ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡಿ
Team Udayavani, Aug 26, 2020, 7:26 PM IST
ಶಿವಮೊಗ್ಗ: ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರನ್ನು ದಾಖಲಿಸಿ ಯಾವುದೇ ಕುಂದು ಕೊರತೆಯಾಗದಂತೆ ಚಿಕಿತ್ಸೆ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಸೂಚನೆ ನೀಡಿದರು.
ಅವರು ಮಂಗಳವಾರ ಜಿಲ್ಲಾಡಳಿತ ಸಭಾಂಗಣದಲ್ಲಿ ನಗರದ ಖಾಸಗಿ ಆಸ್ಪತ್ರೆಗಳ ಪ್ರತಿನಿಧಿ ಗಳೊಂದಿಗೆ ನಡೆಸಿದ ಸಭೆಯಲ್ಲಿ ಈ ಕುರಿತು ಅವರು ಮಾತನಾಡಿದರು. ಪ್ರಸ್ತುತ ಸುಬ್ಬಯ್ಯ ಮೆಡಿಕಲ್ ಕಾಲೇಜು, ನಾರಾಯಣ ಹೃದಯಾಲಯ, ಮ್ಯಾಕ್ಸ್ ಮತ್ತು ನಂಜಪ್ಪ ಆಸ್ಪತ್ರೆಗಳಲ್ಲಿ ಕೋವಿಡ್ ಪೀಡಿತರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಸುಮಾರು 600 ಬೆಡ್ ಗಳಿವೆ. ಇವುಗಳ ಪೈಕಿ ಶೇ.50ರಷ್ಟು ಬೆಡ್‌ಗಳನ್ನು ಸರ್ಕಾರಿ ಕೋಟಾದಡಿ ಒದಗಿಸಲು ಈಗಾಗಲೇ ಸೂಚನೆ ನೀಡಲಾಗಿದೆ. ಆದರೆ ಕೆಲವು ಖಾಸಗಿ ಆಸ್ಪತ್ರೆಗಳ ಕಾರ್ಯವೈಖರಿ ಬಗ್ಗೆ ದೂರುಗಳು ಬರುತ್ತಿವೆ. ಇತ್ತೀಚಿಗೆ ಕೊರೋನಾ ಸೋಂಕಿತೆ ಗರ್ಭಿಣಿಯೊಬ್ಬರನ್ನು ದಾಖಲಿಸಲು ಖಾಸಗಿ ಆಸ್ಪತ್ರೆಯೊಂದು ನಿರಾಕರಿಸಿದ್ದು, ಮುಂದಿನ ದಿನಗಳಲ್ಲಿ ಇಂತಹ ಯಾವುದೇ ದೂರುಗಳು ಬರಬಾರದು ಎಂದು ಅವರು ಹೇಳಿದರು.
ತಂಡ ರಚನೆ: ಮೆಗ್ಗಾನ್ ಸೇರಿದಂತೆ ಎಲ್ಲಾ ಕೋವಿಡ್ ಆಸ್ಪತ್ರೆಗಳಿಗೆ ಪ್ರತಿದಿನ ಭೇಟಿ ನೀಡಿ, ರೋಗಿಗಳೊಂದಿಗೆ ಮಾತನಾಡಿ, ಲಭ್ಯವಿರುವ ಬೆಡ್ ಸಂಖ್ಯೆ ಸೇರಿದಂತೆ ಎಲ್ಲಾ ವಿಷಯಗಳ ಬಗ್ಗೆ ಪರಿಶೀಲನೆ ನಡೆಸಲು ಹಿರಿಯ ವೈದ್ಯಾಧಿ ಕಾರಿಗಳನ್ನು ಒಳಗೊಂಡ ತಂಡವನ್ನು ರಚಿಸಲಾಗುವುದು. ಈ ತಂಡ ಪ್ರತಿದಿನ ವರದಿಯನ್ನು ಸಲ್ಲಿಸಲಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ಹೇಳಿದರು.
ಪ್ರಸ್ತುತ ಮೆಗ್ಗಾನ್‌ನಲ್ಲಿ 160 ಕೋವಿಡ್ ಪೀಡಿತರು ಚಿಕಿತ್ಸೆ ಪಡೆಯುತ್ತಿದ್ದು, ಇನ್ನೂ 250 ಮಂದಿ ಕೊರೊನಾ ಶಂಕಿತರು ಐಸೋಲೇಶನ್ ವಾರ್ಡ್‌ನಲ್ಲಿದ್ದಾರೆ. ಖಾಸಗಿ ಆಸ್ಪತ್ರೆಗಳಲ್ಲಿ ಸಹ ಇಂತಹ ಐಸೋಲೇಶನ್ ವಾರ್ಡ್ ಆರಂಭಿಸಲು ವ್ಯವಸ್ಥೆ ಮಾಡಬೇಕು ಎಂದು ಅವರು ಸೂಚನೆ ನೀಡಿದರು.
ಪ್ರಮಾಣ ಇಳಿಮುಖ: ಜಿಲ್ಲೆಯಲ್ಲಿ ಕಳೆದ ಹತ್ತು ದಿನಗಳಿಂದ ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆಯಲ್ಲಿ ಇಳಿಮುಖವಾಗಿದೆ. ಮೆಗ್ಗಾನ್ ಆಸ್ಪತ್ರೆಗಿಂತ ಹೆಚ್ಚಾಗಿ ಕೆಲವು ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗಿರುವವರಿಂದ ಹೆಚ್ಚಿನ ದೂರುಗಳು ಬರುತ್ತಿವೆ. ಕೋವಿಡ್ ಪೀಡಿತರಿಗೆ ಮಾನಸಿಕ ಧೈರ್ಯ ತುಂಬಲು ಮನಶಾಸ್ತ್ರಜ್ಞರು ಮತ್ತು ಕೌನ್ಸಿಲರ್‌ಗಳನ್ನು ನಿಯೋಜಿಸಬೇಕು. ಅವರು ಪ್ರತಿದಿನ ಕೊರೊನಾ ಪೀಡಿತರನ್ನು ಭೇಟಿಯಾಗಿ ಮಾತುಕತೆ ನಡೆಸಬೇಕು ಎಂದು ಅವರು ಹೇಳಿದರು.
ಖಾಸಗಿ ಆಸ್ಪತ್ರೆಗಳಲ್ಲಿ ನಡೆಸಲಾಗುವ ಕೋವಿಡ್ ತಪಾಸಣೆಯ ಫಲಿತಾಂಶವನ್ನು ಆದಷ್ಟು ಬೇಗನೆ ಸಂಬಂಧಪಟ್ಟವರಿಗೆ ತಿಳಿಸುವ ವ್ಯವಸ್ಥೆ ಮಾಡಬೇಕು ಎಂದು ಸಚಿವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
B. Y. Raghavendra: 10 ವರ್ಷದಲ್ಲಿ ವಕ್ಫ್ ಆಸ್ತಿ ಶೇ.135 ಹೆಚ್ಚಳ
Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿಟ್ಟು ವ್ಯಕ್ತಿ ನಾಪತ್ತೆ ಪ್ರಕರಣ; ಶವ ಪತ್ತೆ
ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?
Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.