ಗ್ರಾಪಂ ಚುನಾವಣೆಗೆ ಸಿದ್ಧರಾಗಿ: ಜಿಲ್ಲಾಧಿಕಾರಿ ಶಿವಕುಮಾರ್ ಸೂಚನೆ
Team Udayavani, Aug 5, 2020, 4:35 PM IST
ಶಿವಮೊಗ್ಗ: ರಾಜ್ಯ ಚುನಾವಣಾ ಆಯೋಗವು ಸದ್ಯದಲ್ಲಿ ಗ್ರಾಪಂ ಚುನಾವಣೆಗೆ ದಿನಾಂಕ ಘೋಷಿಸುವ ಸಂಭವವಿದ್ದು, ಜಿಲ್ಲೆಯ ಎಲ್ಲಾ ತಾಲೂಕಿನ ಚುನಾವಣಾಧಿಕಾರಿಗಳು ಸಕಲ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಹೇಳಿದರು.
ಮಂಗಳವಾರ ತಮ್ಮ ಕಚೇರಿ ಸಭಾಂಗಣದಲ್ಲಿ ವಿಡಿಯೋ ಮೂಲಕ ಜಿಲ್ಲೆಯ ಎಲ್ಲಾ ತಹಶೀಲ್ದಾರರೊಂದಿಗೆ ಗ್ರಾಪಂ ಚುನಾವಣೆ, ಮಳೆಯಿಂದ ಸಂಭವಿಸಬಹುದಾದ ನೆರೆ, ಬರ ಮುಂತಾದ ಅವಘಡಗಳು ಹಾಗೂ ಮಾರಣಾಂತಿಕವಾಗಿರುವ ಕೊರೊನಾ ಮಾರಿಯನ್ನು ನಿಯಂತ್ರಿಸುವಲ್ಲಿ ಜಿಲ್ಲಾಡಳಿತದ ವತಿಯಿಂದ ಕೈಗೊಂಡ ಕ್ರಮಗಳ ಕುರಿತು ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.
ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದಂತೆ ಆ. 18ರೊಳಗಾಗಿ ಮತದಾರರನ್ನು ಗುರುತಿಸಿ, ಮತದಾರರ ಪಟ್ಟಿಯ ಕರಡನ್ನು ತಿದ್ದುಪಡಿಗೊಳಿಸಿ, ತ್ವರಿತವಾಗಿ ಜಿಲ್ಲಾ ಚುನಾವಣಾ ಶಾಖೆಗೆ ಕಳುಹಿಸಿಕೊಡಬೇಕು ಅಲ್ಲದೆ ಗ್ರಾಪಂ ಸದಸ್ಯರ ಮೀಸಲಾತಿಪಟ್ಟಿಯನ್ನು ಸಿದ್ಧಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆಯೂ ಅವರು ತಹಶೀಲ್ದಾರರಿಗೆ ಸೂಚಿಸಿದರು.
ತಹಶೀಲ್ದಾರರು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸುವ ಸಿಬ್ಬಂದಿಗಳನ್ನು ಯಾವುದೇ ಕಾರಣಕ್ಕೂ ಬದಲಾವಣೆ ಮಾಡಕೂಡದು. ಅನಿವಾರ್ಯವಾದಲ್ಲಿ ಈಗಲೇ ಬದಲಾವಣೆಗೆ ಕ್ರಮ ವಹಿಸಬೇಕು. ತಾಲೂಕು ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿ, ಸಿಬ್ಬಂದಿ ಗಳು ಅನುಮತಿ ಪಡೆಯದೆ ರಜೆಯ ಮೇಲೆ ತೆರಳದಂತೆ ಸೂಚಿಸಿದರು.
ಜಿಲ್ಲೆಯಲ್ಲಿ ಮುಂಗಾರು ಚುರುಕುಗೊಳ್ಳುತ್ತಿದ್ದು, ಹಿಂದಿನ ವರ್ಷದಲ್ಲಿ ನಡೆದ ಅಹಿತಕರ ಘಟನೆಗಳು ಮರುಕಳಿಸದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಅದಕ್ಕಾಗಿ ಲೋಕೋಪಯೋಗಿ ಇಲಾಖೆಯ ಅಭಿಯಂತರರೊಂದಿಗೆ ಸಮನ್ವಯತೆ ಸಾಧಿಸಿಕೊಂಡು ಕ್ರಮ ಕೈಗೊಳ್ಳುವುದು ಉತ್ತಮ ಎಂದ ಅವರು, ಕೋವಿಡ್ ನಿಯಂತ್ರಣ, ನೆರೆ ಮತ್ತು ಗ್ರಾಪಂ ಚುನಾವಣೆಗೆ ಸಂಬಂಧಿ ಸಿದಂತಹ ಎಲ್ಲಾ ಕೆಲಸಗಳನ್ನು ಸಂಬಂಧಿಸಿದ ಸಿಬ್ಬಂದಿಗಳಿಗೆ ವಹಿಸಿ, ಕಾಲಕಾಲಕ್ಕೆ ಅದರ ಉಸ್ತುವಾರಿಯನ್ನು ನೋಡಿಕೊಳ್ಳುತ್ತಿರಬೇಕು ಎಂದರು.
ಮುಂದಿನ ದಿನಗಳಲ್ಲಿ ಅಗತ್ಯವಾದಲ್ಲಿ ಈ ಹಿಂದೆ ಸ್ಥಾಪಿಸಲಾಗಿದ್ದ ನೆರೆ ಪರಿಹಾರ ಕೇಂದ್ರಗಳಲ್ಲಿ ನಿರಾಶ್ರಿತರ ಕೇಂದ್ರಗಳನ್ನು ತೆರೆಯಬಹುದಾದ ಸ್ಥಳಗಳನ್ನು ಗುರುತಿಸಿಟ್ಟುಕೊಂಡಿರಬೇಕು. ಈ ಎಲ್ಲಾ ತುರ್ತು ಕೆಲಸ-ಕಾರ್ಯಗಳಿಗಾಗಿ ಜಿಲ್ಲಾಡಳಿತದಿಂದ ಅಗತ್ಯ ಅನುದಾನವನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ. ಅಗತ್ಯಕ್ಕೆ ತಕ್ಕಂತೆ ವಾಹನಗಳನ್ನು ಸಿದ್ಧವಾಗಿರಿಸಿಕೊಂಡಿರುವಂತೆಯೂ ತಹಶೀಲ್ದಾರರಿಗೆ ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಜಿ.ಅನುರಾಧ, ಜಿಲ್ಲಾ ಯೋಜನಾ ನಿರ್ದೇಶಕ ಡಾ|ನಾಗೇಂದ್ರ ಎಫ್. ಹೊನ್ನಳ್ಳಿ, ಉಪವಿಭಾಗಾಧಿಕಾರಿ ಟಿ.ವಿ.ಪ್ರಕಾಶ್, ತಹಶೀಲ್ದಾರ್ ನಾಗರಾಜ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.