ಕುವೆಂಪು ವಿವಿ ಕುಲಪತಿ- ಆಡಳಿತ ಕುಲಸಚಿವರ ನಡುವೆ ಭಿನ್ನಮತ: ಠಾಣೆಯಲ್ಲಿ ದೂರು-ಪ್ರತಿದೂರು
Team Udayavani, May 13, 2021, 9:52 AM IST
ಶಿವಮೊಗ್ಗ: ವಿಶ್ವಮಾನವ ಸಂದೇಶ ಸಾರಿದ ಕುವೆಂಪು ಅವರ ಆಶಯದಂತೆ ನಡೆಯುತ್ತಿರುವ ಕುವೆಂಪು ವಿಶ್ವವಿದ್ಯಾಲಯವು ಜಾತಿ, ಒಳಜಾತಿ, ಸ್ವಜನ ಪಕ್ಷಪಾತ, ಗುಂಪುಗಾರಿಕೆ, ಭ್ರಷ್ಟಾಚಾರದ ಕಾರಣಕ್ಕೆ ಮತ್ತೊಮ್ಮೆ ಸುದ್ದಿಯಲ್ಲಿದೆ.
ರಾಜ್ಯದ ಪ್ರತಿಷ್ಠಿತ ವಿವಿಗಳಲ್ಲಿ ಒಂದಾದ ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಪಿ.ವೀರಭದ್ರಪ್ಪ ಹಾಗೂ ಆಡಳಿತ ಕುಲಸಚಿವರ ಪ್ರೊ.ಪಾಟೀಲ್ ನಡುವೆ ಶೀತಲ ಸಮರ ಆರಂಭವಾಗಿದ್ದು. ಇದರ ಪರಿಣಾಮ ಇಬ್ಬರೂ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು-ಪ್ರತಿದೂರು ನೀಡಿದ್ದಾರೆ.
ಇದನ್ನೂ ಓದಿ:ಸೈಕಲ್ ಕೊಳ್ಳಲು ಇಟ್ಟಿದ್ದ ಪಿಗ್ಗಿ ಬ್ಯಾಂಕ್ ಹಣವನ್ನು ಕೋವಿಡ್ ನಿಧಿಗೆ ಕೊಟ್ಟ ಏಳರ ಪೋರ.!
ಈ ಮೂಲಕ ಉನ್ನತ ಹುದ್ದೆಯಲ್ಲಿರುವ ನಡುವಿನ ಆಂತರಿಕ ಕಚ್ಚಾಟ ಹಾಗೂ ವಿಶ್ವವಿದ್ಯಾಲಯದ ಘನತೆ ಬೀದಿಗೆ ಬಂದಂತಾಗಿದೆ.
ಏನಿದು ಗಲಾಟೆ?
ಕುವೆಂಪು ವಿಶ್ವವಿದ್ಯಾಲಯದ ಆಡಳಿತ ಕುಲಸಚಿವರಾಗಿದ್ದ ಪ್ರೊ.ಪಾಟೀಲ್ ಅವರ ಜಾಗಕ್ಕೆ ಕೆಎಎಸ್ ಅಧಿಕಾರಿ ಶ್ರೀಧರ್ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಮೇ 10 ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಶ್ರೀಧರ್ ಅವರು ಮೇ 11ರಂದು ಅಧಿಕಾರಿ ಸ್ವೀಕರಿಸಿದ್ದಾರೆ. ಆದರೆ ಅವರ ನೇಮಕವನ್ನು ಸರಕಾರ ರದ್ದು ಮಾಡಿ ಅವರನ್ನು ಕೌಶಾಲ್ಯಾಭಿವೃದ್ಧಿ ನಿಗಮದ ಶಿವಮೊಗ್ಗ ಕಚೇರಿಗೆ ವರ್ಗಾವಣೆ ಮಾಡಿ ಆದೇಶ ನೀಡಿದೆ. ಈ ನಡುವೆ ಕುಲಪತಿ ಪ್ರೊ.ಬಿ.ಪಿ.ವೀರಭದ್ರಪ್ಪ ಅವರು ಪ್ರೊ.ಪಾಟೀಲ್ ಅವರನ್ನು ಹುದ್ದೆಯಿಂದ ಬಿಡುಗಡೆಗೊಳಿಸಿ ಅವರನ್ನು ಮಾತೃ ಇಲಾಖೆಗೆ ಮರಳಿಸಿದೆ. ಅಲ್ಲದೇ ಕಚೇರಿಗೆ ಬೀಗ ಕೂಡ ಹಾಕಿಸಿದ್ದರು. ಬುಧವಾರ ವಿವಿಗೆ ಆಗಮಿಸಿದ ಪ್ರೊ.ಪಾಟೀಲ್ ಬೀಗ ಒಡೆದು ಒಳಪ್ರವೇಶಿಸಿದ್ದಾರೆ. ಇದನ್ನು ಪ್ರಶ್ನಿಸಿ ಕುಲಸಚಿವ ಬಿ.ಪಿ.ವೀರಭದ್ರಪ್ಪ ಬುಧವಾರ ಪಾಟೀಲ್ ವಿರುದ್ಧ ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿ ಅವರ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಇದನ್ನೂ ಓದಿ: ನಿಮ್ಮ ಈ ವ್ಯವಸ್ಥೆ ಯಡಿಯೂರಪ್ಪರನ್ನು ಖಳನಾಯಕರಾಗಿಸಲೋ? ಕೇಂದ್ರದ ವಿರುದ್ಧ ಕುಮಾರಸ್ವಾಮಿ ಕಿಡಿ
ಇದಕ್ಕೆ ಪ್ರತಿಯಾಗಿ ಪ್ರೊ.ಪಾಟೀಲ್ ಸಹ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ ಶ್ರೀಧರ್ ನೇಮಕ ಮರುದಿನವೇ ರದ್ದಾಗಿದೆ. ಇದು ಕುಲಸಚಿವರಿಗೂ ಗೊತ್ತಿದೆ. ಆದರೂ ಶ್ರೀಧರ್ ಅವರಿಗೆ ಅಧಿಕಾರ ವಹಿಸಿಕೊಳ್ಳಲು ಅವಕಾಶ ನೀಡಿದ್ದಾರೆ. ನಾನು ಇಲ್ಲದ ವೇಳೆ ಕಚೇರಿಗೆ ಬೀಗ ಹಾಕಿಸಿದ್ದಾರೆ. ಇದಕ್ಕೆ ವಿವಿ ಅಧಿಕಾರಿಗಳಾದ ನೀಲಗುಂದ್, ಕಣ್ಣನ್, ಯೋಗೇಂದ್ರ ಇತರರ ಕುಮ್ಮಕ್ಕು ಇದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಘಟನೆಯನ್ನು ಕುಲಪತಿ ಪ್ರೊ.ಬಿ.ಪಿ.ವೀರಭದ್ರಪ್ಪ ಸರಕಾರಕ್ಕೆ ವರದಿ ಸಲ್ಲಿಸಿದ್ದು ಆದೇಶಕ್ಕೆ ಕಾಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.