![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Aug 30, 2020, 5:26 PM IST
ಶಿವಮೊಗ್ಗ: ಜಗತ್ತಿನಾದ್ಯಂತ ಹರಡಿರುವ ಮಾರಣಾಂತಿಕ ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯದ ನ್ಯಾಯಾಲಯದಲ್ಲಿ ದಾಖಲಾಗಿರುವ ವಿವಿಧ ಪ್ರಕಾರದ ಪ್ರಕರಣಗಳನ್ನು ಇತ್ಯರ್ಥಪಡಿಸುವಲ್ಲಿ ವಿಳಂಬ ವಾಗುತ್ತಿರುವುದನ್ನು ಮನಗಂಡು ಕಕ್ಷಿದಾರರಿಗೆ ಸಕಾಲದಲ್ಲಿ ನ್ಯಾಯ ಒದಗಿಸಿಕೊಡುವ ಸದುದ್ದೇಶದಿಂದ ದೇಶದಲ್ಲಿ ಇದೇ ಮೊದಲ ಬಾರಿಗೆ ಸೆ. 19ರಂದು ರಾಜ್ಯದ ಎಲ್ಲಾ ನ್ಯಾಯಾಲಯಗಳಲ್ಲಿ ಇ-ಅದಾಲತ್‌ನ್ನು ನಡೆಸಲು ಉದ್ದೇಶಿಸಲಾಗಿದೆ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ಹಿರಿಯ ನ್ಯಾಯಮೂರ್ತಿ ಹಾಗೂ ಕಾನೂನು ಸೇವಾ ಸಮಿತಿ ಅಧ್ಯಕ್ಷ ಜಸ್ಟೀಸ್ ಅಲೋಕ ಆರಾಧೆ ಅವರು ಹೇಳಿದರು.
ಶುಕ್ರವಾರ ಸಂಜೆ ನ್ಯಾಯಾಧೀಶರು ಹಾಗೂ ಮಾಧ್ಯಮ ಪ್ರತಿನಿಧಿ ಗಳಿಗಾಗಿ ಏರ್ಪಡಿಸಲಾಗಿದ್ದ ವಿಡಿಯೋ ಸಂವಾದದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ನ್ಯಾಯಾಲಯದಲ್ಲಿ ರಾಜಿ ಸಂಧಾನದ ಮೂಲಕ ಇತ್ಯರ್ಥಗೊಳ್ಳಬಹುದಾದ ಮೊಕದ್ದಮೆಗಳನ್ನು ಇ-ಅದಾಲತ್‌ನಲ್ಲಿ ವಿಚಾರಣೆಗೆ ಆಯ್ಕೆ ಮಾಡಿಕೊಳ್ಳಲಾಗಿದೆ ಎಂದ ಅವರು, ಕಕ್ಷಿದಾರರು ಬಹಳ ಸರಳವಾಗಿ ಈ ಅದಾಲತ್‌ನಲ್ಲಿ ಭಾಗವಹಿಸಿ, ಒಪ್ಪಿತವಾಗುವಂತೆ ನ್ಯಾಯ ಪಡೆದುಕೊಳ್ಳಬಹುದಾಗಿದೆ ಎಂದರು.
ಪ್ರಕರಣದ ವಿಚಾರಣೆಗೆ ದೂರುದಾರರು ನ್ಯಾಯಾಲಯಕ್ಕೆ ಆಗಮಿಸುವ ಅಗತ್ಯವಿಲ್ಲ. ಬದಲಾಗಿ ತಾವಿರುವ ಸ್ಥಳದಿಂದಲೇ ವಿಚಾರಣೆಗೆ ಭಾಗವಹಿಸಬಹುದಾಗಿದೆ. ವಿಶೇಷವಾಗಿ ಕಂಪ್ಯೂಟರ್, ಲ್ಯಾಪ್‌ಟಾಪ್‌ನಂತದ ಸಾಧನ ಸಲಕರಣೆಗಳ ಅಗತ್ಯವಿಲ್ಲ ಎಂದ ಅವರು, ತಮ್ಮಲ್ಲಿರುವ ಮೊಬೈಲ್‌ನಿಂದಲೇ ತಾವಿರುವ ಸ್ಥಳದಿಂದಲೇ ಮೊಕದ್ದಮೆಯನ್ನು ದಾಖಲಿಸಲುಅವಕಾಶ ನೀಡಲಾಗಿದೆ ಎಂದರು.
ದಾಖಲಾಗಿರುವ ವ್ಯಾಜ್ಯಗಳ ವಿಚಾರಣೆ ಪೂರ್ವದಲ್ಲಿ ನ್ಯಾಯಾಲಯದ ಸಕ್ಷಮ ಸಿಬ್ಬಂದಿ ಗಳು ದೂರುದಾರರಿಗೆ ಕರೆಮಾಡಿ, ಮಾಹಿತಿ ಪಡೆದುಕೊಳ್ಳಲಿರುವರು. ಅದಾಲತ್‌ನಲ್ಲಿ ಅಪಘಾತ, ಇನ್ಶೂರೆನ್ಸ್, ಹಣ ವಸೂಲಾತಿ, ಚೆಕ್‌ಬೌನ್ಸ್, ಮೆಂಟೇನೆನ್ಸ್ ಮತ್ತಿತರ ಪ್ರಕರಣಗಳನ್ನು ಕೈಗೆತ್ತಿಕೊಳ್ಳಲಾಗುವುದು. ಗಂಭೀರ ಸ್ವರೂಪದ ವಿಚಾರಣೆಯ ಪ್ರಕರಣಗಳನ್ನು ಎಂದಿನಂತೆ ಹಂತ ಹಂತವಾಗಿ ವಿಚಾರಣೆ ನಡೆಸಲಾಗುವುದು ಎಂದರು.
ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧಿಧೀಶ ಮಾಸ್ಟರ್ ಆರ್‌ಕೆಜಿಎಂಎಂ ಮಹಾಸ್ವಾಮೀಜಿ ಅವರು ಮಾತನಾಡಿ, ಜುಲೈ ಮಾಸಾಂತ್ಯದವರೆಗೆ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ದಾಖಲಾಗಿರುವ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದಾದ 34,875 ಪ್ರಕರಣಗಳಲ್ಲಿ 2465ಪ್ರಕರಣಗಳನ್ನು ಗುರುತಿಸಿ, ವಿಚಾರಣೆಗೆ ಆಯ್ಕೆ ಮಾಡಿಕೊಳ್ಳಲಾಗಿದೆ ಎಂದರು. ವಿಡಿಯೋ ಸಂವಾದ ಕಾರ್ಯಕ್ರಮದಲ್ಲಿ ಹೈಕೋರ್ಟ್ ಹಿರಿಯ ನ್ಯಾಯಾ ಧೀಶ ಹಾಗೂ ಕಾನೂನು ಸೇವಾ ಸಮಿತಿಯ ಕಾರ್ಯನಿರ್ವಾಹಕ ಅಧ್ಯಕ್ಷ ಜಸ್ಟೀಸ್ ಅರವಿಂದ್ ಕುಮಾರ್ ಸೇರಿದಂತೆ ರಾಜ್ಯದ ಎಲ್ಲಾ ನ್ಯಾಯಾಲಯಗಳ ನ್ಯಾಯಾಧಿಧೀಶರು ಇದ್ದರು.
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.