ಯಕ್ಷಗಾನಕ್ಕೆ ಗಟ್ಟಿತನ ತಂದ ಕೆರೆಮನೆ ಶಂಭು ಹೆಗಡೆ
ವಿಶ್ವಮಟ್ಟದಲ್ಲಿ ಯಕ್ಷಗಾನ ಕಲೆ ವಿಸ್ತರಿಸಿದ ಕೀರ್ತಿ: ಜಿ.ಆರ್. ಪಂಡಿತ್
Team Udayavani, Jun 2, 2022, 4:17 PM IST
ಸಾಗರ: ಯಕ್ಷಗಾನಕ್ಕೆ ಗಟ್ಟಿತನವನ್ನು ತಂದುಕೊಟ್ಟವರು ಕೆರೆಮನೆ ಶಂಭು ಹೆಗಡೆ. ಯಕ್ಷಗಾನ ಮತ್ತು ಶಂಭು ಹೆಗಡೆ ಅವರದ್ದು ಅವಿನಾಭಾವ ನಂಟಾಗಿತ್ತು ಎಂದು ಚಿಂತಕ, ಫೋಟೋಗ್ರಾಫರ್, ರಂಗನಟ ಜಿ.ಆರ್. ಪಂಡಿತ್ ಹೇಳಿದರು.
ಇಲ್ಲಿನ ಸಾಹಿತ್ಯ ಭವನದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಆಯೋಜಿಸಿದ್ದ ಕೆರೆಮನೆ ಶಂಭು ಹೆಗಡೆ ದತ್ತಿ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿ, ಶಂಭು ಹೆಗಡೆ ಅವರು ತಮಗೆ ನೀಡಿದ ಪಾತ್ರ ಹಾಗೂ ಕಾರ್ಯಗಳಲ್ಲಿ ತಮ್ಮನ್ನು ತಾವು ಆಳವಾಗಿ ತೊಡಗಿಸಿಕೊಳ್ಳುವ ಮೂಲಕ ತಮ್ಮ ಬದ್ಧತೆಯನ್ನು ಸಾಕಾರಗೊಳಿಸುತ್ತಿದ್ದರು. ಬದುಕಿನ ಜೊತೆ ಯಕ್ಷಗಾನವನ್ನು ಬಹು ಎತ್ತರಕ್ಕೆ ಕೊಂಡೊಯ್ದ ಅಪರೂಪದ ಕಲಾವಿದ ಅವರು. ಪ್ರೇಕ್ಷರ ಮನಮುಟ್ಟುವಂತೆ ಪಾತ್ರಗಳನ್ನು ನಿರ್ವಹಿಸುವ ಕಲಾತ್ಮಕತೆ ಅವರಲ್ಲಿತ್ತು. ರಂಗಸಜ್ಜಿಕೆಗೆ ಹೊಸ ಆಯಾಮವನ್ನು ನೀಡಿ, ಆಯಾಯ ಕಾಲಘಟ್ಟಕ್ಕೆ ಪೂರಕವಾದ ರೀತಿಯಲ್ಲಿ ಭಾವಾಭಿನಯಗಳ ಮೂಲಕ ಜನರ ಮನಸ್ಸಲ್ಲಿ ಆಳವಾಗಿ ಗುರುತಿಸಿಕೊಂಡಿದ್ದರು ಎಂದು ಹೇಳಿದರು.
ಯಕ್ಷಗಾನ ಎನ್ನುವುದು ಕನ್ನಡ ಸಾಹಿತ್ಯ ಹಾಗೂ ಸಾಂಸ್ಕೃತಿಕ ಲೋಕದಲ್ಲಿ ವಿಶಿಷ್ಟವಾದ ಪರಂಪರೆಯನ್ನು ಹೊಂದಿದೆ. ಅನೇಕ ದಿಗ್ಗಜರು ಯಕ್ಷಗಾನ ಕ್ಷೇತ್ರವನ್ನು ಶ್ರೀಮಂತವಾಗಿಸಿದ್ದಾರೆ. ಯಕ್ಷಗಾನ ಕಲೆಯನ್ನು ವಿಶ್ವಮಟ್ಟದಲ್ಲಿ ವಿಸ್ತರಿಸಿದ ಕೀರ್ತಿ ಶಂಭು ಹೆಗಡೆ ಅವರಿಗೆ ಸಲ್ಲುತ್ತದೆ. ಕೆರೆಮನೆ ಶಂಭು ಹೆಗಡೆ ಅವರನ್ನು ನೆನಪು ಮಾಡಿಕೊಳ್ಳುವಂತಹ ಕಾರ್ಯವನ್ನು ದತ್ತಿ ಉಪನ್ಯಾಸದ ಮೂಲಕ ಕನ್ನಡ ಸಾಹಿತ್ಯ ಪರಿಷತ್ ಮಾಡುತ್ತಿರುವ ಕಾರ್ಯ ಅಭಿನಂದನೀಯ ಎಂದರು.
ದತ್ತಿ ಒದಗಿಸಿದ ಹಿರಿಯ ಸಾಹಿತಿ ಡಾ| ಜಿ.ಎಸ್.ಭಟ್ ಮಾತನಾಡಿ, ದತ್ತಿ ನೀಡುವುದು ಸಹಜವಾದ ಪ್ರಕ್ರಿಯೆಯಾದರೂ ಸಹ ಈ ಮೂಲಕ ದತ್ತಿಯ ಆಶಯಕ್ಕೆ ಮಹತ್ವವನ್ನು ನೀಡುವ ಕೆಲಸವಾಗುತ್ತಿರುವುದು ವಿಶೇಷವಾಗಿದೆ. ಯಕ್ಷಗಾನದಲ್ಲಿ ಪಾತ್ರ ನಿರ್ವಹಣೆ ಅತಿ ಮುಖ್ಯವಾಗಿದೆ. ನೈಜವಾದ ವಿಚಾರವನ್ನು ಜನರಿಗೆ ತಿಳಿಸುವ ಕಾರ್ಯ ಯಕ್ಷಗಾನದಿಂದ ಮಾತ್ರ ಸಾಧ್ಯ. ಕೆರೆಮನೆ ಶಂಭು ಹೆಗಡೆಯವರು ತಮ್ಮ ಜೀವಮಾನದುದ್ದಕ್ಕೂ ಯಕ್ಷಗಾನವನ್ನು ಉಳಿಸಿ ಬೆಳೆಸಿದವರು. ಅವರ ಕಾರ್ಯಕ್ಷಮತೆ ನಾಡಿಗೆ ನಾಡಿಗೆ ಮೆಚ್ಚುವಂತಿದೆ ಎಂದರು.
ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಿ.ಟಿ.ಸ್ವಾಮಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಭಾರತೀಯ ಜೀವವಿಮಾ ನಿಗಮದ ಎಂ.ಎಲ್.ಭಟ್ ಉಪಸ್ಥಿತರಿದ್ದರು. ಮಮತಾ ಪ್ರಾರ್ಥಿಸಿದರು. ಉಮೇಶ್ ಹಿರೇನೆಲ್ಲೂರು ಸ್ವಾಗತಿಸಿದರು. ಕೋದಂಡ ಸಾಗರ್ ವಂದಿಸಿದರು. ಡಾ| ಪ್ರಸನ್ನ ಟಿ. ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.