ಶಿವಮೊಗ್ಗ: ಶಂಕಿತ ಉಗ್ರರ ಮನೆಗಳ ಮೇಲೆ ಇಡಿ ಅಧಿಕಾರಿಗಳ ದಾಳಿ; ತೀವ್ರ ಶೋಧ
Team Udayavani, Jan 11, 2023, 12:24 PM IST
ಶಿವಮೊಗ್ಗ: ಶಿವಮೊಗ್ಗದ ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಿಗ್ಗೆ ಇಡಿ ಕಾರ್ಯಾಚರಣೆ ನಡೆಸಿದ್ದು, ಶಂಕಿತ ಉಗ್ರರಾದ ಮಾಜ್ ಮುನೀರ್, ಶಾರಿಕ್, ಮತೀನ್ ಮನೆಗಳಲ್ಲಿ ಶೋಧ ಕಾರ್ಯ ನಡೆಸಿದ್ದಾರೆ.
ಐದು ಕಾರುಗಳಲ್ಲಿ 15ಕ್ಕೂ ಹೆಚ್ಚು ಸಿಬ್ಬಂದಿಗಳು ತೀರ್ಥಹಳ್ಳಿಯ ಸೊಪ್ಪುಗುಡ್ಡೆಯಲ್ಲಿರುವ ಮಾಜ್ ಮುನೀರ್, ಶಾರಿಕ್ ಮನೆ ಸೇರಿದಂತೆ ಅಕ್ಕಪಕ್ಕದ ಮನೆಗಳಿಗೂ ತೆರಳಿ ಮಾಹಿತಿ ಸಂಗ್ರಹಿಸಿದ್ದಾರೆ.
ಕಾರ್ಯಚರಣೆ ವೇಳೆ ಪ್ರತಿ ಮನೆಗೂ ತೆರಳಿ ಮೊಬೈಲ್ ಸ್ವಿಚ್ ಆಫ್ ಮಾಡುವಂತೆ ಹೇಳಿದ್ದಲ್ಲದೆ ಯಾರೂ ಫೋಟೋ ತೆಗೆಯದಂತೆ ಸೂಚನೆ ನೀಡಿದ್ದಾರೆ.
ಇಡಿ ಅಧಿಕಾರಿಗಳು ಬೆಂಗಾವಲಿಗಾಗಿ ಊರ ಹೊರಗಿನಿಂದ ಪೊಲೀಸರನ್ನು ಕರೆ ತಂದಿದ್ದಾರೆ. ಜೊತೆಗೆ ಇದೇ ಮೊದಲ ಬಾರಿಗೆ ಶಸ್ತ್ರ ಸಜ್ಜಿತ ಪೊಲೀಸರನ್ನು ತಮ್ಮೊಂದಿಗೆ ಕರೆತಂದಿದ್ದಾರೆ.
ಇಡಿ ಅಧಿಕಾರಿಗಳು ಶಂಕಿತ ಉಗ್ರರಿಗೆ ಹಣಕಾಸಿನ ಮೂಲವೇನು ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.