ಕೃಷಿ ಕಾಯ್ದೆ ವಿರೋಧಿಸಿ 26 ರಂದು ರೈತರ ಪರೇಡ್
30 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ
Team Udayavani, Jan 22, 2021, 6:57 PM IST
ಶಿವಮೊಗ್ಗ: ರೈತ ಮತ್ತು ಕಾರ್ಮಿಕ ವಿರೋಧಿಯಾಗಿರುವ ಕಾಯ್ದೆಗಳನ್ನು ಕೇಂದ್ರ ಸರ್ಕಾರ ಹಿಂಪಡೆಯಬೇಕೆಂದು ಆಗ್ರಹಿಸಿ ಜ. 26 ರಂದು ಬೆಂಗಳೂರಿನಲ್ಲಿ ಬೃಹತ್ ಜನ-ಗಣರಾಜ್ಯೋತ್ಸವ ಪರೇಡ್ ನಡೆಸಲು ತೀರ್ಮಾನಿಸಲಾಗಿದೆ ಎಂದು ರಾಜ್ಯ ರೈತಸಂಘ ಮತ್ತು ಹಸಿರು ಸೇನೆ ಗೌರವಾಧ್ಯಕ್ಷ ಎಚ್.ಆರ್. ಬಸವರಾಜಪ್ಪ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ್ರೋಹಿ ಕಾಯ್ದೆಗಳನ್ನು ವಿರೋಧಿ ಸಿ ದೆಹಲಿಯ ಗಡಿಯಲ್ಲಿ ರೈತರು ಕಳೆದ 58 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದು 500ಕ್ಕೂ ಹೆಚ್ಚು ರೈತ ಸಂಘಟನೆಗಳು ಚಾರಿತ್ರಿಕ ಹೋರಾಟ ನಡೆಸುತ್ತಿವೆ. ಈ ಹೋರಾಟವನ್ನು ಬೆಂಬಲಿಸಿ ಬೆಂಗಳೂರಿನಲ್ಲಿ ಪರೇಡ್ ನಡೆಸಲು ತೀರ್ಮಾನಿಸಲಾಗಿದ್ದು, ಈ ಹೋರಾಟ ಎರಡನೇ ಸ್ವಾತಂತ್ರ್ಯ ಚಳವಳಿ ಎಂದರು.
ಇದನ್ನೂ ಓದಿ : ಅಂತರ್ಜಲ ವೃದ್ಧಿಗೆ ಜಾಗೃತಿ ಮೂಡಿಸಿ; ಮಹ್ಮದ್ ಇಸ್ಮಾಯಿಲ್
ಬೆಂಗಳೂರಿನಲ್ಲಿ ನಡೆಯಲಿರುವ ರೈತರ ಗಣರಾಜ್ಯೋತ್ಸವ ಪರೇಡ್‌ನ್ನು ಬೆಂಬಲಿಸಿ ರಾಜ್ಯದ ಎಲ್ಲಾ ರೈತ ಸಂಘಗಳು, ದಲಿತ ಸಂಘರ್ಷ ಸಮಿತಿಗಳು, ಕರ್ನಾಟಕ ಜನಶಕ್ತಿ ವೇದಿಕೆ, ಪ್ರಗತಿಪರ ಸಂಘಟನೆಗಳು, ಬರಹಗಾರರು, ಸಾಹಿತಿಗಳು ಭಾಗವಹಿಸಲಿದ್ದಾರೆ ಎಂದರು.
ಸರ್ಕಾರಿ ಕಾರ್ಯಕ್ರಮ ಮುಗಿದ ನಂತರ ಬೆಂಗಳೂರಿನ ರಾಜಮಾರ್ಗಗಳಲ್ಲಿ ರೈತರು ಟ್ಯಾಕ್ಟರ್, ಎತ್ತಿನ ಗಾಡಿ ಮತ್ತು ವಾಹನಗಳ ಮೂಲಕ ಪರೇಡ್ ನಡೆಸಲಿದ್ದು, ವಾಹನಗಳ ಮೇಲೆ ರಾಷ್ಟ್ರ ಧ್ವಜ, ರೈತ ಸಂಘಟನೆಗಳ ಮತ್ತು ಪ್ರಗತಿಪರ ಸಂಘಟನೆಗಳ ಧ್ವಜಗಳೊಂದಿಗೆ ಮೆರವಣಿಗೆ ನಡೆಸಲಾಗುವುದು. ಸುಮಾರು 25-30 ಸಾವಿರ ಜನ ಭಾಗವಹಿಸಲಿದ್ದು, ಶಿವಮೊಗ್ಗ ಜಿಲ್ಲೆಯಿಂದ 1000 ಜನ ಚಳವಳಿಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಕರ್ನಾಟಕ ಜನಶಕ್ತಿ ವೇದಿಕೆಯ ರಾಜ್ಯ ಕಾರ್ಯದರ್ಶಿ ಕೆ.ಎಲ್. ಅಶೋಕ್ ಮಾತನಾಡಿ, ದೆಹಲಿ ಗಡಿಯಲ್ಲಿ ನಡೆಯುತ್ತಿರುವ ರೈತ ಚಳವಳಿಯಲ್ಲಿ ಇಲ್ಲಿಯವರೆಗೆ 138 ರೈತರು ಹುತಾತ್ಮರಾಗಿದ್ದಾರೆ ಎಂದು ರೈತ ಸಂಘಟನೆಗಳ ವೇದಿಕೆಯಾಗಿರುವ ಸಂಯುಕ್ತ ಕಿಸಾನ್ ಮೋರ್ಚಾ ಹೇಳಿಕೆ ಬಿಡುಗಡೆ ಮಾಡಿದೆ. ಇಷ್ಟು ರೈತರು ಹುತಾತ್ಮರಾಗಿದ್ದರೂ ಸಹ ಕೇಂದ್ರ ಸರ್ಕಾರ ಕಾಯ್ದೆಗಳನ್ನು ಹಿಂಪಡೆಯದೆ ಹಠಮಾರಿ ಧೋರಣೆ ಅನುಸರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜ.26ರಂದು ತುಮಕೂರು ರಸ್ತೆ ನೈಸ್ ಜಂಕ್ಷನ್ ನಿಂದ, ಕೆ.ಆರ್.ಪುರಂ, ಕೆಂಗೇರಿ ಹಾಗೂ ಸಂಗೊಳ್ಳಿ ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕ್‌ವರೆಗೂ ಜಾಥಾ ನಡೆಯಲಿದೆ ತಿಳಿಸಿದರು.
ಚಿಂತಕ ಪ್ರೊ. ರಾಜೇಂದ್ರ ಚೆನ್ನಿ ಮಾತನಾಡಿ, ನ್ಯಾಯ ಕೇಳಲು ನ್ಯಾಯಾಲಯಕ್ಕೆ ಹೋಗದಂತಹ ಕಾನೂನುಗಳನ್ನು ಕೇಂದ್ರ ಸರ್ಕಾರ ಜಾರಿಗೆ ತರುತ್ತಿದ್ದು, ಈ ಕಾನೂನುಗಳು ಶ್ರೀಮಂತರ ಮತ್ತು ಕಾರ್ಪೋರೆಟ್ ಕಂಪನಿಗಳಿಗೆ ಅನುಕೂಲ ಮಾಡಿಕೊಡುವಂತಿವೆ ಎಂದರು. ಸುದ್ದಿಗೋಷ್ಠಿಯಲ್ಲಿ ಡಿಎಸ್‌ಎಸ್ ಜಿಲ್ಲಾ ಪ್ರಧಾನ ಸಂಚಾಲಕ ಟಿ.ಎಚ್. ಹಾಲೇಶಪ್ಪ, ಎಸ್.ಶಿವಮೂರ್ತಿ, ಪ್ರಗತಿಪರ ಹೋರಾಟಗಾರರಾದ ಟಿ. ಅನಿಲ್‌ಕುಮಾರ್, ಬಾವಿಗೆ ಬಿದ್ದು ಯುವತಿ ಸಾವು ಡಿ.ಮಂಜುನಾಥ್, ಡಿ.ಎಸ್.ಶಿವಕುಮಾರ್ ಇದ್ದರು.
ಇದನ್ನೂ ಓದಿ :ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಉಪಕುಲಪತಿಯಾಗಿ ಪ್ರೊ. ಬಿ.ಕೆ ತುಳಸಿಮಾಲಾ ನೇಮಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
B. Y. Raghavendra: 10 ವರ್ಷದಲ್ಲಿ ವಕ್ಫ್ ಆಸ್ತಿ ಶೇ.135 ಹೆಚ್ಚಳ
Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿಟ್ಟು ವ್ಯಕ್ತಿ ನಾಪತ್ತೆ ಪ್ರಕರಣ; ಶವ ಪತ್ತೆ
ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.