ಮತ್ತೆ ಕಾಣಿಸಿಕೊಂಡ ಕಾಡಾನೆ: ಹೆಚ್ಚಿದ ಆತಂಕ
Team Udayavani, May 12, 2022, 2:19 PM IST
ಶಿವಮೊಗ್ಗ: ಜಿಲ್ಲೆಯ ಉಂಬ್ಳೇಂಬೈಲು ಭಾಗದಲ್ಲಿ ಮತ್ತೆ ಕಾಡಾನೆ ಕಾಣಿಸಿಕೊಂಡಿದ್ದು, ಕಳೆದ ಕೆಲ ದಿನದಿಂದ ಗ್ರಾಮದ ಸನಿಹದ ಕಾಡಿನಲ್ಲೇ ಬೀಡುಬಿಟ್ಟಿದೆ.
ಉಂಬ್ಳೇಬೈಲು ಸರ್ಕಲ್‌ನಿಂದ ಕೈದೊಟ್ಲು ಗ್ರಾಮಕ್ಕೆ ತೆರಳುವ ರಸ್ತೆಯಲ್ಲಿ ಒಂಟಿಸಲಗ ಪತ್ತೆಯಾಗಿದೆ. ಗ್ರಾಮದ ಸದಾನಂದ ಶೆಟ್ಟಿ ಎಂಬುವವರ ಮನೆ ಮುಂಭಾಗದಲ್ಲೂ ಓಡಾಡಿದೆ. ಹೀಗಾಗಿ, ಉಂಬ್ಳೇಬೈಲು ಸುತ್ತಮುತ್ತಲಿನ ಗ್ರಾಮದ ರೈತರು ಹಾಗೂ ಜನರಲ್ಲಿ ಮತ್ತೆ ಆತಂಕ ಶುರುವಾಗಿದೆ. ಈ ಹಿಂದೆ ಕೂಡ ಉಂಬ್ಳೇಬೈಲು ಸುತ್ತಮುತ್ತಲ ಗ್ರಾಮದ ಅಡಿಕೆ, ಬಾಳೆ ತೋಟಕ್ಕೆ ನುಗ್ಗಿ ಕಾಡಾನೆಗಳು ಬೆಳೆ ನಾಶ ಮಾಡಿದ್ದವು.
ತಿಂಗಳ ಹಿಂದಷ್ಟೇ ಈ ಭಾಗದಲ್ಲಿ ಕಾಣಿಸಿಕೊಂಡಿದ್ದ ಕಾಡಾನೆ ಇದೀಗ ಮತ್ತೆ ಪ್ರತ್ಯಕ್ಷವಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ಶಿವಮೊಗ್ಗ ಹಾಗೂ ಭದ್ರಾವತಿ ತಾಲೂಕಿನ ಲಕ್ಕಿನಕೊಪ್ಪ, ಉಂಬ್ಳೇಬೈಲು, ಮಾರಿದಿಬ್ಬ, ಕೈದೊಟ್ಲು, ಸಾಲಿಗೆರೆ, ಗೋಣಿಬೀಡು ಸೇರಿದಂತೆ ಹಲವು ಗ್ರಾಮಗಳಿಗೆ ನಿರಂತರವಾಗಿ ಆನೆಗಳು ದಾಳಿ ಮಾಡುತ್ತಿವೆ. ತೋಟಕ್ಕೆ ನುಗ್ಗಿ ಅಡಕೆ ಮರಗಳನ್ನೂ ಸಹ ಬುಡಮೇಲು ಮಾಡುತ್ತಿವೆ.
ಅರಣ್ಯ ಇಲಾಖೆ ಕೆಲವು ತಿಂಗಳ ಹಿಂದಷ್ಟೇ ಕಾಡಾನೆ ಕಾಡಿಗಟ್ಟುವ ಕಾರ್ಯಾಚರಣೆ ನಡೆಸಿತ್ತು. ಸಕ್ರೆಬೈಲು ಆನೆ ಬಿಡಾರದ ಆನೆಗಳನ್ನು ಬಳಸಿಕೊಂಡು ಕಾರ್ಯಾಚರಣೆ ನಡೆಸಲಾಗಿತ್ತು. ಇದೀಗ ಮತ್ತೆ ಗ್ರಾಮಕ್ಕೆ ಲಗ್ಗೆ ಇಟ್ಟಿದ್ದು, ಶಾಶ್ವತ ಪರಿಹಾರ ದೊರಕಿಸುವಂತೆ ರೈತರು ಹಾಗೂ ಸ್ಥಳೀಯರು ಆಗ್ರಹಿಸಿದ್ದಾರೆ. ಜೊತೆಗೆ ಫೆನ್ಸಿಂಗ್ ಅಥವಾ ಟ್ರಂಚ್ ನಿರ್ಮಿಸಲು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
B. Y. Raghavendra: 10 ವರ್ಷದಲ್ಲಿ ವಕ್ಫ್ ಆಸ್ತಿ ಶೇ.135 ಹೆಚ್ಚಳ
Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿಟ್ಟು ವ್ಯಕ್ತಿ ನಾಪತ್ತೆ ಪ್ರಕರಣ; ಶವ ಪತ್ತೆ
ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?
Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ
MUST WATCH
ಹೊಸ ಸೇರ್ಪಡೆ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್ ಇದ್ರು: ಫೋಟೋ ಸಾಕ್ಷ್ಯ ಲಭ್ಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.