ನಗರದ 31 ವಾರ್ಡ್‌ಗಳಲ್ಲೂ ಫಾಗಿಂಗ್: ಉಷಾ
Team Udayavani, Jul 29, 2017, 1:20 PM IST
ಸಾಗರ: ನಗರದಲ್ಲಿ ಸಾಂಕ್ರಾಮಿಕ ರೋಗ ಹರಡದಂತೆ ತಡೆಗಟ್ಟಲು ಫಾಗಿಂಗ್ ಹಾಗೂ ಮೆಲಾಥಿನ್ ದ್ರಾವಣ ಸಿಂಪಡಣೆಯನ್ನು 31 ವಾರ್ಡ್‌ಗಳಲ್ಲೂ ಕೈಗೊಳ್ಳಲಾಗಿದೆ ಎಂದು ನಗರಸಭೆ ಅಧ್ಯಕ್ಷೆ ಉಷಾ ಎನ್. ತಿಳಿಸಿದ್ದಾರೆ.
ನಗರದ ಶಿವಪ್ಪ ನಾಯಕ ಬಡಾವಣೆಯಲ್ಲಿ ನಗರಸಭೆ ವತಿಯಿಂದ ಫಾಗಿಂಗ್ ಹಾಗೂ ಮೆಲಾಥಿನ್ ದ್ರಾವಣ ಸಿಂಪಡಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಏಕಕಾಲದಲ್ಲಿ ನಾಲ್ಕು ಫಾಗಿಂಗ್ ಯಂತ್ರಗಳು ಹಾಗೂ ಎರಡು ಮೆಲಾಥಿನ್ ದ್ರಾವಣ ಸಿಂಪಡಣೆ ಯಂತ್ರದ ಜೊತೆಗೆ ಹತ್ತಕ್ಕೂ ಹೆಚ್ಚು ಪೌರ ಕಾರ್ಮಿಕರು ಈ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ ಎಂದರು. ಈಗಾಗಲೇ ಮೂರ್‍ನಾಲ್ಕು ಶಂಕಿತ ಡೆಂಘೀ ಪ್ರಕರಣ ಪತ್ತೆಯಾಗಿದ್ದು, ಸೂಕ್ತ ಸಂದರ್ಭದಲ್ಲಿ ಚಿಕಿತ್ಸೆ ನೀಡಿದ್ದರಿಂದ ಯಾವುದೇ ಸಾವುನೋವು ಸಂಭವಿಸಿಲ್ಲ. ಬಿಸಿಲು ಮತ್ತು ಮಳೆ ಇರುವುದರಿಂದ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆ ಇರುತ್ತದೆ. ಜನರಲ್ಲಿ ಜಾಗೃತಿ ಮೂಡಿಸಲು ನಗರಸಭೆ ವತಿಯಿಂದ ಕರಪತ್ರ ಹಂಚುವುದು, ಕಸ ಸಂಗ್ರಹಣ ವಾಹನದಲ್ಲಿ ಧ್ವನಿವರ್ಧಕ ಅಳವಡಿಸಿ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಆರೋಗ್ಯ ಇಲಾಖೆ ಅ ಧಿಕಾರಿಗಳೊಂದಿಗೆ ನಿರಂತರ ಸಂಪರ್ಕ ಇರಿಸಿಕೊಂಡು ಜನರಿಗೆ ಸೂಕ್ತ ಮಾಹಿತಿ ನೀಡಲಾಗುತ್ತಿದೆ ಎಂದರು.
ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಮಂಜೂರಾಲಿ ಖಾನ್ ಮಾತನಾಡಿ, ಮೆಲಾಥಿನ್ ದ್ರಾವಣ ಸಿಂಪಡಣೆಗೆ ಸುಮಾರು 50 ಸಾವಿರ ರೂ. ವೆಚ್ಚದಲ್ಲಿ ಎರಡು ಆಧುನಿಕ ಯಂತ್ರವನ್ನು ಖರೀದಿಸಲಾಗಿದೆ. ಜೊತೆಗೆ ಬೆಳಗ್ಗೆ ಮತ್ತು ಸಂಜೆ ಫಾಗಿಂಗ್ ಮಾಡಲಾಗುತ್ತಿದೆ. ನಗರ ವ್ಯಾಪ್ತಿಯಲ್ಲಿ ಖಾಲಿ ಇರುವ ನಿವೇಶನಗಳಲ್ಲಿ ಬೆಳೆದಿರುವ ಗಿಡಗಂಟಿಗಳನ್ನು ಸಂಬಂಧಪಟ್ಟ ಮಾಲಿಕರು ಸ್ವತ್ಛಗೊಳಿಸಬೇಕು. ಇಲ್ಲವಾದಲ್ಲಿ ನಗರಸಭೆ ವತಿಯಿಂದ ಅಂತಹ ಜಾಗದ ಮಾಲಿಕರ ಮೇಲೆ ದಂಡ ವಿಧಿ ಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಜನರು ಮನೆಯ ಅಕ್ಕಪಕ್ಕ ಸ್ವತ್ಛವಾಗಿರಿಸಿಕೊಳ್ಳಬೇಕು. ಸೊಳ್ಳೆ ಉತ್ಪತ್ತಿಯಾಗುವ ಸ್ಥಳಗಳ ಬಗ್ಗೆ ಕರಪತ್ರದ ಮೂಲಕ ಮಾಹಿತಿ ನೀಡಲಾಗಿದೆ. ಅದನ್ನು ಪರಿಶೀಲನೆ ನಡೆಸಿ, ಅದರಂತೆ ನಡೆದುಕೊಳ್ಳಬೇಕು. ಒಡೆದ ಮಡಿಕೆ, ಎಳನೀರು ಚಿಪ್ಪು, ಚರಂಡಿಯಲ್ಲಿ ಹೆಚ್ಚು ನೀರು ಸಂಗ್ರಹವಾಗದಂತೆ ನೋಡಿಕೊಳ್ಳಿ ಎಂದು ಸಲಹೆ ನೀಡಿದರು. ಪೌರ ಕಾರ್ಮಿಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
Sagara: ಕಾಶಿಯಾತ್ರೆಯ ಪ್ಯಾಕೇಜ್ ರೂವಾರಿ ಇನ್ನಿಲ್ಲ; ಮನೆ ಮಾಡಿನಿಂದ ಬಿದ್ದು ಸಾವು
Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?
Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ
Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್ ಊಟ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.