್ಯ ಕಲಾವಿದರಾಗಿದ್ದಾರೆ.
ರಂಜಿತ್, ಅರುಣ್, ಭೀಮರಾವ್ ಸೇರಿದಂತೆ ಶಿವಮೊಗ್ಗದ ಹಲವು ಕಲಾವಿದರು ಈ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ನಾಯಕಿ ಜನನಿ, ಚಿತ್ರ ಹೊನ್ನಪ್ಪ, ನಾಯಕ ನಟ ಜೀವನ್ ಕುಮಾರ್ ಸೇರಿದಂತೆ ಹಲವರು ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.