ಭದ್ರಾವತಿ ಸಾ ಮಿಲ್ ನಲ್ಲಿ ಅಗ್ನಿ ಅನಾಹುತ: ಭಾರೀ ನಷ್ಟ, ಇನ್ನೂ ಆರದ ಬೆಂಕಿ!
Team Udayavani, Jan 6, 2022, 10:06 AM IST
ಭದ್ರಾವತಿ: ಇಲ್ಲಿನ ಹೊಸ ಸೇತುವೆ ರಸ್ತೆಯಲ್ಲಿರುವ ಮಂಜುನಾಥ ಸಾ ಮಿಲ್ ನಲ್ಲಿ ನಿನ್ನೆ ರಾತ್ರಿ ಕಾಣಿಸಿಕೊಂಡ ಬೆಂಕಿ ಭಾರಿ ಅನಾಹುತ ಸೃಷ್ಟಿಸಿದ್ದು, ಸತತ ಎಂಟುವರೆ ಗಂಟೆಗಳ ಕಾಲ 50ಕ್ಕೂ ಹೆಚ್ಚು ಅಗ್ನಿಶಾಮಕ ದಳದ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದರೂ ಸಂಪೂರ್ಣವಾಗಿ ಬೆಂಕಿ ನಂದಿಸಲು ಸಾಧ್ಯವಾಗಿಲ್ಲ.
ಬೆಂಕಿಯ ತೀವ್ರತೆಗೆ ಸಾ ಮಿಲ್ ಪಕ್ಕದಲ್ಲಿದ್ದ ಪ್ಲಂಬಿಂಗ್ ಅಂಗಡಿ ಸಂಪೂರ್ಣ ಭಸ್ಮವಾಗಿದ್ದರೆ, ಅದರ ಪಕ್ಕದ ಮತ್ತೊಂದು ಅಂಗಡಿ ಬಹುತೇಕ ಸುಟ್ಟುಹೋಗಿದೆ. ಮುಂಜಾಗ್ರತಾ ಕ್ರಮವಾಗಿ ಇಡೀ ಬಡಾವಣೆಯಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ. ರಾತ್ರಿಯಿಂದಲೇ ಪೊಲೀಸರು ಹಾಗೂ ಆಂಬ್ಯುಲೆನ್ಸ್ ಸ್ಥಳದಲ್ಲೇ ಬೀಡುಬಿಟ್ಟಿದೆ. ಬುಧವಾರ ರಾತ್ರಿ 11 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣ ಮಾತ್ರದಲ್ಲೇ ವ್ಯಾಪಕವಾಗಿ ಅಗ್ನಿಕೆನ್ನಾಲಿಗೆ ಚಾಚಿದ್ದು, ಕೋಟ್ಯಾಂತರ ರೂ. ಬೆಲೆಬಾಳುವ ನಾಟ ಸುಟ್ಟು ಭಸ್ಮವಾಗಿದೆ.
ರಾತ್ರಿ ಹೊಗೆಯಾಡುವುದು ಕಂಡುಬಂದಿತು. ಅಕ್ಕಪಕ್ಕದವರಿಗೆ ಹಾಗೂ ಸಾಮಿಲ್ ಮಾಲಿಕರಿಗೆ ತಿಳಿಸುವುದರೊಳಗಾಗಿ ಬೆಂಕಿ ಹೊತ್ತಿಕೊಂಡು ಉರಿಯಿತು. ನಾವೂ ಸೇರಿದಂತೆ ಅಕ್ಕಪಕ್ಕದ ಮನೆಯವರು ಹೆದರಿಕೆಯಿಂದ ಹೊರಕ್ಕೆ ಓಡಿಬಂದು ಇಡೀ ರಾತ್ರಿ ರಸ್ತೆ ಪಕ್ಕದಲ್ಲಿಯೇ ಕಳೆದಿದ್ದೇವೆ. ನಮ್ಮ ಮನೆ ಹಿಂಭಾಗದ ಗೋಡೆ ಬಹುತೇಕ ಸೀಳು ಬಂದಿದ್ದು, ಬಹಳಷ್ಟು ನಷ್ಟವುಂಟಾಗಿದೆ ಎಂದು ಸ್ಥಳೀಯ ಮಹಿಳೆಯೊಬ್ಬರು ಅಳಲು ತೋಡಿಕೊಂಡರು.
ಇದನ್ನೂ ಓದಿ:ಭಾರೀ ವೇಗ ಪಡೆದ ಕೋವಿಡ್: 24 ಗಂಟೆಯಲ್ಲಿ 90 ಸಾವಿರಕ್ಕೂ ಹೆಚ್ಚು ಸೋಂಕು ಪ್ರಕರಣ ಪತ್ತೆ!
ಘಟನೆ ಕುರಿತಂತೆ ಮಾಹಿತ ನೀಡಿದ ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿ ಲಕ್ಕಪ್ಪ 11 ಗಂಟೆ ಸುಮಾರಿಗೆ ನಮಗೆ ಮಾಹಿತಿ ಬಂದ ತಕ್ಷಣ ಎರಡು ವಾಹನಗಳೊಂದಿಗೆ ಸ್ಥಳಕ್ಕೆ ಧಾಮಿಸಿ ನಮ್ಮ ಸಿಬ್ಬಂದಿ ನಂದಿಸಲು ಪ್ರಯತ್ನಿಸಿದ್ದಾರೆ. ಆದರೆ, ಬೆಂಕಿ ಕೆನ್ನಾಲಿಗೆ ಹೆಚ್ಚಿದ್ದ ಕಾರಣ ಬೇರೆ-ಬೇರೆ ಊರುಗಳಿಂದ ಸುಮಾರು 9 ವಾಹನಗಳನ್ನು ತರಸಿಕೊಂಡು ಕಾರ್ಯಾಚರಣೆ ನಡೆಸುತ್ತಿದ್ದೇವೆ. ಬೆಂಕಿಯ ಕೆನ್ನಾಲಿಗೆ ಹೆಚ್ಚುತ್ತಿದ್ದು, ಸುಮಾರು ಎಂಟುವರೆ ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಲು ಪ್ರಯತ್ನಿಸುತ್ತಿದ್ದೇವೆ. ಪೂರ್ಣವಾಗಿ ಬೆಂಕಿ ನಂದಿಸಲು ಇನ್ನು ಕನಿಷ್ಟ ಎರಡು ಗಂಟೆಗಳ ಕಾಲ ಬೇಕಾಗುತ್ತದೆ. ಘಟನೆ ನಡೆದಾಕ್ಷಣ ಸ್ಥಳಕ್ಕೆ ಧಾವಿಸಿ ಅಕ್ಕಪಕ್ಕದ ನಿವಾಸಿಗಳನ್ನು ಹೊರಕ್ಕೆ ಕರೆತಂದು ಮನೆಗಳಲ್ಲಿದ್ದ ಸಿಲಿಂಡರ್ ಗಳನ್ನು ಹೊರಕ್ಕೆ ಸಾಗಿಸುವ ಮೂಲಕ ಸಂಭವನೀಯ ದೊಡ್ಡ ದುರಂತವನ್ನು ತಪ್ಪಿಸಲು ಪ್ರಯತ್ನಿಸಿದ್ದೇವೆ ಎಂದರು.
ಇದನ್ನೂ ಓದಿ:ದಕ್ಷಿಣ ಕನ್ನಡ: ವೀಕೆಂಡ್ ಕರ್ಫ್ಯೂ; ಈ ವಾರ ಪೂರ್ವ ನಿಗದಿತ ಕಾರ್ಯಕ್ರಮಗಳಿಗೆ ಅವಕಾಶ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
B. Y. Raghavendra: 10 ವರ್ಷದಲ್ಲಿ ವಕ್ಫ್ ಆಸ್ತಿ ಶೇ.135 ಹೆಚ್ಚಳ
Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿಟ್ಟು ವ್ಯಕ್ತಿ ನಾಪತ್ತೆ ಪ್ರಕರಣ; ಶವ ಪತ್ತೆ
ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?
Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.