ಕೆಎಫ್‌ಡಿ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲು ಆಗ್ರಹ


Team Udayavani, Mar 20, 2020, 5:58 PM IST

20-March-30

ಶಿವಮೊಗ್ಗ: ಮಂಗನ ಕಾಯಿಲೆ (ಕೆಎಫ್‌ಡಿ) ನಿಯಂತ್ರಿಸುವಲ್ಲಿ ಸರ್ಕಾರ ಸಂಪೂರ್ಣ ವೈಫಲ್ಯ ಕಂಡಿದೆ ಎಂದು ಆರೋಪಿಸಿ ಕಾಯಿಲೆ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕೆಎಫ್‌ಡಿ ಜನಜಾಗೃತಿ ಒಕ್ಕೂಟದ ವತಿಯಿಂದ ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಜಿಲ್ಲೆಯಲ್ಲಿ ಕಳೆದ ವರ್ಷ ಸುಮಾರು 25 ಮಂದಿಯನ್ನು ಕಾಯಿಲೆ ಬಲಿ ತೆಗೆದುಕೊಂಡಿದೆ. ಮಂಗನ ಕಾಯಿಲೆ ಈ ಬಾರಿಯೂ ಈಗಾಗಲೇ ಒಂದೇ ತಿಂಗಳಲ್ಲಿ ನಾಲ್ಕು ಮಂದಿಯ ಜೀವ ತೆಗೆದಿರುವುದು ಸಾಕಷ್ಟು ಆತಂಕವನ್ನುಂಟು ಮಾಡಿದೆ ಎಂದರು.

ಕಳೆದ ಬೇಸಿಗೆಯಲ್ಲಿ ಹಾಗೂ ಅದರ ಹಿಂದಿನ ವರ್ಷದ ಡಿಸೆಂಬರ್‌ ವೇಳೆಗೆ ಆರಂಭವಾಗಿದ್ದ ಸಾವಿನ ಸರಣಿ ಇದೀಗ ಮತ್ತೆ ಆರಂಭವಾಗಿದೆ. ಅದರಲ್ಲೂ ಮುಖ್ಯವಾಗಿ ಕಳೆದ ವರ್ಷ ಸುಮಾರು 18 ಮಂದಿ ಮೃತಪಟ್ಟಿದ್ದ ಸಾಗರ ತಾಲೂಕಿನ ಭಟ್ಕಳ ಗಡಿಭಾಗದ ಅರಳಗೋಡು ಗ್ರಾಪಂ ವ್ಯಾಪ್ತಿಯಲ್ಲಿ ಈ ಬಾರಿ ರೋಗ ಉಲ್ಬಣಿಸಿದೆ. ಅಲ್ಲದೆ ಈಗಾಗಲೇ ನಾಲ್ಕು ಮಂದಿ ಮೃತಪಟ್ಟಿದ್ದಾರೆ ಎಂದರು.

ಕಳೆದ ವರ್ಷ ರೋಗ ಹಿಂದೆಂದೂ ಕಂಡರಿಯದ ಪ್ರಮಾಣದಲ್ಲಿ ಉಲ್ಬಣಗೊಂಡಿದ್ದು, ಆರಂಭದಲ್ಲಿ ಅಗತ್ಯ ರೋಗ ನಿಯಂತ್ರಣಕ್ಕೆ
ಯಾವುದೇ ಕ್ರಮ ಕೈಗೊಳ್ಳಲಿಲ್ಲ. ರೋಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಹತ್ತು ಹಲವು ಸಂಘ-ಸಂಸ್ಥೆಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ ಸಹ್ಯಾದ್ರಿ ಉತ್ಸವದಲ್ಲಿ ಜಿಲ್ಲಾಡಳಿತ ಮುಳುಗಿತ್ತು. ಜಿಲ್ಲಾಡಳಿತದ ನಿರ್ಲಕ್ಷ್ಯವೇ ಹಲವು ಜೀವಗಳಿಗೆ ಪರೋಕ್ಷ ಕಾರಣವಾಗಿತ್ತು ಎಂದು ಆರೋಪಿಸಿದರು.

1957ರಲ್ಲಿ ರೋಗ ಕಾಣಿಸಿಕೊಂಡಿದ್ದರೂ ಸರ್ಕಾರ ಇದುವರೆಗೂ ಸಹ ಇದಕ್ಕೊಂದು ಶಾಶ್ವತ ಪರಿಹಾರ ಕಂಡುಕೊಳ್ಳುವ ಇಚ್ಛಾಶಕ್ತಿ ತೋರುತ್ತಿಲ್ಲ. ಪ್ರತಿವರ್ಷ ಕಾಯಿಲೆ ಉಲ್ಬಣವಾದ ನಂತರ ಕಾರ್ಯಪ್ರವೃತ್ತವಾಗುವ ಆರೋಗ್ಯ ಇಲಾಖೆ ಮುಂಜಾಗ್ರತೆಯಾಗಿ ನೀಡುವ ಚುಚ್ಚುಮದ್ದು ಕೂಡ ರೋಗ ತಡೆಗಟ್ಟುವಲ್ಲಿ ವಿಫಲವಾಗುತ್ತಿದೆ ಎಂದು ಆರೋಪಿಸಿದರು.

ಕಳೆದ ಐವತ್ತು ವರ್ಷದ ಹಿಂದೆ ಸಂಶೋಧನೆಗೊಂಡ ಚುಚ್ಚುಮದ್ದನ್ನು ಈಗಲೂ ನೀಡಲಾಗುತ್ತಿದೆ. ಆದರೆ ವೈರಸ್‌ನಲ್ಲಿ ಆದ ಬೆಳವಣಿಗೆಗೆ ತಕ್ಕಂತೆ ರೋಗ ನಿರೋಧಕ ಚುಚ್ಚುಮದ್ದುಗಳನ್ನು ಸಂಶೋಧಿಸದೆ ಹಳೆಯ ಮಾದರಿಯ ಚುಚ್ಚುಮದ್ದುಗಳನ್ನು ನೀಡುತ್ತಿದ್ದು, ಜನರು ಮುಂಜಾಗ್ರತೆಯಾಗಿ ಚುಚ್ಚುಮದ್ದು ಪಡೆದರೂ ಸಹ ಮಂಗನ ಕಾಯಿಲೆಯಿಂದ ಜನರು ಬಳಲುವಂತಾಗಿದೆ ಎಂದು ಆರೋಪಿಸಿದರು.

ಈ ಬಾರಿ ಕೂಡ ಜಿಲ್ಲಾಡಳಿತ ಮುಂಜಾಗ್ರತೆಯಾಗಿ ಚುಚ್ಚುಮದ್ದು ವಿಷಯದಲ್ಲಾಗಲಿ, ಮಂಗನ ಸಾವಿನ ಪತ್ತೆ ಕೂಂಬಿಂಗ್‌ ಆಗಲಿ, ಕನಿಷ್ಠ ಜನಜಾಗೃತಿಯ ಕ್ರಮವನ್ನಾಗಲಿ ಮುಂಚಿತವಾಗಿ ಕೈಗೊಂಡಿಲ್ಲ. ಲೋಪಗಳ ಫಲವಾಗಿ ಇದೀಗ ಮತ್ತೆ ನಾಲ್ಕು ಮುಗ್ಧ ಜೀವಗಳು ಬಲಿಯಾಗಿವೆ ಎಂದರು. ಕಳೆದ ಬಾರಿ ಸೋಂಕಿತರ ಚಿಕಿತ್ಸಾ ವೆಚ್ಚ ಭರಿಸುವುದಾಗಿ ಹೇಳಿದ ಸರ್ಕಾರ, ಈವರೆಗೆ ಖಾಸಗಿ ಆಸ್ಪತ್ರೆಗೆ ಹಣ ಪಾವತಿ ಮಾಡಿಲ್ಲ. ಈ ಕಾರಣಕ್ಕೆ ಕೆಲವು ಆಸ್ಪತ್ರೆಗಳು ಚಿಕಿತ್ಸೆ ನೀಡಲು ನಿರಾಕರಿಸುತ್ತಿವೆ. ಚಿಕಿತ್ಸಾ ವೆಚ್ಚವನ್ನು ಸಕಾಲದಲ್ಲಿ ಬಿಡುಗಡೆ ಮಾಡುವಂತೆ ನೋಡಿಕೊಂಡು ಸೋಂಕಿತರ ಚಿಕಿತ್ಸೆಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕಾಗಿದೆ. ಆದರೆ ಈ ವಿಷಯ ಜಿಲ್ಲಾಡಳಿತ ಕಡೆಯಿಂದ ಸಾಕಷ್ಟು ಲೋಪವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಳೆದ ವರ್ಷವೇ ಸಾಗರದಲ್ಲಿ ವೈರಾಣು ರೋಗ ಸಂಶೋಧನೆಗಾಗಿ ವಿಶೇಷ ಪ್ರಯೋಗಾಲಯ ಆರಂಭಿಸಲು ಸರ್ಕಾರ 5 ಕೋಟಿ ರೂ ಬಿಡುಗಡೆ ಮಾಡಿದೆ. ಈವರೆಗೂ ಅದು ಕಾರ್ಯರೂಪಕ್ಕೆ ಬಂದಿಲ್ಲ ಎಂದು ಆರೋಪಿಸಿದರು. ಜಿಲ್ಲೆಯ ತಾಲ್ಲೂಕು ಆಸ್ಪತ್ರೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆಗೆ ಅಗತ್ಯ ಚುಚ್ಚುಮದ್ದು ಸೇರಿದಂತೆ ಸೂಕ್ತ ವೈದ್ಯಕೀಯ ಸೌಲಭ್ಯ ಮತ್ತು ಸಿಬ್ಬಂದಿ ವ್ಯವಸ್ಥೆ ಮಾಡಬೇಕು ಎಂದರು.

ಸಾಗರದಲ್ಲಿ ಕೆಎಫ್‌ಡಿ ವೈರಾಣು ಸಂಶೋಧನಾ ಕೇಂದ್ರದ ಆರಂಭಿಸಲು ಶೀಘ್ರಗತಿಯಲ್ಲಿ ಕೆಲಸ ಆರಂಭಿಸಬೇಕು. ಈ ನಮ್ಮ ಹಕ್ಕೊತ್ತಾಯಗಳನ್ನು ಮುಂದಿನ ಹದಿನೈದು ದಿನಗಳಲ್ಲಿ ಈಡೇರಿಸದೇ ಇದ್ದಲ್ಲಿ ವಿವಿಧ ಸಂಘಟನೆಗಳೊಂದಿಗೆ ಜಿಲ್ಲೆಯ ನಾಗರಿಕರನ್ನು ಸಂಘಟಿಸಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸಾಮಾಜಿಕ ಹೋರಾಟಗಾರರಾದ ಕೆ.ಪಿ. ಶ್ರೀಪಾಲ್‌, ಶಶಿ ಸಂಪಳ್ಳಿ, ಎಂ. ಗುರುಮೂರ್ತಿ, ರಾಜಪ್ಪ, ಮಂಜುನಾಥ್‌ ನವುಲೆ, ಚಟ್ನಳ್ಳಿ ನಾಗರಾಜ್‌, ರವಿ, ಮಾಲತೇಶ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Gold-saffron

Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

KSA-Nia-Arrest

Operation: ಕಾಸರಗೋಡಿನಲ್ಲಿ ಎನ್‌.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

sagara

Sagara: ಕಾಡಾನೆಗಳ ಹಾವಳಿ; ಲಕ್ಷಾಂತರ ರೂ. ಬೆಳೆ ನಷ್ಟ

19-thirthahalli

Thirthahalli: ನದಿಗೆ ಹಾರಿ ಕಾಲೇಜು ವಿದ್ಯಾರ್ಥಿ ಮೃತ್ಯು

1-edd

Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು

9

Shivamogga: ಅಯೋಧ್ಯೆ ರೀತಿ ವ‌ಕ್ಫ್ ಹಗರಣಕ್ಕೂ ನ್ಯಾಯ ಸಿಕ್ಕೇ ಸಿಗುತ್ತದೆ; ಈಶ್ವರಪ್ಪ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Gold-saffron

Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

KSA-Nia-Arrest

Operation: ಕಾಸರಗೋಡಿನಲ್ಲಿ ಎನ್‌.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.