ಗೌರಿ ಲಂಕೇಶ್ ಹೆಸರಲ್ಲಿ ಪತ್ರಿಕೋದ್ಯಮ ಪ್ರಶಸ್ತಿ ನೀಡಲು ಒತ್ತಾಯ
Team Udayavani, Sep 16, 2017, 4:27 PM IST
ಶಿವಮೊಗ್ಗ: ಪತ್ರಕರ್ತೆ, ಸಾಮಾಜಿಕ ಹೋರಾಟಗಾರ್ತಿ ಗೌರಿ ಲಂಕೇಶ್ ಹತ್ಯೆ ಖಂಡಿಸಿ ಪ್ರಸ್ ಟ್ರಸ್ಟ್ ನೇತೃತ್ವದಲ್ಲಿ ಗೌರಿಲಂಕೇಶ್ ಹತ್ಯೆ ವಿರೋಧಿ ಒಕ್ಕೂಟದ ವತಿಯಿಂದ ನಗರದಲ್ಲಿ ಗುರುವಾರ ಪ್ರತಿರೋಧ ಸಮಾವೇಶ ಹಾಗೂ ಪಂಜಿನ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು.
ಪ್ರತಿರೋಧ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಪ್ರಮುಖರು ಗೌರಿ ಲಂಕೇಶ್ ಅವರ ಹೆಸರಿನಲ್ಲಿ ಗೌರಿ ಲಂಕೇಶ್ ನಿರ್ಭೀತ ಪತ್ರಿಕೋದ್ಯಮ ಪ್ರಶಸ್ತಿ ನೀಡುವುದು ಸೇರಿದಂತೆ ಹಲವು ಒತ್ತಾಯಗಳ ನಿರ್ಣಯ ಕೈಗೊಂಡರು.
ಗೌರಿ ಲಂಕೇಶ್ ಅವರ ಹೆಸರಿನಲ್ಲಿ ಅವರ ವಿಚಾರಧಾರೆಯುಳ್ಳ ಪತ್ರಕರ್ತರಿಗೆ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಪ್ರತಿ ವರ್ಷ ನೀಡಬೇಕು. ಜತೆಗೆ ಪ್ರತಿ ವರ್ಷ ರಾಷ್ಟ್ರೀಯ ಮಟ್ಟದಲ್ಲಿ ಗೌರಿ ಲಂಕೇಶ್ ನಿರ್ಭೀತ ಪ್ರತಿಕೋದ್ಯಮ ಪ್ರಶಸ್ತಿ ಕೊಡಮಾಡಬೇಕೆಂದು ಒಕ್ಕೂಟದ ಪರವಾಗಿ ಎನ್. ಮಂಜುನಾಥ್, ಎಂ.ಗುರುಮೂರ್ತಿ, ಕೆ.ಪಿ. ಶ್ರೀಪಾಲ್ ನಿರ್ಣಯ ಮಂಡಿಸಿದರು.
ದೇಶದ ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯಲು ಶ್ರಮಿಸುತ್ತಿದ್ದ ಗೌರಿ ಲಂಕೇಶ್ ಅವರನ್ನು ಹತ್ಯೆ ಮಾಡಿರುವುದು ಇಡೀ ದೇಶದ ಪ್ರಜ್ಞಾವಂತ ಜನರನ್ನು ಬೆಚ್ಚಿ ಬೀಳಿಸಿದೆ. ಇದೊಂದು ಮನುಷ್ಯತ್ವ ವಿರೋಧಿ ಕೃತ್ಯವಾಗಿದೆ ಎಂದು ತಿಳಿಸಲಾಗಿದೆ.
ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ರಚಿಸಿರುವ ಎಸ್‌ಐಟಿ ಮುಖಾಂತರ ತೀವ್ರಗೊಳಿಸಿ, ಹಂತಕರನ್ನು ಹಾಗೂ ಅವರ ಹಿಂದೆ ಇರುವ ದುಷ್ಟಶಕ್ತಿಗಳನ್ನು ಶೀಘ್ರವಾಗಿ ಪತ್ತೆ ಹಚ್ಚಬೇಕು. ಹತ್ಯೆಗೆ ಕಾರಣರಾದವರನ್ನು ಪತ್ತೆ ಹಚ್ಚಲು ಎಲ್ಲಾ ಕೋನಗಳಿಂದಲೂ ಪರಿಶೀಲಿಸಬೇಕು. ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವ ವಿಚಾರವಾದಿಗಳ ಸರಣಿ ಕೊಲೆಗಳು ನಿರ್ದಿಷ್ಟ ಸಂಘಟಿತ ಗುಂಪಿನಿಂದ ನಡೆಯುತ್ತಿರುವ ಸಾಧ್ಯತೆ ಎದ್ದು ಕಾಣುತ್ತಿದೆ. ಹಾಗಾಗಿ ಆ ನಿಟ್ಟಿನಲ್ಲಿ ಪ್ರಯತ್ನವನ್ನು ಚುರುಕುಗೊಳಿಸಬೇಕು ಆಗ್ರಹಿಸಿಲಾಗಿದೆ.
ಗೌರಿ ಹತ್ಯೆಯನ್ನು ಸಂಭ್ರಮಿಸುವ ದುರಂತ ಸಾಮಾಜಿಕ ಜಾಲತಾಣಗಳಲ್ಲಿ ಮತೀಯ ವಾದಿಗಳಿಂದ ನಡೆಯುತ್ತಿದೆ. ಅನೇಕ ರಾಜಕಾರಣಿಗಳು ಹತ್ಯೆಯನ್ನು ಸಮರ್ಥಿಸುವ ಮಾತುಗಳನ್ನಾಡುತ್ತಿದ್ದಾರೆ. ಇದೇ ಶಕ್ತಿಗಳು ನಾಡಿನಲ್ಲಿ ವಿಚಾರವಾದಿಗಳ ಹತ್ಯೆಗೆ ಪೂರಕವಾದ ವಾತಾವರಣವನು ಸೃಷ್ಟಿಸುತ್ತಿದ್ದಾರೆ. ಪರೋಕ್ಷವಾಗಿ ಹತ್ಯೆಗೆ ಕಾರಣರಾಗಿದ್ದಾರೆ. ಇಂತಹ ಅಮಾನವೀಯ ನಡುವಳಿಕೆಗಳನ್ನು ವೇದಿಕೆಯು ಖಂಡಿಸುತ್ತದೆ. ಇಂತಹ ಮನಸ್ಥಿತಿಯನ್ನು ಇಲ್ಲವಾಗಿಸಲು ಕಾರ್ಯಯೋಜನೆಯನ್ನು ಹಾಕಿಕೊಳ್ಳಬೇಕೆಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್ ನೀಡಿದ ರಿಷಭ್ ಪಂತ್
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್‌ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.