ಕೋವಿಡ್ 19; ಜಿಲ್ಲಾಡಳಿತದ ನಿರ್ದೇಶನ ಪಾಲಿಸಿ
Team Udayavani, Apr 1, 2020, 6:56 PM IST
ಶಿವಮೊಗ್ಗ: ಕೋವಿಡ್ 19 ವೈರಸ್ ನಿಯಂತ್ರಣ ಸಂದರ್ಭದಲ್ಲಿ ಜಿಲ್ಲಾಡಳಿತಕ್ಕೆ ನೆರವಾಗಲು ನೋಂದಣಿ ಮಾಡಿಸಿರುವ ಕೋವಿಡ್ 19 ವಾರಿಯರ್ ಸ್ವಯಂ ಸೇವಕರು ಜಿಲ್ಲಾಡಳಿತದ ನಿರ್ದೇಶನದ ಪ್ರಕಾರ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ತಿಳಿಸಿದರು.
ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲೆಯ ಕೋವಿಡ್ 19 ವಾರಿಯರ್ ಪ್ರಥಮ ತಂಡಕ್ಕೆ ಅಗತ್ಯ ಸೂಚನೆಗಳನ್ನು ನೀಡಿ ಅವರು ಮಾತನಾಡಿದರು. ಸಾಮಾಜಿಕ ಜಾಲತಾಣಗಳಲ್ಲಿ ಬರುವ ವದಂತಿಗಳನ್ನು ಜಿಲ್ಲಾಡಳಿತದ ಗಮನಕ್ಕೆ ತಕ್ಷಣ ತರುವುದು. ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವವರಿಗೆ ಮನೆ ಬಾಗಿಲಿಗೆ ಆಹಾರ, ಅಗತ್ಯವಿರುವವರಿಗೆ ಪಡಿತರ ಪೂರೈಕೆ ಮಾಡುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವುದು, ಅಂಗಡಿಗಳ ಮುಂದೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಬಗ್ಗೆ ಕ್ರಮ ವಹಿಸುವುದು, ಜನರು ಗುಂಪು ಸೇರದಂತೆ ಸೂಚನೆಗಳನ್ನು ನೀಡುವುದು, ಸಂಕಷ್ಟದಲ್ಲಿರುವ ಕಾರ್ಮಿಕರಿಗೆ ಆಶ್ರಯ ಇತ್ಯಾದಿ ಕಾರ್ಯಗಳನ್ನು ಕೈಗೊಳ್ಳುವುದು ಸೇರಿದಂತೆ ಜಿಲ್ಲಾಡಳಿತ ಸೂಚಿಸುವ ಕಾರ್ಯಗಳನ್ನು ಕೋವಿಡ್ 19 ವಾರಿಯರ್ ನಿರ್ವಹಿಸಬೇಕಾಗಿದೆ ಎಂದು ಅವರು ಹೇಳಿದರು.
ಸಾಮಾಜಿಕ ಜಾಲತಾಣಗಳಲ್ಲಿ ಕಂಡು ಬರುವ ಯಾವುದೇ ವದಂತಿ, ಅನ ಧಿಕೃತ ಸುದ್ದಿಗಳನ್ನು ತಕ್ಷಣ ಜಿಲ್ಲಾ ವಾರ್ತಾಧಿಕಾರಿ ಅವರ ಗಮನಕ್ಕೆ ತರಬೇಕು. ಕೋವಿಡ್ 19 ವಾರಿಯರ್ ಸ್ವಯಂ ಸೇವಕರಿಗೆ ಸರ್ಕಾರದ ವತಿಯಿಂದ ಗುರುತಿನ ಪತ್ರ ಒದಗಿಸಲಾಗಿದ್ದು, ಯಾವುದೇ ಕಾರಣಕ್ಕೂ ಅದನ್ನು ದುರುಪಯೋಗ ಪಡಿಸಿಕೊಳ್ಳಬಾರದು. ದುರುಪಯೋಗ ಪಡಿಸಿದರೆ ಕಾನೂನು ಕ್ರಮ ಜರುಗಿಸಲಾಗುವುದು. ಸ್ವಯಂಸೇವಾ ಕಾರ್ಯಗಳಿಗೆ ಮಾತ್ರ ಗುರುತಿನ ಚೀಟಿ ಬಳಕೆ ಮಾಡಬೇಕು ಎಂದು ಅವರು ಸ್ಪಷ್ಟಪಡಿಸಿದರು.
ರೆಡ್‌ಕ್ರಾಸ್ ಸಂಸ್ಥೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕಾರ್ಮಿಕ ಸೊಸೈಟಿ ಜಂಟಿಯಾಗಿ ಕೋವಿಡ್ 19 ವಾರಿಯರ್ಗಳನ್ನು ಆನ್‌ಲೈನ್ ಮೂಲಕ ನೋಂದಣಿ ಮಾಡಿಸಿ ಈಗಾಗಲೇ ತರಬೇತಿ ನೀಡಿದೆ. ಜಿಲ್ಲೆಯಲ್ಲಿ 200ಕ್ಕೂ ಅ ಧಿಕ ಮಂದಿ ಸ್ವಯಂ ಸೇವಕರಾಗಿ ನೋಂದಾಯಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Holehonnuru: ಕಿರು ಅರಣ್ಯ ಪ್ರದೇಶದಲ್ಲಿ ಕಡವೆ ಬೇಟೆ; ಆರೋಪಿ ಬಂಧನ
Hosanagara: ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ; ದೇಗುಲಕ್ಕೆ ಹಾನಿ
Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ
K. S. Eshwarappa: ಮುಸ್ಲಿಮರಿಗೆ ಮೀಸಲು ನೀಡಿದರೆ ಸಂತರ ನೇತೃತ್ವದಲ್ಲಿ ದಂಗೆ
Shivamogga: ತೆಪ್ಪ ಮಗುಚಿ ಶರಾವತಿ ಹಿನ್ನೀರಿನಲ್ಲಿ ಮೂವರು ಯುವಕರು ನಾಪತ್ತೆ
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.