ಹೋರಾಟ ಅಭಿವೃದ್ಧಿಗಿರಲಿ ಇಬ್ಭಾಗಕ್ಕಲ್ಲ


Team Udayavani, Aug 3, 2018, 2:50 PM IST

dvg-1.jpg

ದಾವಣಗೆರೆ: ಪ್ರತ್ಯೇಕ ರಾಜ್ಯ ರಚನೆ ಒತ್ತಾಯ ವಿರೋಧಿಸಿ ಗುರುವಾರ ಕರ್ನಾಟಕ ರಕ್ಷಣಾ ವೇದಿಕೆ (ಟಿ.ಎ. ನಾರಾಯಣಗೌಡ) ನೇತೃತ್ವದಲ್ಲಿ ಉಪ ವಿಭಾಗಾಧಿಕಾರಿ ಕಚೇರಿ ಬಳಿ ಧರಣಿ ನಡೆಯಿತು.

ಈಗಿನ ಕರ್ನಾಟಕ ಏಳೂವರೆ ಶತಮಾನಗಳ ಕಾಲ ಹರಿದು ಹಂಚಿಹೋಗಿತ್ತು. ಅನೇಕ ಮಹಾನೀಯರ ತ್ಯಾಗ, ಬಲಿದಾನದ ಪರಿಣಾಮ 1956ರಲ್ಲಿ ಏಕೀಕರಣಗೊಂಡಿತು. ಆ ನಂತರದ 62 ವರ್ಷಗಲ್ಲಿ ರಾಜ್ಯ ಪ್ರಗತಿ ಪಥದಲ್ಲಿ ಸಾಗುತ್ತಿದೆ. ಉತ್ತರ ಕರ್ನಾಟಕದ ಹಲವಾರು ಭಾಗ ಅಭಿವೃದ್ಧಿಗೊಂಡಿಲ್ಲ ಎಂಬ ಆರೋಪ ನಿಜ. ಜನಪ್ರತಿನಿಧಿಗಳು, ಅಧಿಕಾರಿಗಳ ನಿರ್ಲಕ್ಷéದ ಪರಿಣಾಮ ಉತ್ತರ ಕರ್ನಾಟಕ ಹಿಂದುಳಿದಿದೆ ಎಂಬುದರಲ್ಲಿ ಎರಡು ಮಾತಿಲ್ಲ. ಅಭಿವೃದ್ಧಿ ಆಗಿಲ್ಲ ಎಂಬ ಕಾರಣಕ್ಕೆ ರಾಜ್ಯವನ್ನೇ ಪ್ರತ್ಯೇಕಿಸುವ ಮಾತುಗಳಾಡುವುದು, ಹೋರಾಟಕ್ಕೆ ಮುಂದಾಗುವುದು ಅಕ್ಷಮ್ಯ ಅಪರಾಧ. ಕರ್ನಾಟಕ ರಕ್ಷಣಾ ವೇದಿಕೆ ಯಾವ ಕಾರಣಕ್ಕೂ ರಾಜ್ಯ ಇಬ್ಭಾಗಕ್ಕೆ ಬಿಡುವುದೇ ಇಲ್ಲ ಎಂದು ಧರಣಿ ನಿರತರು ತಿಳಿಸಿದರು.

ಉತ್ತರ ಕರ್ನಾಟಕ ಅಭಿವೃದ್ಧಿ ಆಗಿಲ್ಲ ಎಂಬುದು ಬಹಿರಂಗ ಸತ್ಯ. ಅಭಿವೃದ್ಧಿಗೆ ಒತ್ತಾಯಿಸಿ ಹೋರಾಟ ನಡೆಸುವುದು ನ್ಯಾಯ ಸಮ್ಮತ. ಆದರೆ, ಅಭಿವೃದ್ಧಿ ಆಗಿಲ್ಲ ಎಂಬ ವಿಚಾರ ಮುಂದಿಟ್ಟುಕೊಂಡು ಅಖಂಡ ಕರ್ನಾಟಕವನ್ನು ಎರಡು ಭಾಗ ಮಾಡಬೇಕು ಎಂಬುದಾಗಿ ಒತ್ತಾಯಿಸುವುದು ಸರಿ ಅಲ್ಲ. ನಮ್ಮನ್ನಾಳಿದ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ನಿರ್ಲಕ್ಷéದ ಕಾರಣದಿಂದಾಗಿಯೇ ಅಭಿವೃದ್ಧಿ ಆಗಿಲ್ಲ. ಸ್ಥಳೀಯ ಸಮಸ್ಯೆಗಳ ಪರಿಹಾರ, ಸಮಗ್ರ ಅಭಿವೃದ್ಧಿಗೆ ಸಂಬಂಧಿತ ಜನಪ್ರತಿನಿಧಿಗಳ ವಿರುದ್ಧ ಹೋರಾಟ ಮಾಡಬೇಕೇ ಹೊರತು ಕರ್ನಾಟಕವನ್ನ ತುಂಡು ತುಂಡಾಗಿ ಮಾಡುವ ಯತ್ನ ಇರಲಿ, ಮಾತುಗಳೂ ಯಾವ ಕಾರಣಕ್ಕೆ ಒಪ್ಪುವಂತವಲ್ಲ. ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಹಿಂದಿನಿಂದಲೂ ಹೋರಾಟ ನಡೆಸುತ್ತಿರುವ ವೇದಿಕೆ ಮುಂದೆಯೂ ಆ ವಿಚಾರವಾಗಿ ಹೋರಾಟ ನಡೆಸಲಿದೆ ಎಂದು ತಿಳಿಸಿದರು.

ಪ್ರತ್ಯೇಕ ರಾಜ್ಯಕ್ಕೆ ಒತ್ತಾಯಿಸಿ ಬೆಂಬಲದ ಮಾತುಗಳಾಡಿರುವ ಉತ್ತರ ಕರ್ನಾಟಕದ ಕೆಲವು ಜನಪ್ರತಿನಿಧಿಗಳು, ಮಠಾಧೀಶರರು, ರೈತ ಸಂಘದ ಪದಾಧಿಕಾರಿಗಳು ಕರ್ನಾಟಕದ ಏಕೀಕರಣಕ್ಕೆ ಶ್ರಮಿಸಿದ ಕೆಂಗಲ್‌ ಹನುಮಂತಯ್ಯ, ಆಲೂರು ವೆಂಕಟರಾವ್‌, ಬಳ್ಳಾರಿ ರಂಜಾನ್‌ಸಾಬ್‌, ಕೆ.ಸಿ. ರೆಡ್ಡಿ, ರಾ.ರ. ದೇಶಪಾಂಡೆ, ಎಸ್‌. ನಿಜಲಿಂಗಪ್ಪ, ದ.ರಾ. ಬೇಂದ್ರೆ, ಪಾಟೀಲ್‌ ಪುಟ್ಟಪ್ಪ ಅವರಂಥ ಮಹಾನ್‌ ನಾಯಕರನ್ನು ಮರೆತಂತೆ ಕಾಣುತ್ತದೆ. ಪ್ರತ್ಯೇಕ ರಾಜ್ಯಕ್ಕೆ ಒತ್ತಾಯಿಸುವುದು ಹೇಯ ಕೃತ್ಯ ಎಂದು ಖಂಡಿಸಿದರು.

ಉತ್ತರ ಕರ್ನಾಟಕದ ಪ್ರತ್ಯೇಕತೆಯ ಕೂಗು ಮೂಲ ಕಾರಣ ಮುಖ್ಯಮಂತ್ರಿ ಕುಮಾರಸ್ವಾಮಿ. ಒಂದು ಜವಾಬ್ದಾರಿಯುತ ಸ್ಥಾನದಲ್ಲಿರುವವವರು ಇಡೀ ನಾಡಿನ ಬಗ್ಗೆ ಮಾತನಾಡಬೇಕು. ಮತ ನೀಡಿಲ್ಲ ಎಂಬ ಕಾರಣಕ್ಕೆ ಪ್ರತ್ಯೇಕದ ಮಾತುಗಳಾಡುವುದು ಸಹ ಖಂಡನೀಯ. ಅಖಂಡ ಕರ್ನಾಟಕ ಇಬ್ಭಾಗಿಸುವ ಮಾತುಗಳಾಡುವುದು ಸರಿಯಲ್ಲ ಎಂದು ತಿಳಿಸಿದರು. ಕೇಂದ್ರ ಸರ್ಕಾರ ಮಹದಾಯಿ ವಿಚಾರವಾಗಿ ಕರ್ನಾಟಕ, ಮಹಾರಾಷ್ಟ್ರ, ಗೋವಾ ರಾಜ್ಯಗಳ
ಮುಖ್ಯಮಂತ್ರಿಗಳ ಸಭೆ ನಡೆಸಿ, ಪರಿಹರಿಸಬೇಕು.

ದೆಹಲಿಯ ಏಮ್ಸ್‌ ಮಾದರಿಯ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಯನ್ನು ಕಲಬುರುಗಿ, ಬೆಳಗಾವಿ ಕಂದಾಯ ವಿಭಾಗದಲ್ಲಿ ಪ್ರಾರಂಭ ಒಳಗೊಂಡಂತೆ ಇತರೆ ಬೇಡಿಕೆಗಳ ಈಡೇರಿಸುವ ಮೂಲಕ ಉತ್ತರ ಕರ್ನಾಟಕದ ಅಭಿವೃದ್ಧಿ ಮಾಡಬೇಕು ಎಂದು ಒತ್ತಾಯಿಸಿದರು.

ಕರ್ನಾಟಕ ರಕ್ಷಣಾ ವೇದಿಕೆ(ಟಿ.ಎ. ನಾರಾಯಣಗೌಡ) ಜಿಲ್ಲಾ ಅಧ್ಯಕ್ಷ ಎಂ.ಎಸ್‌. ರಾಮೇಗೌಡ, ಜಾನಪದ ತಜ್ಞ ಡಾ| ಎಂ.ಜಿ. ಈಶ್ವರಪ್ಪ, ಸರ್ಕಾರಿ ನೌಕರರ ಸಂಘದ ಡಿ. ಮಲ್ಲಿಕಾರ್ಜುನ್‌, ಕೆ.ಜಿ. ಶಿವಕುಮಾರ್‌, ಟಿ. ಶಿವಕುಮಾರ್‌, ಬಿ.ದಿಳೆಪ್ಪ, ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷೆ ಬಸಮ್ಮ, ಹನುಮಂತಪ್ಪ, ಸಂತೋಷ್‌, ಧರ್ಮರಾಜ್‌, ಮಂಜುಳಾ, ಶಾಂತಮ್ಮ, ಸಲ್ಮಾಬಾನು, ನಿರ್ಮಲ, ವೀರೇಶ್‌, ಮಲ್ಲಿಕಾರ್ಜುನ್‌, ಪರಮೇಶ್‌, ಎನ್‌.ಟಿ. ಹನುಮಂತಪ್ಪ, ತಿಮ್ಮೇಶ್‌ ಪಾಲ್ಗೊಂಡಿದ್ದರು. 

ಟಾಪ್ ನ್ಯೂಸ್

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

6-ptr

Puttur: ಬಸ್ – ಬೈಕ್‌ ಅಪಘಾತ; ಸವಾರ ಸಾವು

Parliament; Pushing in front of Parliament House; Two MPs injured, allegations against Rahul Gandhi

Parliament; ಸಂಸತ್‌ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್‌ ವಿರುದ್ದ ಆರೋಪ

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

sagara

Sagara: ಕಾಡಾನೆಗಳ ಹಾವಳಿ; ಲಕ್ಷಾಂತರ ರೂ. ಬೆಳೆ ನಷ್ಟ

19-thirthahalli

Thirthahalli: ನದಿಗೆ ಹಾರಿ ಕಾಲೇಜು ವಿದ್ಯಾರ್ಥಿ ಮೃತ್ಯು

1-edd

Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು

9

Shivamogga: ಅಯೋಧ್ಯೆ ರೀತಿ ವ‌ಕ್ಫ್ ಹಗರಣಕ್ಕೂ ನ್ಯಾಯ ಸಿಕ್ಕೇ ಸಿಗುತ್ತದೆ; ಈಶ್ವರಪ್ಪ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

3

Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್‌ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ

2

Mudbidri: ಸರಕಾರಿ ಬಸ್ಸಿಗಿಲ್ಲ ನಿಲ್ದಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.