ರಮ್ಯಾ ವಿರುದ್ಧ ಸೂಕ್ತ ಕ್ರಮಕ್ಕೆ ಗೋಪಾಲಕೃಷ್ಣ ಬೇಳೂರು ಒತ್ತಾಯ
ಡಿಕೆಶಿ ಅವರ ವಿರುದ್ಧ ಟೀಕೆ ಮಾಡುವಾಗ ಎಚ್ಚರಿಕೆಯಿಂದ ಇರಬೇಕು
Team Udayavani, May 15, 2022, 3:44 PM IST
ಸಾಗರ: ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ವಿರುದ್ಧ ಟ್ವೀಟ್ ಮಾಡಿರುವ ಮಾಜಿ ಸಂಸದೆ ರಮ್ಯ ಅವರ ಕ್ರಮ ಖಂಡನೀಯ. ಪಕ್ಷದ ವರಿಷ್ಠರು ರಮ್ಯಾ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ಒತ್ತಾಯಿಸಿದ್ದಾರೆ.
ಇಲ್ಲಿನ ಡಿ.ಕೆ.ಶಿವಕುಮಾರ್ ಅಭಿಮಾನಿ ಬಳಗದ ವತಿಯಿಂದ ಭಾನುವಾರ ಶಿವಕುಮಾರ್ ಜನ್ಮದಿನದ ಪ್ರಯುಕ್ತ ತಾಯಿಮಗು ಆಸ್ಪತ್ರೆಯಲ್ಲಿ ದಾಖಲಾದವರಿಗೆ ಹಣ್ಣುಬ್ರೆಡ್ ವಿತರಣೆ ಮಾಡಿ ಅವರು ಮಾತನಾಡಿ, ಡಿಕೆಶಿ ಅವರ ವಿರುದ್ಧ ಟೀಕೆ ಮಾಡುವಾಗ ಯಾರೇ ಆದರೂ ಎಚ್ಚರಿಕೆಯಿಂದ ಇರಬೇಕು ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಬಾಗಿಲು ಇಲ್ಲ. ಕಾಂಗ್ರೆಸ್‌ನಲ್ಲಿರುವುದು ಒಂದೇ ಬಾಗಿಲು ಆಗಿದ್ದು, ೨೦೨೩ರ ಚುನಾವಣೆಯಲ್ಲಿ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿಯುವುದು ನಿಶ್ಚಿತ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಯಾರಾಗಬೇಕು ಎನ್ನುವುದನ್ನು ಹೈಕಮಾಂಡ್ ಮತ್ತು ಆಯ್ಕೆಯಾಗಿ ಬಂದ ಶಾಸಕರು ತೀರ್ಮಾನಿಸುತ್ತಾರೆ. ಶಿವಕುಮಾರ್, ಸಿದ್ದರಾಮಯ್ಯ, ಎಂ.ಬಿ.ಪಾಟೀಲ್, ಡಾ. ಪರಮೇಶ್ವರ್ ಇನ್ನಿತರರ ಬಣ ಇದೆ ಎನ್ನುವುದು ಬಿಜೆಪಿ ಕಟ್ಟುಕಥೆಯಾಗಿದೆ. ಕಾಂಗ್ರೆಸ್‌ಗಿಂತ ಬಿಜೆಪಿಯಲ್ಲಿಯೇ ಹೆಚ್ಚು ಒಳಬಣಗಳಿವೆ ಎಂದು ಹೇಳಿದರು.
ಡಿಕೆಶಿ ಕಾಂಗ್ರೆಸ್ ದೊಡ್ಡ ಶಕ್ತಿಯಾಗಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ತರಬೇಕು ಎನ್ನುವ ಏಕೈಕ ಉದ್ದೇಶದಿಂದ ಹಗಲುರಾತ್ರಿ ಪಕ್ಷ ಸಂಘಟನೆಗೆ ಅವರು ಒತ್ತು ನೀಡುತ್ತಿದ್ದಾರೆ. ಅವರ ಸಂಘಟನಾಶಕ್ತಿ ಇನ್ನಷ್ಟು ಗಟ್ಟಿಗೊಳ್ಳಲಿ ಎನ್ನುವುದು ನಮ್ಮೆಲ್ಲರ ಹಾರೈಕೆ. ಈ ಹಿನ್ನೆಲೆಯಲ್ಲಿ ಅಭಿಮಾನಿ ಬಳಗದಿಂದ ರೋಗಿಗಳಿಗೆ ಹಣ್ಣುಬ್ರೆಡ್ ವಿತರಣೆ ಮಾಡುವ ಮೂಲಕ ಅವರ ಭವಿಷ್ಯ ಉಜ್ವಲವಾಗಲಿ ಎಂದು ಪ್ರಾರ್ಥಿಸಲಾಗಿದೆ ಎಂದು ಹೇಳಿದರು.
ನಗರಸಭೆ ವಿಪಕ್ಷ ನಾಯಕ ಮಂಡಗಳಲೆ ಗಣಪತಿ, ಅಭಿಮಾನಿ ಬಳಗದ ತಾಲೂಕು ಅಧ್ಯಕ್ಷ ಶ್ರೀಕಾಂತ್ ಕುರುವರಿ, ಉಪಾಧ್ಯಕ್ಷ ಸಂದೀಪ್ ಲ್ಯಾವಿಗೆರೆ, ಪ್ರಧಾನ ಕಾರ್ಯದರ್ಶಿ ಮೇಘರಾಜ್ ಗೌತಮಪುರ, ಕಾರ‍್ಯಾಧ್ಯಕ್ಷ ನಾಗೇಶ್ ನೇರಲಗಿ, ಖಜಾಂಚಿ ಮಹೇಶ್, ಪ್ರಮುಖರಾದ ರೇಖಾ ಕೃಷ್ಣಮೂರ್ತಿ, ನಯನ, ಚಿನ್ಮಯ್ ಸಾಗರ್ ಇನ್ನಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?
ಹಿಂದೂ ಅತ್ಯಂತ ಪುರಾತನವಾದ ಧರ್ಮ: ಡಾ.ನಿರ್ಮಲಾ ನಂದನಾಥ ಸ್ವಾಮೀಜಿ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thirthahalli: ತುಂಗಾ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ
MUST WATCH
ಹೊಸ ಸೇರ್ಪಡೆ
Karkala: ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ 24*7 ಸಿಟಿ ಸ್ಕ್ಯಾನ್ ಸೌಲಭ್ಯ ಉದ್ಘಾಟನೆ
Manipal: ಡಿಸಿ ಕಚೇರಿ ಆವರಣದಲ್ಲೂ ಬೀದಿನಾಯಿ ಉಪಟಳ
Malpe: ಕೋಡಿಬೆಂಗ್ರೆ-ಹಂಗಾರಕಟ್ಟೆ ಸಂಪರ್ಕ ಇನ್ನು ದೂರ
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Bengaluru: ಬೆಂಗಳೂರಲ್ಲಿ ಶೀಘ್ರ ಪ್ರತಿ ಕೆಜಿ ಈರುಳ್ಳಿ ಬೆಲೆ 100?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.