ಶಿವಮೊಗ್ಗ ವಿಮಾನ ನಿಲ್ದಾಣದ ಬಳಿ ಎರಡು ವಾಹನದಲ್ಲಿ ಭಾರಿ ಪ್ರಮಾಣದ ಸ್ಪೋಟಕ ಪತ್ತೆ!
Team Udayavani, Mar 9, 2021, 10:14 AM IST
ಶಿವಮೊಗ್ಗ: ಇಲ್ಲಿನ ಸೋಗಾನೆ ವಿಮಾನ ನಿಲ್ದಾಣದ ಬಳಿ ಭಾರಿ ಪ್ರಮಾಣದ ಸ್ಪೋಟಕ ತುಂಬಿದ್ದ ಎರಡು ವಾಹನಗಳು ಪತ್ತೆಯಾಗಿವೆ. ಇವುಗಳಲ್ಲಿ 904 ಕೆ.ಜಿ ಜಿಲೆಟಿನ್ ಕಡ್ಡಿ, 3267 ಡಿಟೊನೇಟರ್ಗಳು ಸೇರಿದಂತೆ ಹಲವರು ವಸ್ತುಗಳು ಪತ್ತೆಯಾಗಿವೆ.
ಸೋಗಾನೆ ವಿಮಾನ ನಿಲ್ದಾಣ ಕಾಮಗಾರಿ ಸ್ಥಳದಲ್ಲಿ ಎರಡು ವಾಹನದಲ್ಲಿ ಸ್ಪೋಟಕ ಪತ್ತೆಯಾಗಿದೆ. ಟಾಟಾ 407 ವಾಹನದಲ್ಲಿ 36 ಬಾಕ್ಸ್ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ. ಪಿಕ್ ಅಪ್ ವಾಹನದಲ್ಲಿ 3267 ಎಲೆಕ್ಟ್ರಾನಿಕ್ ಡಿಟೊನೇಟರ್ ಗಳು, 9 ಮೀಟರ್ ನ 79 ಎಕ್ಸೆಲ್ ಗಳು, 3 ಮಿಟರ್ ನ 105 ಎಕ್ಸೆಲ್ ಗಳು ಪತ್ತೆಯಾಗಿವೆ.
ಬೆಂಗಳೂರಿನಿಂದ ಬಂತು ಟೀಮ್
ಮಾಹಿತಿ ತಿಳಿಯುತ್ತಿದ್ದಂತೆ ತುಂಗಾ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೆಂಗಳೂರಿನಿಂದ ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿದರು. ಸ್ಪೋಟಕಗಳನ್ನು ಸುರಕ್ಷಿತಗೊಳಿಸಿದ್ದು, ಆತಂಕ ದೂರವಾಗಿದೆ.
ಇದನ್ನೂ ಓದಿ:ಸಿಡಿ ಬಗ್ಗೆ 4 ತಿಂಗಳ ಮೊದಲೇ ಗೊತ್ತಿತ್ತು, ನಾನು ನಿರಪರಾಧಿ: ಕಣ್ಣೀರಿಟ್ಟ ರಮೇಶ್ ಜಾರಕಿಹೊಳಿ
ಸ್ಪೋಟಕ ಇಲ್ಲಿ ಬಂದಿದ್ದು ಹೇಗೆ? ಯಾಕೆ?
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕಾಮಗಾರಿ ಸ್ಥಳದಲ್ಲೆ ಕ್ವಾರಿ ಒದಗಿಸಲಾಗಿದೆ. ಇಲ್ಲಿಯೇ ಬಂಡೆ ಸ್ಪೋಟಿಸಿ, ಕಾಮಗಾರಿಗೆ ಜೆಲ್ಲಿ ಬಳಕೆ ಮಾಡಬಹುದಾಗಿದೆ. ಇದಕ್ಕೆ ಸ್ಪೋಟಕೆ ಪೂರೈಕೆ ಮಾಡುವಂತೆ ಚಿಕ್ಕಬಳ್ಳಾಪುರದ ಸ್ಪೋಟಕ ಪೂರೈಕೆ ಕಂಪನಿಯೊಂದರ ಜೊತೆ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಬಂಡೆ ಸ್ಪೋಟಿಸಲು ಈ ಕಂಪನಿಯವರು ಸ್ಪೋಟಕಗಳನ್ನು ತಂದಿದ್ದರು. ಎರಡು ವಾಹನಗಳನ್ನು ತಂದಿದ್ದ ಸ್ಪೋಟಕಗಳನ್ನು ಹಾಗೆ ಬಿಟ್ಟು ಹೋಗಿದ್ದರಿಂದ, ಆತಂಕ ಸೃಷ್ಟಿಯಾಗಿತ್ತು.
ಬಿಟ್ಟು ಹೋಗಿದ್ದು ಏಕೆ?
ಹುಣಸೋಡು ಕ್ವಾರಿಯಲ್ಲಿ ಸ್ಪೋಟ ಪ್ರಕರಣದ ಬಳಿಕ ಸ್ಪೋಟಕ ಬಳಕೆಗೆ ಕಡಿವಾಣ ಹಾಕಲಾಗಿದೆ. ಈ ಹಿನ್ನೆಲೆಯಲ್ಲಿ ಸ್ಪೋಟಕ ಪೂರೈಕೆ ಕಂಪನಿಯವರು ಸ್ಪೋಟಕ ಬಳಕೆ ಬಗ್ಗೆ ಜಿಲ್ಲಾಧಿಕಾರಿ ಅವರ ಅನುಮತಿ ಕೇಳಿದರು. ಮಂಗಳೂರಿನಲ್ಲಿರುವ ಪೆಟ್ರೋಲಿಯಂ ಮತ್ತು ಎಕ್ಸ್ಪ್ಲೋಸಿವ್ಸ್ ಸೇಫ್ಟಿ ಆರ್ಗನೈಸೇಷನ್ನಿಂದ ಅನುಮತಿ ಪಡೆಯುವಂತೆ ಡಿಸಿ ಸೂಚಿಸಿದ್ದರು. ಅನುಮತಿಗಾಗಿ ಕೇಳಿದಾಗ ಸ್ಪೋಟಕ ಪೂರೈಕೆ ಕಂಪನಿಯವರು ನಿಯಮ ಉಲ್ಲಂಘಿಸಿರುವುದು ಬೆಳಕಿಗೆ ಬಂದಿದೆ. ಇದೇ ಗೊಂದಲದಿಂದ ಸ್ಪೋಟಕವನ್ನು ಅಲ್ಲಿಯೇ ಇರಿಸಿ ತೆರಳಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ಜೆಸ್ಕಾಂ ಲೆಕ್ಕಾಧಿಕಾರಿ ರಾಜು ಪತ್ತಾರ್ ಗೆ ಬೆಳಂಬೆಳಗ್ಗೆ ಎಸಿಬಿ ಶಾಕ್..!
ಉಲ್ಲಂಘನೆ ಆದ ನಿಯಮವೇನು?
ಹೇಗೆಂದರೆ ಹಾಗೆ ಸ್ಪೋಟಕವನ್ನು ಸಾಗಣೆ ಮಾಡುವಂತಿಲ್ಲ. 150 ಕಿ.ಮೀ ಮಾತ್ರ ಸ್ಪೋಟಕ ಸಾಗಣೆ ಮಾಡಬಹುದು. ಆದರೆ ಸ್ಪೋಟಕ ಪೂರೈಕೆ ಕಂಪನಿಯು ಚಿಕ್ಕಬಳ್ಳಾಪುರದಿಂದ ಶಿವಮೊಗ್ಗದವರೆಗೆ ಸ್ಪೋಟಕ ಪೂರೈಕೆ ಮಾಡಿ ನಿಯಮನ್ನು ಉಲ್ಲಂಘಿಸಿತ್ತು. ಅಲ್ಲಿ ಸ್ಪೋಟಕ ಬಳಕೆಗೆ ಅವಕಾಶವಿಲ್ಲ ಎಂದು ಮಂಗಳೂರಿನ ಪೆಟ್ರೋಲಿಯಂ ಮತ್ತು ಎಕ್ಸ್ಪ್ಲೋಸಿವ್ಸ್ ಸೇಫ್ಟಿ ಆರ್ಗನೈಸೇಷನ್ನಿಂದ ತಿಳಿದು ಬಂದಿತ್ತು. ಹಾಗಾಗಿ ಸ್ಪೋಟಕ ಪೂರೈಕೆ ಕಂಪನಿಯವರು ಸ್ಪೋಟಕಗಳನ್ನು ಅಲ್ಲಿಯೇ ಬಿಟ್ಟು ತೆರಳಿದ್ದರು.
ವಾಹನದಲ್ಲಿ ಸ್ಪೋಟಕ ಇರುವ ವಿಚಾರ ತಿಳಿಯುತ್ತಿದ್ದಂತೆ ತುಂಗಾ ನಗರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ದೀಪಕ್ ಅವರ ನೇತೃತ್ವದ ತಂಡ ಪರಿಶೀಲನೆ ನಡೆಸಿ, ಮುನ್ನೆಚ್ಚರಿಕೆ ಕ್ರಮ ಕೈಗೊಂಡಿತ್ತು.
ನಿಗದಿತ ದೂರಕ್ಕಿಂತಲೂ ಹೆಚ್ಚು ದೂರ ಸ್ಪೋಟಕ ಸಾಗಣೆ ಮತ್ತು ಆ ಬಳಿಕ ಸ್ಪೋಟಕವನ್ನು ಕೊಂಡೊಯ್ಯದೆ ಅಪಾಯಕಾರಿ ಸ್ಥಿತಿಯಲ್ಲಿ ಬಿಟ್ಟು ಹೋಗಿರುವ ಸಂಬಂಧ, ಚಿಕ್ಕಬಳ್ಳಾಪುರದ ಸ್ಪೋಟಕ ಪೂರೈಕೆ ಕಂಪನಿ ವಿರುದ್ಧ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮ*ಹತ್ಯೆ
MUST WATCH
ಹೊಸ ಸೇರ್ಪಡೆ
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.