ಕೋವಿಡ್ ಔಷಧಿಗಳ ಮೇಲಿನ ಜಿಎಸ್‌ ಟಿ ರದ್ದುಗೊಳಿಸಿ : ಬಿ.ವಿ. ಶ್ರೀನಿವಾಸ್


Team Udayavani, May 28, 2021, 3:02 PM IST

vbvcxcvcds

ಶಿವಮೊಗ್ಗ: ಕೋವಿ ಡ್ಗೆ ಸಂಬಂಧಿಸಿದ ಎಲ್ಲಾ ಔಷಧಿಗಳ ಮೇಲಿನ ಜಿಎಸ್‌ಟಿ ರದ್ದುಗೊಳಿಸುವಂತೆ ಯುವ ಕಾಂಗ್ರೆಸ್‌ ನ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಆಗ್ರಹಿಸಿದ್ದಾರೆ.

ಇಲ್ಲಿನ ಹರ್ಷ ದಿ ಫರ್ನ್ ಹೋಟೆಲ್ ಹಿಂಭಾಗದಲ್ಲಿರುವ ಅಲೆಮಾರಿ ಸಮುದಾಯದ ನಿವಾಸಿಗಳಿಗೆ ಆಹಾರ ಕಿಟ್ ವಿತರಣೆ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಂದು ಕೊರೋನಾ ವೈರಸ್ ವಿಶ್ವವನ್ನೇ ಕಾಡುತ್ತಿದೆ. ಜನರ ಬಳಿ ಹಣವಿಲ್ಲ. ಇಂತಹ ಸಂದರ್ಭದಲ್ಲೇ ಸರ್ಕಾರ ಔಷಧಿಗಳ ಮೇಲೂ ಜಿಎಸ್‌ಟಿ ತೆರಿಗೆ ವಸೂಲು ಮಾಡುತ್ತಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.

ವಿಶ್ವದಲ್ಲೇ ಕೊರೋನಾಗೆ ವ್ಯಾಕ್ಸಿನ್ ಉತ್ಪಾದಿಸುತ್ತಿರುವುದು ಭಾರತದಲ್ಲಿ. ಆದರೆ, ಇಲ್ಲಿನ ಜನರಿಗೆ ವ್ಯಾಕ್ಸಿನ್ ಸಿಗುತ್ತಿಲ್ಲ. ಇಲ್ಲಿ ಉತ್ಪಾದನೆಯಾದ ವ್ಯಾಕ್ಸಿನ್ ಅನ್ನು ಬೇರೆ ದೇಶಗಳಿಗೆ ಮಾರಾಟ ಮಾಡಲಾಗುತ್ತಿದೆ. ಸರ್ಕಾರ ಜನರ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ  ತೋರುತ್ತಿದೆ ಎಂದು ಆರೋಪಿಸಿದರು.

ಈಗಾಗಲೇ ಕೊರೋನಾ 2ನೇ ಅಲೆ ದೇಶವನ್ನು ತತ್ತರಿಸುವಂತೆ ಮಾಡಿದೆ. 3ನೇ ಅಲೆ ಪ್ರಾರಂಭವಾಗಲಿದೆ. ಇಷ್ಟಾದರೂ ಸರ್ಕಾರ ಎಚ್ಚೆತ್ತುಕೊಂಡಿಲ್ಲ. ಕೂಡಲೇ ತಜ್ಞರೊಂದಿಗೆ ಸಮಾಲೋಚನೆ ನಡೆಸಬೇಕು. ಮೂರನೇ ಅಲೆ ನಿಯಂತ್ರಿಸಲು ಸಜ್ಜಾಗಬೇಕಿದೆ ಎಂದ ಅವರು, ಜನರ ಸಂಕಷ್ಟಕ್ಕೆ ಸ್ಪಂದಿಸುವುದು ಕಾಂಗ್ರೆಸ್ ಪರಂಪರೆ. ಹಾಗಾಗಿ ದೇಶಾದ್ಯಂತ ಹಸಿವಿನಿಂದ ಬಳಲುತ್ತಿರುವ ಜನರಿಗೆ ಆಹಾರ ಕಿಟ್ ವಿತರಣೆ, ರೋಗಿಗಳಿಗೆ ಆಂಬುಲೆನ್ಸ್ ಸೇವೆ ಒದಗಿಸುವು ಕೆಲಸ ಮಾಡಲಾಗುತ್ತಿದೆ ಎಂದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ತಾವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆಯುವಂತೆ ಕೆಲಸ ಮಾಡಲು ಪ್ರೇರೇಪಿಸಿದ ನಮ್ಮ ಹಿಂದಿರುವ ಶಕ್ತಿ ರಾಹುಲ್ ಗಾಂಧಿಯವರು. ಅವರು ಕಳೆದ ವರ್ಷ ಮಾರ್ಚ್ 1ರಂದು ಸಭೆ ನಡೆಸಿ, ಜನರ ಸಂಕಷ್ಟಕ್ಕೆ ನೆರವಾಗುವಂತೆ ಆದೇಶಿದ್ದರು. ಅದರಂತೆ ಕೆಲಸ ಮಾಡುತ್ತಿದ್ದೇವೆಂದರು.

ರಾಷ್ಟ್ರೀಯ ಕಾಂಗ್ರೆಸ್‌ನ ಕಾರ್ಯದರ್ಶಿ ಡಿ.ಎಂ. ಸಂದೀಪ್ ಮಾತನಾಡಿ, ರಾಜ್ಯದಲ್ಲಿ ಬಿಜೆಪಿಯ ಸಂಸದ ತೇಜಸ್ವಿ ಸೂರ್ಯ ಅವರು ಕೊರೋನಾ ನಿರ್ವಹಣೆಯ ಜವಾಬ್ದಾರಿ ಹೊತ್ತಿದ್ದರೂ ಅಸಮರ್ಪಕ ನಿರ್ವಹಣೆ ಮಾಡುತ್ತಿದ್ದಾರೆ. ಶ್ರೀನಿವಾಸ್ ಅವರನ್ನು ನೋಡಿ ಕಲಿತುಕೊಳ್ಳಲಿ ಎಂದರು.

ಈ ಸಂದರ್ಭದಲ್ಲಿ ನಗರಪಾಲಿಕೆ ಸದಸ್ಯರಾದ ಹೆಚ್.ಸಿ. ಯೋಗೀಶ್, ಯಮುನಾ ರಂಗೇಗೌಡ, ಯುವ ಮುಖಂಡರಾದ ಸಿ.ಜಿ. ಮಧುಸೂದನ್, ಕೆ. ಚೇತನ್, ಗಣೇಶ್, ಮೊಹಮ್ಮದ್ ನಿಹಾಲ್, ಆದರ್ಶ ಹುಂಚನಕಟ್ಟೆ, ಪ್ರದೀಪ್, ವಿನಾಯಕ್, ವಿನಯ್, ವಿಜಯ್ ಸೇರಿದಂತೆ ಹಲವರಿದ್ದರು.

ಟಾಪ್ ನ್ಯೂಸ್

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರುಕಲಾದ ಬಸ್

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.