ಮಾರ್ಗಸೂಚಿ ಪಾಲಿಸಿ-ಕಾಮಗಾರಿ ಪೂರ್ಣಗೊಳಿಸಿ
Team Udayavani, May 29, 2021, 11:28 AM IST
ಶಿವಮೊಗ್ಗ: ಜಿಲ್ಲೆಯಲ್ಲಿ ಈಗಾಗಲೇ ಪ್ರಗತಿಯಲ್ಲಿರುವ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೋವಿಡ್ ಮಾರ್ಗಸೂಚಿ ಉಲ್ಲಂಘನೆಯಾಗದಂತೆ ತ್ವರಿತಗತಿಯಲ್ಲಿ ಅನುಷ್ಟಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು.
ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯಲ್ಲಿ ಕೈಗೊಳ್ಳಲಾಗಿರುವ ಮೆಗಾ ಯೋಜನೆಗಳ ಅನುಷ್ಟಾನದ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು.
ಕೋವಿಡ್ ಕಾರಣದಿಂದ ಅಭಿವೃದ್ಧಿ ಕಾರ್ಯಗಳಿಗೆ ಯಾವುದೇ ಹಿನ್ನಡೆಯಾಗದಂತೆ ಎಚ್ಚರಿಕೆ ವಹಿಸಬೇಕು. ಇದೇ ವೇಳೆ ಕಾಮಗಾರಿಗಳ ನಿರ್ವಹಣೆ ಕುರಿತಾಗಿ ಸರ್ಕಾರ ಹೊರಡಿಸಿರುವ ಕೋವಿಡ್ ಮಾರ್ಗಸೂಚಿಯನ್ನು ಸಹ ಕಟ್ಟುನಿಟ್ಟಿನಿಂದ ಪಾಲಿಸಿ, ನಿಗದಿತ ಅವಧಿ ಒಳಗಾಗಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.
ನಗರ ಹೊರವಲಯದ ಸೋಗಾನೆಯಲ್ಲಿ ಕೈಗೊಳ್ಳಲಾಗಿರುವ ವಿಮಾನ ನಿಲ್ದಾಣ ಕಾಮಗಾರಿ ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸಲಾಗುವುದು. ರನ್‌ವೇ, ಸಂಪರ್ಕ ರಸ್ತೆ, ಕಂಪೌಂಡ್ ನಿರ್ಮಾಣ ಕಾರ್ಯ ನಡೆಯುತ್ತಿದೆ. ಅಕ್ಕಮಹಾದೇವಿಯ ಜನ್ಮಸ್ಥಳವಾದ ಶಿಕಾರಿಪುರ ತಾಲೂಕಿನ ಉಡುಗಣಿಯಲ್ಲಿ 14.80 ಕೋಟಿ ರೂ. ವೆಚ್ಚದಲ್ಲಿ ಬೋಟಿಂಗ್ ಸೇರಿದಂತೆ ಸಿವಿಲ್ ಕ್ರಾಫ್ಟ್ ಕಾಮಗಾರಿಗಳು ನಡೆಯುತ್ತಿವೆ. ಇದೇ ರೀತಿ ಪ್ರವಾಸೋದ್ಯಮ ಮತ್ತು ಸಹ್ಯಾದ್ರಿ ಪಾರಂಪರಿಕ ಅಭಿವೃದ್ಧಿ ಪ್ರಾಧಿಕಾರದ ಒಟ್ಟು 8 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿರುವ ಆ್ಯಂಪಿ ಥಿಯೇಟರ್, ಪ್ರವೇಶ ದ್ವಾರ ಇತ್ಯಾದಿ ಕಾಮಗಾರಿಗಳನ್ನು ಆದಷ್ಟು ಬೇಗನೆ ಪೂರ್ಣಗೊಳಿಸಲು ತಿಳಿಸಿದರು.
ಶಿವಮೊಗ್ಗ ನಗರದಲ್ಲಿ ಹೊಸ ಜಿಲ್ಲಾಡಳಿತ ಭವನ ನಿರ್ಮಾಣಕ್ಕೆ 45 ಕೋಟಿ ರೂ. ಕಾಯ್ದಿರಿಸಲಾಗಿದೆ. ರೈಲ್ವೇ ಕಂಪೌಂಡ್‌ನಲ್ಲಿನ 100 ಅಡಿ ವರ್ತುಲ ರಸ್ತೆ ಕಾಮಗಾರಿ 9 ಕೋಟಿ ರೂ. ವೆಚ್ಚದಲ್ಲಿ ಬಹುತೇಕ ಪೂರ್ಣಗೊಂಡಿದೆ. ತುಮಕೂರು-ಶಿವಮೊಗ್ಗ ಚತುಷ್ಪಥ ರಸ್ತೆ ಕಾಮಗಾರಿ ಭೂಸ್ವಾಧಿಧೀನ ಪ್ರಕ್ರಿಯೆ ತ್ವರಿತಗತಿಯಲ್ಲಿ ನಡೆಯುತ್ತಿದ್ದು, ಈಗಾಗಲೇ 300 ಕೋಟಿ ರೂ. ಜಮೀನು ಮಾಲಿಕರಿಗೆ ನೀಡಲಾಗಿದೆ. ಇನ್ನು ಹೆಚ್ಚುವರಿಯಾಗಿ 765 ಕೋಟಿ ರೂ. ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ ಎಂದು ಅ ಧಿಕಾರಿಗಳು ಮಾಹಿತಿ ನೀಡಿದರು.
423 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಸಿಗಂದೂರು ಸೇತುವೆ ಕಾಮಗಾರಿ 2022 ರ ಡಿಸೆಂಬರ್ ನಲ್ಲಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಶಿವಮೊಗ್ಗ ನಗರಕ್ಕೆ 24/7 ನಿರಂತರ ನೀರು ಸರಬರಾಜು ಯೋಜನೆ, ಚಿತ್ರದುರ್ಗ-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ ಬಾಕಿ ಉಳಿದ ಕಾಮಗಾರಿ, ಶಿವಮೊಗ್ಗ ವಿದ್ಯಾನಗರ ಬಳಿ ರೈಲ್ವೆ ಮೇಲ್ಸೇತುವೆ, ಭದ್ರಾವತಿಯಲ್ಲಿ ರೈಲ್ವೆ ಮೇಲ್ಸೇತುವೆ, ಶಿವಮೊಗ್ಗ-ಕುಂಸಿ ರಸ್ತೆ ಮೇಲ್ಸೇತುವೆ, ಶಿವಮೊಗ್ಗ ನಗರದ ಬೈಪಾಸ್ ರಸ್ತೆಯ ತುಂಗಾ ನದಿಯ ಪಕ್ಕದಲ್ಲಿ ಮತ್ತೂಂದು ಸೇತುವೆ ನಿರ್ಮಾಣ, ತೀರ್ಥಹಳ್ಳಿಯಿಂದ ಶೃಂಗೇರಿವರೆಗಿನ 50 ಕಿಮೀ ಉದ್ದದ ದ್ವಿಪಥ ರಸ್ತೆ ನಿರ್ಮಾಣ, ತೀರ್ಥಹಳ್ಳಿ ಪಟ್ಟಣದಲ್ಲಿ ಸೇತುವೆ ನಿರ್ಮಾಣ, ಶಿವಮೊಗ್ಗ- ಶಿಕಾರಿಪುರ-ರಾಣೆಬೆನ್ನೂರು ಹೊಸ ರೈಲು ಮಾರ್ಗ ಯೋಜನೆ, ಶಿವಮೊಗ್ಗ ಹಳೆ ಜೈಲು ಆವರಣದಲ್ಲಿ ಫ್ರೀಡಂ ಪಾರ್ಕ್ ಅಭಿವೃದ್ಧಿ, ಸೊರಬ ಪಟ್ಟಣದ ಆಂಜನೇಯ ಸ್ವಾಮಿ ದೇವಸ್ಥಾನದಿಂದ ದಂಡಾವತಿ ಸೇತುವೆವರೆಗೆ ರಸ್ತೆ ಅಗಲೀಕರಣ ಸಂಬಂಧಿಸಿದ ಭೂಸ್ವಾಧಿಧೀನ ಪ್ರಕ್ರಿಯೆ, ಕೋಟೆ ಗಂಗೂರು ರೈಲ್ವೇ ಟರ್ಮಿನಲ್ ನಿರ್ಮಾಣ ಕಾಮಗಾರಿಗಳ ಅನುಷ್ಟಾನದ ಪ್ರಗತಿಯನ್ನು ಜಿಲ್ಲಾಧಿಕಾರಿಗಳು ಪರಿಶೀಲಿಸಿದರು.
ಸಭೆಯಲ್ಲಿ ಉಪಸ್ಥಿತರಿದ್ದ ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಅಗತ್ಯ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.