ರೈತರ ಬದುಕಿನೊಂದಿಗೆ ಸರ್ಕಾರದ ಚೆಲ್ಲಾಟ ;ಮಧು ಬಂಗಾರಪ್ಪ ಆಕ್ರೋಶ
ಲೋಡ್ ಶೆಡ್ಡಿಂಗ್ ಮಾಡುತ್ತಿರುವುದರಿಂದ ರೈತರು ಬೆಳೆದ ಬೆಳೆ ಕೈಗೆ ಸಿಗದಂತಾಗಿದೆ.
Team Udayavani, Mar 15, 2022, 6:02 PM IST
ಸೊರಬ: ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಹಾಗೂ ಸಕಾಲಕ್ಕೆ ರೈತರಿಗೆ ಟ್ರಾನ್ಸ್‌ಫಾರ್ಮರ್ ನೀಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಕಾಂಗ್ರೆಸ್ ವತಿಯಿಂದ ತಾಲೂಕಿನ ಆನವಟ್ಟಿಯ ಬಸ್ ನಿಲ್ದಾಣದ ಆವರಣದಲ್ಲಿ ಸೋಮವಾರ ಬೃಹತ್ ಪ್ರತಿಭಟನಾ ಸಭೆ ನಡೆಸಲಾಯಿತು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ಮಾಜಿ ಶಾಸಕ ಎಸ್. ಮಧು ಬಂಗಾರಪ್ಪ ಮಾತನಾಡಿ, ಸರ್ಕಾರಗಳ ಅವೈಜ್ಞಾನಿಕ ನೀತಿಯಿಂದ ರೈತರು ತಾವು ಬೆಳೆದ ಬೆಳೆಗಳನ್ನು ಉಳಿಸಿಕೊಳ್ಳಲು ಬೀದಿಗೆ ಬರುವಂತಾಗಿದೆ. ಹಿಂಗಾರು ಹಂಗಾಮಿನ ಬೇಸಿಗೆ ಬೆಳೆ ಹಾಗೂ ತೋಟಗಳಿಗೆ ನೀರು ಹಾಯಿಸಲು ಸಮರ್ಪಕವಾದ ವಿದ್ಯುತ್ ಇಲ್ಲದೆ ಒಣಗುತ್ತಿವೆ.
ಬಂಡವಾಳಶಾಹಿಗಳ ಕೈಗೊಂಬೆಯಾಗಿರುವ ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನಸಾಮಾನ್ಯರ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿವೆ. ರೈತರ ಬದುಕಿಗೆ ಆಸರೆಯಾಗಿ ರೈತರು ಬಳಸುವ ಪಂಪ್‌ಸೆಟ್ ಗಳಿಗೆ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರು ಉಚಿತವಾಗಿ ವಿದ್ಯುತ್ ನೀಡಿದರು.
ಪ್ರಸ್ತುತ ಅನಿಯಮಿತ ಲೋಡ್ ಶೆಡ್ಡಿಂಗ್ ಮಾಡುತ್ತಿರುವುದರಿಂದ ರೈತರು ಬೆಳೆದ ಬೆಳೆ ಕೈಗೆ ಸಿಗದಂತಾಗಿದೆ. ರಾಜ್ಯ ಸರ್ಕಾರಕ್ಕೆ ರೈತರಿಗೆ ನೀಡಲು ವಿದ್ಯುತ್ ಇಲ್ಲ. ಆದರೆ, ಖಾಸಗಿಯವರಿಗೆ ನೀಡಲು ವಿದ್ಯುತ್ ಇದೆ ಎಂದು ಆರೋಪಿಸಿದರು. ಹಾನಗಲ್ ಶಾಸಕ ಶ್ರೀನಿವಾಸ ಮಾನೆ ಮಾತನಾಡಿ, ಕಳೆದ ಎರಡೂವರೆ ವರ್ಷಗಳಲ್ಲಿ ಬಿಜೆಪಿ ಸರ್ಕಾರದಿಂದ ಯಾವುದೇ ಜನಪರ ಯೋಜನೆಗಳು ಜಾರಿಯಾಗಿಲ್ಲ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇಂಧನ ಸಚಿವರಿದ್ದಾಗ ವಿದ್ಯುತ್ ಇಲಾಖೆಯಲ್ಲಿ ಹಲವಾರು ಸುಧಾರಣೆಗಳನ್ನು ತಂದಿದ್ದರು. ಇದನ್ನು ಬಳಸಿಕೊಂಡು ಸಮಗ್ರ ವಿದ್ಯುತ್ ಪೂರೈಸಲು ಬಿಜೆಪಿ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ ಎಂದು ಆರೋಪಿಸಿದರು.
ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಆರ್. ಶ್ರೀಧರ್ ಹುಲ್ತಿಕೊಪ್ಪ, ಆನವಟ್ಟಿ ಬ್ಲಾಕ್ ಅಧ್ಯಕ್ಷ ಆರ್.ಸಿ. ಪಾಟೀಲ್, ಸೊರಬ ಬ್ಲಾಕ್ ಅಧ್ಯಕ್ಷ ಅಣ್ಣಪ್ಪ ಹಾಲಘಟ್ಟ, ಮಹಿಳಾ ಘಟಕದ ಅಧ್ಯಕ್ಷೆಯರಾದ ವಿಜಯಲಕ್ಷ್ಮಿ ಆನವಟ್ಟಿ, ಸುಜಾತಾ ಜೋತಾಡಿ ಸೊರಬ, ಜಿಪಂ ಮಾಜಿ ಸದಸ್ಯರಾದ ತಬಲಿ ಬಂಗಾರಪ್ಪ, ವೀರೇಶ್ ಕೊಟಗಿ, ಕುಪ್ಪಗಡ್ಡೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಲ್.ಜಿ. ರಾಜಶೇಖರ್, ಕುಪ್ಪಗಡ್ಡೆ ಗ್ರಾಪಂ ಅಧ್ಯಕ್ಷೆ ಕಮಲಾಕ್ಷಿ ಸತೀಶ್, ಪ್ರಮುಖರಾದ ಕೆ.ಪಿ.
ರುದ್ರಗೌಡ, ರುದ್ರಪ್ಪ ಕಡ್ಲೆರ್, ಎಚ್. ಗಣಪತಿ, ರವಿ ಬರಗಿ, ಸಂಜೀವ ನೇರಲಗಿ, ನಾಗರಾಜ ಗೌಡ ಚಿಕ್ಕಸವಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.