ಗಣಪತಿ ಜಾತ್ರೆ: ಹಿಂದೂಯೇತರರ ಅಂಗಡಿಗೆ ಅವಕಾಶ ನಿರ್ಬಂಧ

ದೇವಸ್ಥಾನದ ಪ್ರದೇಶದಲ್ಲಿ ವ್ಯಾಪಾರ ನಿರ್ಬಂಧದ ಕುರಿತ ಬೋರ್ಡ್‌ ಅಳವಡಿಕೆ

Team Udayavani, Apr 1, 2022, 5:56 PM IST

fair

ಸಾಗರ: ಐತಿಹಾಸಿಕ ಮಹಾಗಣಪತಿ ದೇವರ ರಥೋತ್ಸವ ಏ. 5ರಿಂದ ನಡೆಯಲಿದ್ದು, ಜಾತ್ರಾ ಸಂದರ್ಭದಲ್ಲಿ ಹಿಂದೂಯೇತರ ಅನ್ಯಧರ್ಮೀಯರ ಮಳಿಗೆಗಳಿಗೆ ಅವಕಾಶ ಇಲ್ಲ ಎಂಬ ಫ್ಲೆಕ್ಸ್‌ ಗಣಪತಿ ದೇವಸ್ಥಾನದ ಪ್ರದೇಶದಲ್ಲಿ ಗುರುವಾರ ಪ್ರತ್ಯಕ್ಷವಾಗಿದೆ.

ಮಹಾಗಣಪತಿ ದೇವಸ್ಥಾನದ ಹೆಸರಿನಲ್ಲಿ ಹಾಕಲಾಗಿರುವ ಫ್ಲೆಕ್ಸ್‌ನಲ್ಲಿ ಕಾನೂನಿನ ಅನ್ವಯ ವ್ಯಾಪಾರ ಮಳಿಗೆ ಹಾಕಲು ಅನ್ಯಧರ್ಮೀಯರಿಗೆ ಅವಕಾಶ ನಿರ್ಬಂಧವನ್ನು ಸಾರಿದೆ. ರಥೋತ್ಸವ ಸಂದರ್ಭದ ಅಮ್ಯೂಸ್‌ ಮೆಂಟ್‌ ಚಟುವಟಿಕೆಗಳಿಗಾಗಿ ಹರಾಜು ಪ್ರಕ್ರಿಯೆ ಸೋಮವಾರ ನಡೆದು, 14.50 ಲಕ್ಷ ರೂ.ಗೆ ಮಂಜುನಾಥ ಅಡಿಗೆ ಎಂಬುವವರಿಗೆ ಹರಾಜು ಆಗಿತ್ತು. ವಿಶ್ವಹಿಂದೂ ಪರಿಷತ್‌ ವತಿಯಿಂದ ಈಗಾಗಲೇ ಎಸಿಯವರಿಗೆ ಮನವಿ ಸಲ್ಲಿಕೆಯಾಗಿದ್ದು, ಜಾತ್ರೆಯಲ್ಲಿ ಮಹಾಗಣಪತಿ ರಸ್ತೆಯ ಇಕ್ಕೆಲಗಳಲ್ಲಿ ಹಣ್ಣುಕಾಯಿ, ಆಟಿಕೆ, ತಿಂಡಿ- ತಿನಿಸು ಇತ್ಯಾದಿ ವ್ಯಾಪಾರಿ ಮಳಿಗೆಗಳನ್ನು ನಿರ್ಮಿಸಲಾಗುತ್ತದೆ. ದೇವಸ್ಥಾನವು ಮುಜರಾಯಿಗೆ ಸೇರಿದ್ದು, ಅನ್ಯಧರ್ಮೀಯರಿಗೆ ನೀಡಲು ಅವಕಾಶ ಇಲ್ಲ. ಪ್ರಸ್ತುತ ಮುಸ್ಲಿಮರು ಈ ದೇಶದ ಕಾನೂನು ಸಂವಿಧಾನ ಮತ್ತು ಹಿಂದೂ ಸಂಸ್ಕೃತಿ, ಧಾರ್ಮಿಕ ಪದ್ಧತಿಯನ್ನು ವಿರೋಧಿಸುತ್ತಾ ಬಂದಿದ್ದಾರೆ. ಇಂತಹ ಸಂದರ್ಭದಲ್ಲಿ ನಮ್ಮ ಧಾರ್ಮಿಕ ಪದ್ಧತಿಗಳನ್ನು ವಿರೋಧಿಸುತ್ತಾ ಬಂದವರಿಗೆ ವ್ಯಾಪಾರ ಮಳಿಗೆ ನೀಡುವುದು ಸಮಂಜಸವಲ್ಲ.

ಈಗಾಗಲೇ ದಕ್ಷಿಣ ಕನ್ನಡ, ಶಿರಸಿ, ಶಿವಮೊಗ್ಗದಲ್ಲಿ ಜಾತ್ರೆಗಳ ವ್ಯಾಪಾರ- ವಹಿವಾಟುಗಳನ್ನು ಹಿಂದೂಯೇತರರಿಗೆ ನೀಡದಿರಲು ಆಡಳಿತ ಮಂಡಳಿ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ದೇವಸ್ಥಾನದ ಆಡಳಿತಾಧಿಕಾರಿಯಾಗಿರುವ ತಾವು ಮುಜರಾಯಿ ಕಾಯ್ದೆ ಪ್ರಕಾರ ಹಿಂದೂಯೇತರರಿಗೆ ಮುಜರಾಯಿ ದೇವಸ್ಥಾನಗಳ ಆಡಳಿತ, ವ್ಯಾಪಾರ- ವಹಿವಾಟಿನಲ್ಲಿ ಅವಕಾಶ ನೀಡದಂತೆ ನಿರ್ಬಂಧ ವಿಧಿಸಬಹುದಾಗಿದೆ ಎಂದು ಮನವಿಯಲ್ಲಿ ಆಗ್ರಹಿಸಿತ್ತು.

ಈ ನಡುವೆ ಹರಾಜಿನ ದಿನ ತಹಶೀಲ್ದಾರ್‌ ಮಲ್ಲೇಶಪ್ಪ ಪೂಜಾರ್‌ ಮಾತನಾಡಿ, ವಿಶ್ವ ಹಿಂದೂ ಪರಿಷತ್‌ ಮತ್ತು ಭಜರಂಗ ದಳದವರು ಹಿಂದೂಗಳಿಗೆ ಹೊರತುಪಡಿಸಿ ಬೇರೆಯವರಿಗೆ ಅಂಗಡಿ ಮಳಿಗೆ ನೀಡದಿರುವ ಬಗ್ಗೆ ಮನವಿ ನೀಡಿದ್ದಾರೆ. ಆದರೆ ಮುಜರಾಯಿ ಇಲಾಖೆಯ ವ್ಯಾಪ್ತಿಯ ದೇವಸ್ಥಾನಗಳ ಆವರಣದಲ್ಲಿ ಅಂಗಡಿ ಮಳಿಗೆ ಸಂಬಂಧ ನಿಯಮವಾಳಿಗೂ ಆಗುತ್ತದೆ. ಆದರೆ ಗಣಪತಿ ದೇವಸ್ಥಾನದ ಹೊರಗಡೆ ಅಮ್ಯೂಸ್‌ಮೆಂಟ್‌ ವ್ಯವಸ್ಥೆ ಮಾಡಲಾಗುತ್ತದೆ. ಆದ್ದರಿಂದ ಅಮ್ಯೂಸ್‌ಮೆಂಟ್‌ ಪಾರ್ಕ್‌ ವ್ಯವಸ್ಥೆಗೆ ಅನ್ವಯಿಸುವುದಿಲ್ಲ ಎಂದಿದ್ದರು. ಆದರೆ ಈಗ ಕಾಣಿಸಿಕೊಂಡಿರುವ ಫ್ಲೆಕ್ಸ್‌ ಬೇರೆಯದೇ ಕಥೆ ಹೇಳುತ್ತದೆ.

ಟಾಪ್ ನ್ಯೂಸ್

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ

Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್‌ ಹಂಚಿಕೆ; ಡಾ.ಸರ್ಜಿ

Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್‌ ಹಂಚಿಕೆ; ಡಾ.ಸರ್ಜಿ

Hosanagara: ರಸ್ತೆ ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಪತ್ನಿ

Hosanagara: ರಸ್ತೆ ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಪತ್ನಿ

7-thirthahalli

Thirthahalli: ಅದ್ಧೂರಿಯಾಗಿ ನಡೆದ ಎಳ್ಳಮಾವಾಸ್ಯೆ ರಥೋತ್ಸವ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2

Mulki: ಗಾಂಜಾ ಮಾರಾಟ ಯತ್ನ; ಇಬ್ಬರ ಬಂಧನ

accident

Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.