ಶಿವಮೊಗ್ಗ: ಈಸೂರು ಗ್ರಾಮದ ಸ್ವಾತಂತ್ರ್ಯ ಹೋರಾಟಗಾರ ಹುಚ್ಚರಾಯಪ್ಪ ನಿಧನ
Team Udayavani, Aug 18, 2020, 11:45 AM IST
ಶಿವಮೊಗ್ಗ: ಜಿಲ್ಲೆಯ ಶಿಕಾರಿಪುರ ತಾಲೂಕಿನ ಈಸೂರು ಗ್ರಾಮದ ಸ್ವಾತಂತ್ರ್ಯ ಹೋರಾಟಗಾರ ಹುಚ್ಚರಾಯಪ್ಪ(104) ಮಂಗಳವಾರ ಮುಂಜಾನೆ ವಿಧಿವಶರಾಗಿದ್ದಾರೆ.
ಹಿರಿಯ ಸ್ವಾತಂತ್ರ್ಯ ಹೋರಾಟಗಾರಾದ ಹುಚ್ಚರಾಯಪ್ಪ ಬ್ರಿಟಿಷರ ವಿರುದ್ಧ 1942 ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಭಾಗವಹಿಸಿದರು ಜೈಲುವಾಸವನ್ನು ಅನುಭವಿಸಿದ್ದರು.
ಈಸೂರು ಗ್ರಾಮವು ಸ್ವಾತಂತ್ರ್ಯ ಹೋರಾಟ ಭಾರತದ ಇತಿಹಾಸದಲ್ಲಿ ಮಹತ್ವದ ಪಾತ್ರವನ್ನು ನಿರ್ವಹಿಸಿದೆ. ಭಾರತದಲ್ಲಿ ಮೊದಲ ಸ್ವಾತಂತ್ರ್ಯ ಪಡೆದ ಗ್ರಾಮ ಇದಾಗಿದೆ.
ಸ್ವಾತಂತ್ರ್ಯ ಹೋರಾಟಗಾರರಾದ ಹುಚ್ಚರಾಯಪ್ಪ ಅನೇಕ ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.
ಈಸೂರು ಗ್ರಾಮದ ಹೋರಾಟಗಾರರೆಲ್ಲರೂ ಮೃತರಾಗಿದ್ದು, ಇವರು ಕೊನೆಯವರಾಗಿದ್ದರು. ಇಂದು ಹುಚ್ಚರಾಯಪ್ಪ ಅವರೂ ಮೃತರಾಗಿದ್ದು, ಈಸೂರು ಗ್ರಾಮದ ಹೋರಾಟಗಾರರ ಕೊನೆಯ ಕೊಂಡಿ ಕಳಚಿಕೊಂಡಿದೆ.
ಹುಚ್ಚರಾಯಪ್ಪ ಅವರಿಗೆ ಅನೇಕ ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ನೀಡಿ ಸರ್ಕಾರ ಗೌರವಿಸಿದೆ. ಹುಚ್ಚರಾಯಪ್ಪನವರಿಗೆ ನಾಲ್ಕು ಜನ ಮಕ್ಕಳು ಇದ್ದಾರೆ ಇಡಿ ಈಸೂರು ಗ್ರಾಮ ಇವರ ಸಾವಿನಿಂದ ಮೌನಕ್ಕೆ ಶರಣಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.