ಸೋಂಕು ಬರುವುದು ಕಾಂಗ್ರೆಸ್ ನವರಿಗೆ ಮಾತ್ರವೇ? ಬಿಜೆಪಿಯವರಿಗೆ ಬರುವುದಿಲ್ಲವೇ?: ಕಿಮ್ಮನೆ
ಸಹಕಾರ ಸಂಘದಲ್ಲಿರುವುದು ರೈತರ ಶೇರು ಹಣ. ಸರ್ಕಾರ ಈ ಹಣಕ್ಕೆ ಕೈಹಾಕಿರುವುದು ಸರಿಯಲ್ಲ
Team Udayavani, Jul 9, 2020, 4:08 PM IST
ಶಿವಮೊಗ್ಗ: ಸಹಕಾರ ಸಂಘಗಳಲ್ಲಿ ಇರುವುದು ರೈತರ ಶೇರು ಹಣ. ಸರ್ಕಾರ ರೈತರ ಹಣಕ್ಕೆ ಕೈಹಾಕಿರುವುದು ಸರಿಯಲ್ಲ. ಆಶಾ ಕಾರ್ಯಕರ್ತೆಯರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೇ ಹಣ ನೀಡಬೇಕು ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು.
ಜಿಲ್ಲೆಯಲ್ಲಿ ಮಾತನಾಡಿದ ಅವರು ಸಹಕಾರಿ ಸಂಘದಿಂದ ಆಶಾ ಕಾರ್ಯಕರ್ತೆಯರಿಗೆ ಹಣ ದಾನವಾಗಿ ನೀಡಬೇಕು ಎಂದು ಸರ್ಕಾರ ಆದೇಶಿಸಿದೆ ಎಂದು ವಿಚಾರದ ಬಗ್ಗೆ ಮಾತನಾಡಿದರು. ರೈತರ ಹಣ ಕಿತ್ತುಕೊಂಡು ಆಶಾ ಕಾರ್ಯಕರ್ತೆಯರಿಗೆ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಸರ್ಕಾರದ ಈ ನಡೆಯ ವಿರುದ್ಧ ರಾಜ್ಯಾದ್ಯಂತ ಹೋರಾಟ ರೂಪಿಸುತ್ತೇವೆ ಎಂದು ಎಚ್ಚರಿಸಿದರು.
ರಾಜ್ಯದಲ್ಲಿ ಸರ್ಕಾರ ಇದೆ ಎಂದು ಅನಿಸುವುದೇ ಇಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ಒಬ್ಬರು ಕೆಲಸ ಮಾಡುತ್ತಿದ್ದಾರೆ. ಸಚಿವ ಸಂಪುಟದ ಇನ್ಯಾರೂ ಕೆಲಸ ಮಾಡುತ್ತಿಲ್ಲ. ಇಂಥ ಸರ್ಕಾರ ನಡೆಸುವುದರ ಬದಲು ರಾಜೀನಾಮೆ ನೀಡಿ ಮನೆಗೆ ಹೋಗುವುದು ಉತ್ತಮ ಎಂದು ಟೀಕಿಸಿದ ಅವರು, ಇಂಥ ಆಡಳಿತ ನಡೆಸಲು ಬಿಜೆಪಿ 1700 ಕೋಟಿ ರೂಪಾಯಿ ನೀಡಿ ಶಾಸಕರನ್ನು ಖರೀದಿಸಿ ಸರ್ಕಾರ ರಚಿಸಬೇಕಿತ್ತೇ ಎಂದು ವ್ಯಂಗ್ಯವಾಡಿದರು.
ಭಾನುವಾರ ಲಾಕ್ ಡೌನ್ ಮಾಡಲಾಗಿತ್ತು. ಅಂದು ಬಿಜೆಪಿ ಸಚಿವರು ಹಾಗೂ ಶಾಸಕರು ಶಂಕುಸ್ಥಾಪನೆ ಕಾರ್ಯಕ್ರಮ ನಡೆಸಿದ್ದಾರೆ. ಲಾಕ್ ಡೌನ್ ಅವಧಿಯಲ್ಲಿ ಜನರನ್ನು ಸೇರಿಸಿಕೊಂಡು ಶಂಕುಸ್ಥಾಪನೆ ಕಾರ್ಯಕ್ರಮ ನಡೆಸುವುದು ಎಷ್ಟರ ಮಟ್ಟಿಗೆ ಸರಿ. ಕೇವಲ ಕಾಂಗ್ರೆಸ್ ನವರಿಗೆ ಮಾತ್ರ ಸೋಂಕು ಬರುತ್ತದೆಯೇ? ಬಿಜೆಪಿಯವರಿಗೆ ಬರುವುದಿಲ್ಲವೇ? ಹೀಗಾದರೆ ಲಾಕ್ ಡೌನ್ ಮಾಡಿದ್ದು ಯಾರಿಗೆ ಎಂದು ಕಿಮ್ಮನೆ ರತ್ನಾಕರ ಪ್ರಶ್ನಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು
Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!
Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್ ನಿಂದ ಸುಳ್ಳು ಆರೋಪ: ರಾಘವೇಂದ್ರ
Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.