ಪ್ರತಿಯೊಬ್ಬರೂ ಅರಣ್ಯ ಸಂರಕ್ಷಣೆಗೆ ಪಣ ತೊಡಿ
ಅರಣ್ಯ ಸಂಪತ್ತನ್ನು ಸಂರಕ್ಷಿಸುವ ಮಹತ್ವದ ಕಾರ್ಯವನ್ನು ಅರಣ್ಯ ಇಲಾಖೆ ಸಿಬ್ಬಂದಿ ಮಾಡುತ್ತಿದ್ದಾರೆ
Team Udayavani, Sep 12, 2022, 6:03 PM IST
ಶಿವಮೊಗ್ಗ: ಪ್ರತಿಯೊಬ್ಬರೂ ಅರಣ್ಯ ಸಂರಕ್ಷಣೆಯ ಮಹತ್ವ ಅರಿತುಕೊಳ್ಳಬೇಕಾದ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಆರ್. ಸೆಲ್ವಮಣಿ ಹೇಳಿದರು. ಭಾನುವಾರ ಶ್ರೀಗಂಧ ಕೋಠಿ ಆವರಣದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಅರಣ್ಯ ಹುತಾತ್ಮತರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಅರಣ್ಯ ಅಂದರೆ ಕೇವಲ ಮರಗಳು ಮಾತ್ರವಲ್ಲ. ಅಸಂಖ್ಯ ಜೀವ ಸಂಕುಲಗಳನ್ನು ಒಳಗೊಂಡ ಜೀವ ವೈವಿಧ್ಯ ವ್ಯವಸ್ಥೆಯಾ ಗಿದೆ. ಇದರ ಸಂರಕ್ಷಣೆಯ ಮಹತ್ವ ಪ್ರತಿಯೊಬ್ಬರೂ ಅರಿತುಕೊಳ್ಳಬೇಕಾದ ಅಗತ್ಯವಿದೆ.
ಅಂತಹ ರಾಷ್ಟ್ರೀಯ ಸಂಪತ್ತಿನ ರಕ್ಷಣಾ ಕಾರ್ಯ ದಲ್ಲಿ ತಮ್ಮ ಜೀವ ತೆತ್ತವರನ್ನು ಸ್ಮರಿಸುವುದು ನಮ್ಮ ಕರ್ತವ್ಯ. ಪ್ರತಿಯೊಬ್ಬರೂ ಅರಣ್ಯ ಸಂರಕ್ಷಣೆಯ ಪ್ರತಿಜ್ಞೆ ಮಾಡುವುದೇ ಈ ಹುತಾತ್ಮರಿಗೆ ನೀಡಬಹುದಾದ ನಿಜವಾದ ಶ್ರದ್ಧಾಂಜಲಿ ಎಂದರು. ಹುತಾತ್ಮ ಸ್ಮಾರಕಕ್ಕೆ ಪುಷ್ಪಗುಚ್ಚ ಅರ್ಪಿಸಿ ನಮನ ಸಲ್ಲಿಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕೆ.ಎಸ್.ಮಾನು ಮಾತನಾಡಿ, ಗಡಿಯಲ್ಲಿ ಯೋಧರು ದೇಶವನ್ನು ರಕ್ಷಿಸುವ ಕಾರ್ಯ ಮಾಡಿದರೆ, ದೇಶದ ಒಳಗೆ
ಅರಣ್ಯ ಸಂಪತ್ತನ್ನು ಸಂರಕ್ಷಿಸುವ ಮಹತ್ವದ ಕಾರ್ಯವನ್ನು ಅರಣ್ಯ ಇಲಾಖೆ ಸಿಬ್ಬಂದಿ ಮಾಡುತ್ತಿದ್ದಾರೆ. ಇಂದಿನ ದಿನಗಳಲ್ಲಿ ಪ್ರಾಣಿ ಮತ್ತು ಮಾನವನ ನಡುವಿನ ಸಂಘರ್ಷಗಳು ಹೆಚ್ಚುತ್ತಿದ್ದು, ಇಂತಹ ಸಂದರ್ಭಗಳಲ್ಲಿ ಅರಣ್ಯ ಇಲಾಖೆ ಜವಾಬ್ದಾರಿಯೂ ಹೆಚ್ಚುತ್ತಿದೆ ಎಂದರು.ಅರಣ್ಯವನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕನ ಕರ್ತವ್ಯ.
ಅರಣ್ಯ ಸಂಪತ್ತು ದೇಶದ ಸಮೃದ್ಧಿಯ ಸಂಕೇತ. ಅರಣ್ಯವನ್ನು ಸಂರಕ್ಷಿಸುವುದರಿಂದ ಮಾತ್ರ ಮುಂದಿನ ಜನಾಂಗಕ್ಕೆ ಉತ್ತಮ ಭವಿಷ್ಯ ನೀಡಲು ಸಾಧ್ಯ ಎಂದರು. ಶಿವಮೊಗ್ಗ ವೃತ್ತ ಅರಣ್ಯ ಸಂರಕ್ಷಣಾಧಿಕಾರಿ ಡಾ| ಕೆ.ಟಿ. ಹನುಮಂತಪ್ಪ ಮಾತನಾಡಿ, ಅರಣ್ಯ ಸಂರಕ್ಷಣೆಗಾಗಿ ತಮ್ಮ ಪ್ರಾಣ ತೆತ್ತ ಮಹನೀಯರ ಬಲಿದಾನ ವ್ಯರ್ಥವಾಗುವುದಿಲ್ಲ. ಅರಣ್ಯ ಸಂರಕ್ಷಣೆಯ ನಮ್ಮ ಬದ್ಧತೆಯನ್ನು ಇದು ಇನ್ನಷ್ಟು ಹೆಚ್ಚಿಸುತ್ತದೆ ಎಂದರು. ಉಪ ಅರಣ್ಯ ಸಂರಕ್ಷಣಾಧಿ ಕಾರಿ ಈ.ಶಿವಶಂಕರ್ ಅವರು ಕರ್ತವ್ಯದ ಸಂದರ್ಭದಲ್ಲಿ ಪ್ರಾಣ ಅರ್ಪಿಸಿದ ಅ ಧಿಕಾರಿಗಳ ಪಟ್ಟಿ ವಾಚಿಸಿದರು.
ಅತಿಥಿಗಳು ಹುತಾತ್ಮ ಸ್ಮಾರಕಕ್ಕೆ ಪುಷ್ಪ ಗುಚ್ಚ ಅರ್ಪಿಸಿ ಶ್ರದ್ಧಾಂಜಲಿ ಸಲ್ಲಿಸಿದರು. ಪೊಲೀಸ್ ತುಕಡಿಯಿಂದ ಕುಶಾಲು ತೋಪು ಹಾರಿಸುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಐ.ಎಂ. ನಾಗರಾಜ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
MUST WATCH
ಹೊಸ ಸೇರ್ಪಡೆ
Kambala ಋತುವಿನ ಪ್ರಥಮ ಕಂಬಳ; ಕೊಡಂಗೆ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ
Wayanad Results 2024:ವಯನಾಡ್ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.