![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 11, 2021, 9:17 AM IST
ಶಿವಮೊಗ್ಗ: ಈ ವರ್ಷವೂ ಪಠ್ಯ ಕಡಿತಗೊಳಿಸಿದರೆ ಮುಂದಿನ ತರಗತಿಗಳಿಗೆ ತೊಂದರೆಯಾಗುತ್ತದೆ. ಹೀಗಾಗಿ ಆ ಬಗ್ಗೆ ಇನ್ನು ಯಾವ ನಿರ್ಣಯ ಕೈಗೊಂಡಿಲ್ಲ. ಬ್ರಿಡ್ಜ್ ಕೋರ್ಸ್ ಮಾಡುತ್ತಿದ್ದೇವೆ. ಸಿಲಬಸ್ ಪೂರ್ತಿ ಮಾಡಿದರೆ ಮಕ್ಕಳಿಗೆ ಲಾಭ. ಮಕ್ಕಳು ಒಂದೂವರೆ ವರ್ಷ ಶಾಲೆಯಿಂದ ದೂರ ಉಳಿದಿದ್ದಾರೆ. ಅದನ್ನು ಬ್ರಿಡ್ಜ್ ಕೋರ್ಸ್ ನಲ್ಲಿ ಪೂರ್ಣಗೊಳಿಸಬೇಕಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಶಿಕ್ಷಕರ ರಜೆ ಕಡಿಮೆ ಮಾಡಿ ಸಿಲೆಬಸ್ ಪೂರ್ಣಗೊಳಿಸುವ ಕುರಿತು ಯೋಚನೆಯಿದೆ. ಈ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಮುಂದಿನ ದಿನಗಳಲ್ಲಿ ಶಿಕ್ಷಕರ ಸಹಕಾರ ನೋಡಿ, ಅವಶ್ಯಕತೆ ಬಿದ್ದರೆ ನಿರ್ಣಯ ಕೈಗೊಳ್ಳುತ್ತೇವೆ. ಪಠ್ಯ ಕಡಿತಗೊಳಿಸುವ ಬಗ್ಗೆ ಪ್ರಯತ್ನ ಮಾಡುತ್ತೇವೆ ಎಂದು ಹೇಳಿದರು.
ಇದನ್ನೂ ಓದಿ:ವಿಶ್ವ ವಾಣಿಜ್ಯ ಕೇಂದ್ರದ ಮೇಲಿನ ದಾಳಿಗೆ 20 ವರ್ಷ: ಎರಡು ದಶಕಗಳಲ್ಲಿ ಆಗಿದ್ದೇನು?
1 ರಿಂದ 5 ನೇ ತರಗತಿಯವರೆಗೆ ಶಾಲೆ ಆರಂಭಿಸುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ತಾಂತ್ರಿಕ ಸಭೆ ಸದ್ಯದಲ್ಲಿಯೇ ಮಾಡುತ್ತಿದ್ದೇವೆ. 6,7,8 ನೇ ತರಗತಿಗಳನ್ನು ನಮ್ಮ ಶಿಕ್ಷಕರು ಚೆನ್ನಾಗಿ ನಡೆಸಿದ್ದಾರೆ. ಆ ರೀತಿ ನೋಡಿ ತುಂಬ ಸಂತೋಷವಾಗಿದೆ. ಖಂಡಿತ ಸದ್ಯದಲ್ಲೇ 1 ರಿಂದ 5 ರವರೆಗೆ ಶಾಲೆ ತೆರೆಯುವ ಬಗ್ಗೆ ತಾಂತ್ರಿಕ ಸಮಿತಿ ಮುಂದೆ ಚರ್ಚೆ ಮಾಡಿ, ಸಮಿತಿ ಅನುಮತಿ ನೀಡಿದ ಬಳಿಕ ಆರಂಭಿಸುತ್ತೇವೆ ಎಂದರು.
ಕೇರಳದಲ್ಲಿ ಕೋವಿಡ್ ಹೆಚ್ಚಾಗುತ್ತಿದೆ. ಮಂಗಳೂರು, ಉಡುಪಿಯಲ್ಲಿ ಕಡಿಮೆಯಾಗುತ್ತಿದೆ. ಶಾಲೆ ಪ್ರಾರಂಭ ಮಾಡಿರುವ ಸರ್ಕಾರಕ್ಕೆ ಕೋವಿಡ್ ಹೆಚ್ಚಳವಾದರೆ ತಕ್ಷಣ ನಿಲ್ಲಿಸುವ ಅವಕಾಶ ಇದೆ. ಈ ಬಗ್ಗೆ ಕೋವಿಡ್ ಹೆಚ್ಚಾದ ಸಂದರ್ಭದಲ್ಲಿ ನಿರ್ಣಯ ಕೈಗೊಳ್ಳುತ್ತೇವೆ ಎಂದು ಸಚಿವರು ಹೇಳಿದರು.
ಶಿಕ್ಷಕರ ವರ್ಗಾವಣೆ ವಿಚಾರಕ್ಕೆ ಪ್ರತಿಕ್ರಿತಯೆ ನೀಡಿದ ಸಚಿವರು, ಅಧ್ಯಾಪಕರು ಏಕೆ ಈ ರೀತಿ ವರ್ಗಾವಣೆ ಮಾಡುತ್ತಿದ್ದಾರೆ ಗೊತ್ತಿಲ್ಲ. ಕಳೆದ ಮೂರು ವರ್ಷದಿಂದ ಶಿಕ್ಷಕರ ವರ್ಗಾವಣೆ ನೆನೆಗುದಿಗೆ ಬಿದ್ದಿದೆ. ಮೂರು ವರ್ಷದಿಂದ ಸತತವಾಗಿ ಕೋರ್ಟ್ ಗೆ ಹೋಗಿ ತಡೆಯಾಜ್ಞೆ ತರುತ್ತಿದ್ದಾರೆ. ಹೀಗಾಗಿ ವರ್ಗಾವಣೆ ಪ್ರಕ್ರಿಯೆ ಸ್ಥಗಿತವಾಗುತ್ತಿದೆ. ಸರ್ಕಾರದಿಂದ ಅಪೀಲ್ ಹೋಗುತ್ತೇವೆ. ಸ್ಟೇ ತೆರವುಗೊಳಿಸುವ ಪ್ರಯತ್ನ ಮಾಡುತ್ತೇವೆ. ತೆರವಾಗದಿದ್ದರೆ ಉಳಿದ ವರ್ಗಕ್ಕೆ ವರ್ಗಾವಣೆ ಪ್ರಕ್ರಿಯೆ ಮಾಡುತ್ತೇವೆ ಎಂದರು.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.