ಅವೈಜ್ಞಾನಿಕ ನೀರಿನ ಶುಲ್ಕ ಸರಿಪಡಿಸಿ
ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆ ಧರಣಿ
Team Udayavani, May 26, 2022, 2:52 PM IST
ಶಿವಮೊಗ್ಗ: ನಗರದಲ್ಲಿ 24×7 ಕುಡಿಯುವ ನೀರಿನ ಶುಲ್ಕ ಅವೈಜ್ಞಾನಿಕವಾಗಿದ್ದು, ಇದನ್ನು ಸರಿಪಡಿಸಲು ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ನಾಗರಿಕರ ಸಭೆ ಕರೆಯಬೇಕೆಂದು ಆಗ್ರಹಿಸಿ ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟದಿಂದ ಬುಧವಾರ ಶಾಸಕ ಕೆ.ಎಸ್. ಈಶ್ವರಪ್ಪ ಅವರ ಕಚೇರಿ ಎದುರು ಧರಣಿ ನಡೆಸಲಾಯಿತು.
ಸಭೆ ಕರೆಯುವಂತೆ ಶಾಸಕರಿಗೆ ಎರಡು ಬಾರಿ ಮನವಿ ಸಲ್ಲಿಸಿದ್ದು, ಆದಾಗ್ಯೂ ಶಾಸಕರು ಮನವಿಯನ್ನು ಪರಿಗಣಿಸದೇ ಇರುವುದರಿಂದ ಕಚೇರಿ ಮುಂಭಾಗದಲ್ಲಿ ಶಾಂತಿಯುತ ಹಾಗೂ ಕಾನೂನಾತ್ಮಕ ಪ್ರತಿಭಟನೆ ಕೈಗೊಂಡಿರುವುದಾಗಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಕೆ.ವಿ. ವಸಂತಕುಮಾರ್ ತಿಳಿಸಿದರು.
ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 61 ಸಾವಿರ ನೀರಿನ ತೆರಿಗೆದಾರರಿದ್ದಾರೆ. 24×7 ನೀರಿನ ಸಂಪರ್ಕವನ್ನು ಕೆಲವು ವಾರ್ಡ್‌ಗಳಲ್ಲಿ ಮಾತ್ರ ಕಲ್ಪಿಸಲಾಗಿದೆ. ಈಗಿರುವ 12 ಸಾವಿರ 24×7 ಸಂಪರ್ಕದಲ್ಲಿ 6 ಸಾವಿರ ಸಂಪರ್ಕದವರಿಗೆ ಮಾತ್ರ ನೀರಿನ ತೆರಿಗೆ ವಿಧಿಸಲಾಗುತ್ತಿದೆ. ಈ ನೀರಿನ ಶುಲ್ಕ ಅತ್ಯಂತ ದುಬಾರಿಯಾಗಿದೆ ಎಂದರು.
ಸಮಾನ ಮಾನದಂಡ ವಿಧಿಸಿ ನೀರಿನ ಶುಲ್ಕ ನಿಗದಿ ಮಾಡಬೇಕು ಎಂದು ಒತ್ತಾಯಿಸಿದ ಅವರು, ಶಾಸಕರು ಸಂಬಂಧಿಸಿದ ಅಧಿಕಾರಿಗಳು ಹಾಗೂ ನಾಗರಿಕರ ಸಭೆಯನ್ನು ಕೂಡಲೇ ಕರೆಯದಿದ್ದಲ್ಲಿ ಪ್ರತಿವಾರ ಶಾಸಕರ ಕಚೇರಿ ಎದುರು ಧರಣಿ ನಡೆಸಲಾಗುವುದು. ಈ ಹೋರಾಟ ನಿರಂತರವಾಗಿದ್ದು, ಒಂದು ವೇಳೆ ನಮ್ಮ ಹೋರಾಟಕ್ಕೆ ಸ್ಪಂದಿಸದೇ ಸಭೆ ಕರೆಯದಿದ್ದಲ್ಲಿ ಅಮರಣಾಂತ ಉಪವಾಸ ಸತ್ಯಾಗ್ರಹ ಶಾಸಕರ ಕಚೇರಿ ಎದುರು ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಧರಣಿಯಲ್ಲಿ ಒಕ್ಕೂಟದ ಪ್ರಮುಖರಾದ ಡಾ| ಎ.ಸತೀಶ್ ಕುಮಾರ್ ಶೆಟ್ಟಿ, ಎಸ್.ಬಿ. ಅಶೋಕ್ ಕುಮಾರ್, ಜನಾರ್ದನ ಪೈ, ಜನಮೇಜಿರಾವ್, ನಾಗರಾಜ್, ರಘುಪತಿ, ಚಂದ್ರಶೇಖರ್ ಗೌಡ ಮೊದಲಾದವರಿದ್ದರು.
ಶಿವಮೊಗ್ಗದಲ್ಲಿ ಬಲೂ ದುಬಾರಿ
ಮೈಸೂರಿನಲ್ಲಿ 25 ಸಾವಿರ ಲೀಟರ್ 150 ರೂ. ಶುಲ್ಕ ಇದ್ದರೆ ಶಿವಮೊಗ್ಗದಲ್ಲಿ 275 ರೂ. ಶುಲ್ಕ ವಿಧಿಸಲಾಗುತ್ತಿದೆ. ಮೈಸೂರಿನಲ್ಲಿ 50 ಸಾವಿರ ಲೀಟರ್‌ಗೆ 275 ರೂ. ಶುಲ್ಕ ವಿಧಿಸಿದರೆ ಶಿವಮೊಗ್ಗದಲ್ಲಿ 400 ರೂ. ಶುಲ್ಕ ವಿಧಿಸಲಾಗುತ್ತಿದೆ. ಈಗಾಗಲೇ ವಿಧಿಸಲಾಗಿರುವ ನೀರಿನ ಶುಲ್ಕ ಅವೈಜ್ಞಾನಿಕವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Holehonnur: ಎರಡು ಪ್ರತ್ಯೇಕ ರಸ್ತೆ ಅಪಘಾತ
Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
Max: ಇಂದು ಸುದೀಪ್ ಮ್ಯಾಕ್ಸ್ ತೆರೆಗೆ; ಆ್ಯಕ್ಷನ್ ಅಡ್ಡದಲ್ಲಿ ಕಿಚ್ಚ ಮಿಂಚು
Gundlupete: ಬೋನಿಗೆ ಬಿದ್ದ ಗಂಡು ಚಿರತೆ
Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.