ಜನರನ್ನು ಹೆದರಿಸಿ ಹಣ ವಸೂಲಿ ಮಾಡುತ್ತಿದ್ದ ನಕಲಿ ಪೊಲೀಸ್, ನಕಲಿ ಆರೋಗ್ಯ ಇಲಾಖೆ ಸಿಬ್ಬಂದಿ
Team Udayavani, Apr 21, 2020, 4:05 PM IST
ಶಿವಮೊಗ್ಗ: ಲಾಕ್ ಡೌನ್ ಹಿನ್ನೆಲೆಯಲ್ಲಿ ಜನರನ್ನು ಹೆದರಿಸಿ ಹಣ ವಸೂಲಿ ಮಾಡುತ್ತಿದ್ದ ನಕಲಿ ಪೊಲೀಸ್ ಹಾಗೂ ನಕಲಿ ಆರೋಗ್ಯ ಇಲಾಖೆ ಸಿಬ್ಬಂದಿಯನ್ನು ಬಂಧಿಸಲಾಗಿದೆ.
ಶಿವಮೊಗ್ಗ ತಾಲೂಕಿನ ಗ್ರಾಮೀಣ ಭಾಗದಲ್ಲಿ ಮಾಸ್ಕ್ ಧರಿಸದೆ ಬೈಕ್ ನಲ್ಲಿ ಹೋಗುತ್ತಿದ್ದವರನ್ನು ಅಡ್ಡಗಟ್ಟಿ ಲಾಕ್ ಡೌನ್ ಜಾರಿಯಲ್ಲಿದ್ದರೂ ಮಾಸ್ಕ್ ಧರಿಸಿಲ್ಲ ನಿಮ್ಮ ಮೇಲೆ ಕೇಸ್ ದಾಖಲಿಸುತ್ತೇವೆ ಎಂದು ಹೆದರಿಸಿ ಈ ಖದೀಮರು ಹಣ ವಸೂಲಿ ಮಾಡುತ್ತಿದ್ದರು.
ಶಿವಮೊಗ್ಗ ಟಿಪ್ಪು ನಗರದ ವಾಸಿಂ ಹಾಗೂ ಅಲಿ ಎಂಬಿಬ್ಬರು ದುಷ್ಕರ್ಮಿಗಳು ಕುಂಸಿ ಠಾಣೆ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಜನರನ್ನು ಹೆದರಿಸಿ ಹಣ ವಸೂಲಿ ಮಾಡುತ್ತಿದ್ದರು.
ಹಾರನಹಳ್ಳಿ ಗ್ರಾಮದಲ್ಲಿ ಜನರನ್ನು ಹೆದರಿಸಿ ಹಣ ವಸೂಲಿ ಮಾಡುತ್ತಿರುವಾಗ ಅನುಮಾನಗೊಂಡ ಸ್ಥಳಿಯರು ವಿಚಾರಣೆ ನಡೆಸಿದಾಗ ಇವರು ನಕಲಿ ಎಂಬ ಸತ್ಯ ಬೆಳಕಿಗೆ ಬಂದಿದ್ದು, ಕೂಡಲೇ ಸ್ಥಳೀಯರು ಇಬ್ಬರಿಗೂ ಧರ್ಮದೇಟು ನೀಡಿ ಕುಂಸಿ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Holehonnur: ಎರಡು ಪ್ರತ್ಯೇಕ ರಸ್ತೆ ಅಪಘಾತ
Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.