ಗೋ ಕಳ್ಳಸಾಗಾಣಿಕೆ ತಡೆಯಲು ಕ್ರಮಕ್ಕೆ ಆಗ್ರಹ; ರಸ್ತೆ ತಡೆ ಮಾಡಿ ಪ್ರತಿಭಟನೆ


Team Udayavani, Oct 25, 2021, 6:39 PM IST

gow theft – protest

ಸಾಗರ: ತಾಲೂಕಿನಲ್ಲಿ ಹೆಚ್ಚುತ್ತಿರುವ ಗೋ ಕಳ್ಳಸಾಗಾಣಿಕೆ ತಡೆಯಬೇಕು ಮತ್ತು ಅ. ೨೩ರಂದು ಮಾರಿಕಾಂಬಾ ದೇವಸ್ಥಾನದ ಎದುರು ಮಲಗಿದ್ದ ಗೋವನ್ನು ಕದ್ದೊಯ್ದ ದುಷ್ಕರ್ಮಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಸೋಮವಾರ ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾರಿಕಾಂಬಾ ವೃತ್ತದಿಂದ ಮೆರವಣಿಗೆ ಹೊರಟ ಸಂಘ ಪರಿವಾರದ ಕಾರ್ಯಕರ್ತರು ಎಸ್‌ಎನ್ ನಗರ ವೃತ್ತದಲ್ಲಿ ಸುಮಾರು ಅರ್ಧ ಗಂಟೆಗಳ ಕಾಲ ರಸ್ತೆತಡೆ ನಡೆಸಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಘ ಪರಿವಾರದ ಹಿರಿಯರಾದ ಅ.ಪು.ನಾರಾಯಣಪ್ಪ, ರಸ್ತೆಯಲ್ಲಿ ಮಲಗಿದ್ದ ಜಾನುವಾರುಗಳನ್ನು ಕದ್ದೊಯ್ಯುವ ಜೊತೆಗೆ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಗೋವುಗಳನ್ನು ಸಹ ಅಕ್ರಮವಾಗಿ ಕದ್ದೊಯ್ಯಲಾಗುತ್ತಿದೆ. ಗೋಕಳ್ಳರನ್ನು ಹಿಡಿಯುವಂತೆ ಸಾಕಷ್ಟು ಬಾರಿ ಪೊಲೀಸ್ ಇಲಾಖೆಗೆ ಮನವಿ ಸಲ್ಲಿಸಿದಾಗಲೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದರು.
ದೇಶದಲ್ಲಿ ಬಲವಂತದ ಮತಾಂತರ, ಲವ್ ಜಿಹಾದ್‌ನಂತಹ ಕೃತ್ಯಗಳು ಹೆಚ್ಚುತ್ತಿದೆ. ಇದರ ವಿರುದ್ಧ ಕೇಂದ್ರ ಮತ್ತು ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು. ಬಾಂಗ್ಲಾದಲ್ಲಿ ಅಲ್ಪಸಂಖ್ಯಾತ ಹಿಂದುಗಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಗಮನ ಹರಿಸಬೇಕು. ಬಾಂಗ್ಲಾದಲ್ಲಿ ಶೇ. ೩೫ರಷ್ಟು ಹಿಂದೂಧರ್ಮಿಯರಿದ್ದಾರೆ. ಅವರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಹಿಂದೂಗಳ ರಕ್ಷಣೆಗೆ ಅಗತ್ಯಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ;- ಸೋತವನ ವಿರುದ್ದವೇ ಶರಣಾಗಿದ್ದೀಯ‌: ಸಿದ್ದರಾಮಯ್ಯಗೆ ಶ್ರೀನಿವಾಸ ಪ್ರಸಾದ್ ಟಾಂಗ್
ವಿಶ್ವಹಿಂದೂ ಪರಿಷತ್ ತಾಲೂಕು ಅಧ್ಯಕ್ಷ ರವೀಶ್ ಮಾತನಾಡಿ, ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಸಂಸದ ಬಿ.ವೈ.ರಾಘವೇಂದ್ರ ಇರುವ ಶಿಕಾರಿಪುರ ಕ್ಷೇತ್ರದಲ್ಲಿ ಹೆಚ್ಚಿನ ಗೋಹತ್ಯೆಯಾಗುತ್ತಿದೆ. ಇದರ ಬಗ್ಗೆ ಗಮನ ಹರಿಸಬೇಕು. ಸಾಗರ ಕ್ಷೇತ್ರವ್ಯಾಪ್ತಿಯಲ್ಲಿ ಗೋಹತ್ಯೆ ಮತ್ತು ಗೋಕಳ್ಳ ಸಾಗಾಣಿಕೆ ತಡೆಯುವಲ್ಲಿ ಪೊಲೀಸರು ಸಂಪೂರ್ಣ ವಿಫಲವಾಗಿದ್ದಾರೆ. ನಗರಸಭೆಯಿಂದ ಹಿಡಿದು ಕೇಂದ್ರ ಸರ್ಕಾರದವರೆಗೂ ಬಿಜೆಪಿ ಆಡಳಿತವಿದೆ.

ಅಧಿಕಾರಕ್ಕೆ ಬರುವ ಸಂದರ್ಭದಲ್ಲಿ ನಮ್ಮನ್ನು ಬಳಸಿಕೊಂಡು, ಹಿಂದುತ್ವ, ಗೋಸಂರಕ್ಷಣೆ ಬಗ್ಗೆ ಮಾತನಾಡುವ ಶಾಸಕರು, ನಗರಸಭೆ ಆಡಳಿತ ಈಗ ಗೋಕಳ್ಳ ಸಾಗಾಣಿಕೆ ನಡೆಯುತ್ತಿದ್ದರೂ ಕ್ರಮ ಜರುಗಿಸಲು ಹಿಂದೇಟು ಹಾಕುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದರು.


ವಿಶ್ವಹಿಂದೂ ಪರಿಷತ್ ತಾಲೂಕು ಅಧ್ಯಕ್ಷ ಪ್ರಕಾಶ್ ಕುಂಠೆ ಮಾತನಾಡಿ, ನಗರವ್ಯಾಪ್ತಿಯಲ್ಲಿ ಗೋವು ಕಳ್ಳಸಾಗಾಣಿಕೆ ತಡೆಗಟ್ಟದೆ ಹೋದಲ್ಲಿ ಸಾಗರ್ ಬಂದ್‌ಗೆ ಕರೆ ನೀಡಿ ಪ್ರತಿಭಟನೆ ನಡೆಸುವುದು ಅನಿವಾಂiiವಾಗುತ್ತದೆ. ಹೆಚ್ಚುತ್ತಿರುವ ಗೋಕಳ್ಳ ಸಾಗಾಣಿಕೆ ಮತ್ತು ಗೋಹತ್ಯೆ ತಡೆಗಟ್ಟಲು ಸಾಧ್ಯವಾಗದೆ ಹೋದಲ್ಲಿ ಆಳುವವರು ಹಿಂದೂಧರ್ಮಿಯರ ಆಕ್ರೋಶಕ್ಕೆ ಗುರಿಯಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ವಿಶ್ವಹಿಂದೂ ಪರಿಷತ್ ಜಿಲ್ಲಾ ಉಪಾಧ್ಯಕ್ಷ ಐ.ವಿ.ಹೆಗಡೆ, ಜಿಲ್ಲಾ ಕಾರ್ಯದರ್ಶಿ ರಾಘವೇಂದ್ರ ಕಾಮತ್, ಭಜರಂಗ ದಳದ ತಾಲೂಕು ಸಂಚಾಲಕ ಸಂತೋಷ್ ಶಿವಾಜಿ, ಪ್ರಮುಖರಾದ ಪ್ರತಿಮಾ ಜೋಗಿ, ಕೆ.ವಿ.ಪ್ರವೀಣ್, ಶ್ರೀಧರ್ ಸಾಗರ್, ಕಿರಣ್, ಮುರಳಿ ಮಂಚಾಲೆ, ಬಾಲಕೃಷ್ಣ ಗುಳೇದ್, ಕೋಮಲ್ ರಾಘವೇಂದ್ರ, ಅಶ್ವಿನಿ ಕಾಮತ್, ರವಿಕುಮಾರ್, ವಿರೂಪಾಕ್ಷ, ಲಕ್ಷ್ಮಣ್ ಮಾಗಡಿ ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರುಕಲಾದ ಬಸ್

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

13

Kundapura: ಮನೆಗೆ ನುಗ್ಗಿ ಚಿನ್ನಾಭರಣ ಕಳವು

POlice

Brahmavar: ಬೆಳ್ಮಾರು; ಕೋಳಿ ಅಂಕಕ್ಕೆ ದಾಳಿ

dw

Kundapura: ಮಲಗಿದಲ್ಲೇ ವ್ಯಕ್ತಿ ಸಾವು

death

Puttur: ಎಲೆಕ್ಟ್ರಿಕ್‌ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.