ರೈತ ವಿರೋಧಿ ಕಾಯ್ದೆ ವಿರುದ್ಧ ಆಕ್ರೋಶ
Team Udayavani, Nov 6, 2020, 8:28 PM IST
ಶಿವಮೊಗ್ಗ: ರೈತ ವಿರೋಧಿಯಾಗಿರುವ ಕೃಷಿ ಮಸೂದೆ, ಕಾರ್ಮಿಕ ಮಸೂದೆ, ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಅನ್ನದಾತರು, ಕೂಲಿ ಕಾರ್ಮಿಕರು ಹಾಗೂ ಡಿಎಸ್‌ಎಸ್ ಸಂಘಟನೆಗಳ ಕಾರ್ಯಕರ್ತರು ಹೆದ್ದಾರಿ ಬಂದ್ ಮಾಡಿ ಹೋರಾಟ ನಡೆಸಿದರು.
ಅಖೀಲ ಭಾರತ ರೈತ ಸಂಘರ್ಷ ಸಮಿತಿಕರೆಯ ಮೇರೆಗೆ ರೈತ ಸಂಘಟನೆಗಳು, ಕರ್ನಾಟಕ ಜನಶಕ್ತಿ, ಕರ್ನಾಟಕ ದಲಿತ ಸಂಘರ್ಷ ಸಮಿತಿಗಳು(ಅಂಬೇಡ್ಕರ್ ವಾದ) ಗುರುವಾರ ನಗರದ ಎಂ.ಅರ್. ಎಸ್.ನಲ್ಲಿ ಹೆದ್ದಾರಿ ಬಂದ್ ಮಾಡಿ ಸರ್ಕಾರಗಳ ವಿರುದ್ಧ ಅಕ್ಷರಶಃ ರಣಕಹಳೆ ಮೊಳಗಿಸಿದವು. ಕೋವಿಡ್ ಲಾಕ್‌ಡೌನ್ ಸಂದರ್ಭ ಬಳಸಿಕೊಂಡು ರೈತರು ಮನೆಯಿಂದ ಹೊರಗಡೆ ಬರದಂತೆ ನಿರ್ಬಂಧ ಹೇರಿ ಜನರ ಬಾಯಿಗೆ ಬಟ್ಟೆ ಕಟ್ಟಿ , ಚರ್ಚೆಗೆ ಅವಕಾಶ ನೀಡದೆ ಸುಗ್ರೀವಾಜ್ಞೆಗಳ ಮೂಲಕ ಕೃಷಿ, ಕಾರ್ಮಿಕ, ಭೂ ಸುಧಾರಣೆ ಕಾಯ್ದೆಗಳನ್ನು ಜಾರಿಗೆ ತಂದಿದೆ. ಕೃಷಿ ಮಸೂದೆಗಳನ್ನು ವಿರೋಧಿಸಿ ರಾಜ್ಯದಾದ್ಯಂತ ಅನ್ನದಾತರು ಬೀದಿಗಿಳಿದು ಹೋರಾಟ ನಡೆಸಿದರೂ ಸರ್ಕಾರ ರೈತರ ಕೂಗನ್ನೇ ಕೇಳದೆ ಸರ್ಕಾರ ಜಾಣಕುರುಡತನ ಪ್ರದರ್ಶನ ಮಾಡಿ, ಅನ್ನ ಕೊಡುವ ರೈತರಿಗಿಂತ ಬಂಡವಾಳಶಾಹಿಗಳ ಮಾತಿಗೆ ಬೆಲೆ ಕೊಡುತ್ತಿವೆ ಎಂದು ಪ್ರತಿಭಟನಾನಿರತ ರೈತರು ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರ ತಕ್ಷಣವೇ ಮೆಕ್ಕೆಜೋಳ ಖರೀದಿ ಕೇಂದ್ರವನ್ನು ಆರಂಬಿಸಬೇಕು ಹಾಗೂ ಪಂಜಾಬ್ ಸರ್ಕಾರದಂತೆ ರಾಜ್ಯ ಸರ್ಕಾರವು ಕೃಷಿ ಉತ್ಪನ್ನಗಳನ್ನು ಎಂಎಸ್‌ಪಿ ಬೆಲೆಗಿಂತ ಕಡಿಮೆ ಬೆಲೆಗೆ ಮಾರಾಟ ಮಾಡುವುದು ಅಪರಾಧವೆಂದು ಘೋಷಿಸಬೇಕು. ಜೊತೆಗೆ ಕೇರಳ ಸರ್ಕಾರದಂತೆ ತರಕಾರಿ ಬೆಳೆಗಳಿಗೆ ಬೆಲೆ ನಿಗದಿ ಮಾಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಭೂ ಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ಸಣ್ಣ ಮತ್ತು ಮಧ್ಯಮ ವರ್ಗದ ರೈತರು ತಮ್ಮ ಜಮೀನುಗಳನ್ನು ದೊಡ್ಡ ದೊಡ್ಡ ಶ್ರೀಮಂತರು ಹಾಗೂ ಭೂ ಮಾಫಿಯಾದವರು ತೋರಿಸುವ ಹಣದ ಆಸೆಗಾಗಿ ಜಮೀನು ಸಂಪೂರ್ಣವಾಗಿ ಕಳೆದುಕೊಂಡು ನಿರಾಶ್ರಿತರಾಗುತ್ತಾರೆ. ಹಾಗಾಗಿ ಈ ಕಾಯ್ದೆಯನ್ನು ಕೂಡಲೇ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.
ರೈತಸಂಘದ ಗೌರವಾಧ್ಯಕ್ಷ ಎಚ್. ಆರ್. ಬಸವರಾಜಪ್ಪ ಮಾತನಾಡಿ, ರೈತರಲ್ಲದವರು ಕೃಷಿ ಭೂಮಿ ಖರೀದಿ ಮಾಡಲು ಅವಕಾಶ ಕೊಟ್ಟಿರುವುದು ಬಂಡವಾಳಶಾಹಿಗಳಿಗೆ ಹಗ್ಗ, ಕಣ್ಣಿ ಕಳಚಿದಂತಾಗಿದೆ ಎಂದು ಹೇಳಿದರು. ರೈತರು ಶಾಶ್ವತವಾಗಿ ಕೃಷಿಯಿಂದ ಹೊರಗುಳಿಯುವಂತೆ ಮಾಡುವ ವ್ಯವಸ್ಥಿತಿ ಪಿತೂರಿ ಮಾಡಿದ್ದಾರೆ. ಕೃಷಿ ಮಸೂದೆಗಳನ್ನು ಕೂಡಲೇ ವಾಪಸ್ ಪಡೆಯಬೇಕು. ಇಲ್ಲವಾದರೆ ಕೋವಿಡ್ ಮುಗಿದ ನಂತರ ರೈತರೆಲ್ಲರೂ ಬೀದಿಗಳಿದು ಹೋರಾಟ ಮಾಡುತ್ತೇವೆ. ಪ್ರಧಾನಿ ಮೋದಿಯವರ ಬಣ್ಣದ ಮಾತುಗಳನ್ನು ನಾವುಗಳು ನಂಬುವುದಿಲ್ಲ ಎಂದು ಹೇಳಿದರು.
ಟ್ರಾಫಿಕ್ ಜಾಮ್: ಸರ್ಕಾರಗಳ ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ ಹಮ್ಮಿಕೊಂಡಿದ್ದ ಹೆದ್ದಾರಿ ಬಂದ್‌ನಿಂದ ಮುಕ್ಕಾಲು ತಾಸಿಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಆಗಿತ್ತು. ರೈತರು, ಕೃಷಿ ಕೂಲಿ ಕಾರ್ಮಿಕರು ರಸ್ತೆಗೆ ಅಡ್ಡ ಕುಳಿತಿದ್ದರು. ಇದರಿಂದ ನಾಲ್ಕು ದಿಕ್ಕಿನಿಂದಲೂ ಬರುವ ವಾಹನಗಳು ಒಂದು ಕಿಮೀವರೆಗೂ ವಾಹನಗಳು ನಿಂತಿದ್ದವು. ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ಇದ್ದದ್ದರಿಂದ ಬಸ್ ಗಳು ಸಂಚರಿಸಲು ತೊಂದರೆಯಾದ ಘಟನೆಯೂ ನಡೆಯಿತು. ಪೊಲೀಸರು ಮಧ್ಯ ಪ್ರವೇಶಿಸಿ, ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ತೆರಳಲು ಅವಕಾಶ ಮಾಡಿಕೊಟ್ಟರು.
ರೈತಸಂಘದ ಮುಖಂಡರಾದ ಎಸ್. ಶಿವಮೂರ್ತಿ, ಇ.ಬಿ. ಜಗದೀಶ್, ಟಿ.ಎಂ. ಚಂದ್ರಪ್ಪ, ಕೆ. ರಾಘವೇಂದ್ರ, ಜ್ಞಾನೇಶ್, ಹಿಟ್ಟೂರು ರಾಜು, ನಾಗರಾಜ್ ಪುರದಾಳ್ ಹಾಗೂ ಪ್ರಮುಖರಾದ ಕೆ.ಎಲ್. ಅಶೋಕ್, ಟಿ.ಎಚ್. ಹಾಲೇಶಪ್ಪ, ಶಿವಕುಮಾರ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Shimoga: ಮೊಬೈಲ್ ಕೊಡದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ
Holehonnur: ಎರಡು ಪ್ರತ್ಯೇಕ ರಸ್ತೆ ಅಪಘಾತ
Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.