ಗಣೇಶೋತ್ಸವ ಮಾರ್ಗಸೂಚಿ ಪಾಲಿಸಿ


Team Udayavani, Aug 19, 2020, 7:04 PM IST

sM-TDY-1

ಶಿವಮೊಗ್ಗ: ಮಾರಣಾಂತಿಕ ಕೋವಿಡ್ ಸೋಂಕು ರಾಜ್ಯದಲ್ಲಿ ದಿನೇ ದಿನೇ ವ್ಯಾಪಕವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗಣೇಶ ಚತುರ್ಥಿಯನ್ನು ಅತ್ಯಂತ ಸರಳವಾಗಿ ಆಚರಿಸಲು ಸರ್ಕಾರ ಮಾರ್ಗಸೂಚಿಗಳನ್ನು ಪ್ರಕಟಿಸಿದೆ ಎಂದು ಗ್ರಾಮೀಣ ಅಭಿವೃದ್ಧಿ, ಪಂಚಾಯತ್‌ ರಾಜ್‌ ಹಾಗೂ ಉಸ್ತುವಾರಿ ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದರು.

ಜಿಲ್ಲೆಯಲ್ಲಿ ಗಣೇಶೋತ್ಸವ ಆಚರಣೆಯ ಸಂಬಂಧ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯನ್ನು ಜಿಲ್ಲೆಗೆ ಅನುಕೂಲವಾಗುವಂತೆ ಕೆಲವು ವಿಷಯಗಳನ್ನು ಸೇರಿಸಿ, ಇನ್ನೂ ಕೆಲವನ್ನು ಮಾರ್ಪಾಡಿಸಿ ಅನುಷ್ಠಾನಗೊಳಿಸಲು ಜಿಲ್ಲಾಡಳಿತ ಉದ್ದೇಶಿಸಿದೆ ಎಂದರು.

ಈ ಮಾರ್ಗಸೂಚಿಯನ್ನು ಅನುಷ್ಠಾನಗೊಳಿಸುವ ಮುನ್ನ ಜಿಲ್ಲೆಯ ಸ್ಥಳೀಯ ಸಂಘ-ಸಂಸ್ಥೆಗಳ ಪದಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಗಿದ್ದು ಸರ್ಕಾರ ಕೈಗೊಂಡ ನಿರ್ಣಯದಂತೆ ಹಬ್ಬವನ್ನು ಸರಳವಾಗಿ ಆಚರಿಸಲು ಸಂಘಟನೆಗಳ ಪ್ರಮುಖರು ಭರವಸೆ ನೀಡಿರುವುದಾಗಿ ಅವರು ತಿಳಿಸಿದರು.

ಕಳೆದ ಸಾಲಿನಲ್ಲಿ ಗಣೇಶನ ಪ್ರತಿಷ್ಠಾಪನೆ ಮಾಡಿದ್ದ ಸಂಘಗಳು ಈ ಬಾರಿಯೂ ಗಣೇಶನ ಪ್ರತಿಷ್ಠಾಪನೆ ಮಾಡಲು ಜಿಲ್ಲಾಡಳಿತದ ವಿರೋಧವಿಲ್ಲ. ಆದರೆ ಪ್ರತಿಷ್ಠಾಪಿಸಿದ ದಿನದಂದೇ ಅತ್ಯಂತ ಕಡಿಮೆ ಸಂಖ್ಯೆಯ ಜನರೊಂದಿಗೆ ವಿಸರ್ಜನೆ ಮಾಡುವಂತೆ ಸೂಚಿಸಲಾಗಿದೆ ಎಂದರು.

ಯಾವುದೇ ಮೆರವಣಿಗೆಗೆ ಅವಕಾಶವಿಲ್ಲ. ಬ್ಯಾನರ್‌, ಬಂಟಿಂಗ್ಸ್‌, ಧ್ವನಿವರ್ಧಕ ಬಳಸಲು ಅನುಮತಿ ನೀಡಲಾಗುವುದಿಲ್ಲ . ಗಣೇಶನ ವಿಸರ್ಜನೆಗೆ ಸಂಬಂಧಿ ಸಿದಂತೆ ಮಹಾನಗರ ಪಾಲಿಕೆ ವತಿಯಿಂದ ವಿಸರ್ಜನಾ ವಾಹನ ವ್ಯವಸ್ಥೆ ಮಾಡಲಾಗಿದ್ದು ನಿಗ ದಿತ ಸಮಯಕ್ಕೆ ಸಾರ್ವಜನಿಕರ ಮನೆ ಬಾಗಿಲಿಗೆ ಬರಲಿದೆ. ಜನಪರವಾದ ಈ ಕಾರ್ಯದಲ್ಲಿ ಸಾರ್ವಜನಿಕರು ಸಹಕರಿಸುವಂತೆ ಅವರು ಮನವಿ ಮಾಡಿದರು. ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯೂ ಪೊಲೀಸ್‌ ಇಲಾಖೆಯ ಅಧಿಕಾರಿಗಳು

ಸ್ಥಳೀಯ ಸಂಘ-ಸಂಸ್ಥೆಗಳ ಮುಖಂಡರ ಸಭೆ ಕರೆದು ವಾಸ್ತವ ಸ್ಥಿತಿಯ ಮನವರಿಕೆ ಮಾಡಿಕೊಡಲು ಸೂಚಿಸಲಾಗಿದೆ ಎಂದ ಅವರು, ಹಬ್ಬದ ಆಚರಣೆಯಲ್ಲಿ ಸಂಭ್ರಮ, ಸ್ಫೂರ್ತಿ ಮತ್ತು ಉತ್ಸಾಹವಿರಲಿ. ಯಾರೊಬ್ಬರೂ ಈ ವಿಷಯವನ್ನು ಪ್ರತಿಷ್ಠೆಯಾಗಿ ಪರಿಗಣಿಸುವ ಅಗತ್ಯವಿಲ್ಲ ಎಂದರು. ಜಿಲ್ಲಾ ಧಿಕಾರಿ ಕೆ.ಬಿ. ಶಿವಕುಮಾರ್‌ ಮಾತನಾಡಿ, ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳ ಪ್ರತಿನಿ ಧಿಗಳುಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮನೆಯಲ್ಲಿ ಗಣೇಶನ ಪ್ರತಿಷ್ಠಾಪನೆ ಮಾಡುವವರು 2 ಅಡಿ ಹಾಗೂ ಸಾರ್ವಜನಿಕವಾಗಿ ಪ್ರತಿಷ್ಠಾಪನೆ ಮಾಡುವವರು ಗರಿಷ್ಠ 4 ಅಡಿ ಎತ್ತರದ ವಿಗ್ರಹವನ್ನು ಪ್ರತಿಷ್ಠಾಪಿಸಬಹುದಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಮಹಾನಗರ ಪಾಲಿಕೆಯ ಮೇಯರ್‌ ಸುವರ್ಣ ಶಂಕರ್‌, ಜಿಪಂ ಸದಸ್ಯ ಕೆ.ಇ. ಕಾಂತೇಶ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ಎಂ. ಶಾಂತರಾಜ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

Udupi-judicial2

Udupi: ʼನ್ಯಾಯಾಂಗದಲ್ಲಿ ತಂತ್ರಜ್ಞಾನ ಬಳಕೆಯಿಂದ ಪಾರದರ್ಶಕತೆ, ಸಮಯ, ಹಣವೂ ಉಳಿತಾಯʼ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yadiyurappa

40 percent commission ಸುಳ್ಳು ಸಾಬೀತು : ಕಾಂಗ್ರೆಸಿಗರಿಗೆ ತಾಕೀತು ಮಾಡಿದ ಯಡಿಯೂರಪ್ಪ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Shimoga; Omini caught fire while filling with petrol

Shimoga; ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ

bsy

Covid ವೇಳೆ ಜೀವ ಉಳಿಸುವ ಕೆಲಸ ಮಾಡಿದ್ದೇವೆ: ಬಿಎಸ್‌ವೈ

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.