ಸೊರಬ: ಮಾ. 26 ರಂದು ಹಿಂದೂ ಸಂಧ್ಯಾ ಸಂಗಮ-ಸನಾತನ ಧರ್ಮೋತ್ಸವ


Team Udayavani, Mar 20, 2022, 3:12 PM IST

14sorabha

ಸೊರಬ: ಹಿಂದೂ ಸಮಾಜದೊಳಗಿನ ಜಾತಿ ವೈಷಮ್ಯ ಮತ್ತಿತರರ ಅಸಮಾನತೆಯನ್ನು ಹೋಗಲಾಡಿಸಿ ಹಿಂದೂ ಧರ್ಮದಲ್ಲಿ ಜಾಗೃತಿ ಮೂಡಿಸುವ ಜೊತೆಗೆ ಭವಿಷ್ಯದ ಸವಾಲುಗಳನ್ನು ಒಗ್ಗಟ್ಟಿನಿಂದ ಎದುರಿಸಲು ಸಮಾಜವನ್ನು ಸಜ್ಜುಗೊಳಿಸುವ ಉದ್ದೇಶದಿಂದ ಪಟ್ಟಣದಲ್ಲಿ ಮಾ. 26 ರಂದು ಹಿಂದೂ ಸಂಧ್ಯಾ ಸಂಗಮ-ಸನಾತನ ಧರ್ಮೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ವಿಶ್ವ ಹಿಂದೂ ಪರಿಷದ್ ತಾಲೂಕು ಅಧ್ಯಕ್ಷ ಎಂ.ಎಸ್. ಕಾಳಿಂಗರಾಜ್ ತಿಳಿಸಿದರು.

ಪಟ್ಟಣದ ದಾನಮ್ಮ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾವೇಶಕ್ಕೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ತಾಲೂಕು ಮಟ್ಟದ ಕಾರ್ಯಕ್ರಮಕ್ಕೆ ಪಟ್ಟಣವನ್ನು ಕೇಂದ್ರವನ್ನಾಗಿಟ್ಟುಕೊಂಡು ನಡೆಸಲಾಗುತ್ತಿದೆ. ಹಿಂದೂ ಧರ್ಮದ ಒಗ್ಗಟ್ಟಿಗೆ ಸಮಾವೇಶ ಕೊಡುಗೆ ನೀಡಲಿದೆ. ಭವಿಷ್ಯದ ಸವಾಲುಗಳನ್ನು ಎದುರಿಸಲು ಹಿಂದೂ ಸಮಾಜ ಜಾತಿ-ಭೇದ ಮರೆತು ಒಗ್ಗಟ್ಟಾಗಬೇಕು. ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಸೇರಿದಂತೆ ಸಂಘ-ಪರಿವಾರದಲ್ಲಿ ಜಾತಿಯ ಪರಿಕಲ್ಪನೆಯೇ ಇಲ್ಲ. ಇಲ್ಲಿ ಎಲ್ಲ ಹಿಂದೂಗಳನ್ನು ಸಮಾನತೆಯಿಂದ ಪರಿಗಣಿಸಲಾಗುತ್ತದೆ. ಹಾಗೂ ಸಂಘಟನೆಯು ಯಾವುದೇ ಪಕ್ಷದ ಮುಖವಾಣಿಯಲ್ಲ. ನಮ್ಮದು ಹಿಂದೂ ಧರ್ಮಕ್ಕಾಗಿ ಕೆಲಸ ಮಾಡುವ ಸಂಘಟನೆ ಎಂದು ಸ್ಪಷ್ಟಪಡಿಸಿದರು.

ವಿಶ್ವ ಹಿಂದೂ ಪರಿಷದ್, ಬಜರಂಗದಳದಿಂದ ಹಮ್ಮಿಕೊಂಡಿರುವ ಕಾರ್ಯಕ್ರಮಕ್ಕೆ ಸುಮಾರು ಮೂರು ಸಾವಿರಕ್ಕೂ ಅಧಿಕ ಜನತೆ ಸೇರುವ ನಿರೀಕ್ಷೆ ಇದ್ದು, ಅಂದು ಮಧ್ಯಾಹ್ನ 2 ಕ್ಕೆ ಪಟ್ಟಣದ ಕಾನುಕೇರಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಿಂದ ವಿವಿಧ ವಾಧ್ಯ ಮೇಳಗಳು ಹಾಗೂ ಕಲಾತಂಡಗಳೊಂದಿಗೆ ಬೃಹತ್ ಶೋಭಾಯಾತ್ರೆ ನಡೆಯಲಿದೆ. ಶ್ರೀ ಸ್ವಾಮಿ ವಿವೇಕಾನಂದ ಶಾಲೆಯ ಮುಖಾಂತರ, ಸಾಗರ ರಸ್ತೆಯ ಪಿಎಲ್‍ಡಿ ಬ್ಯಾಂಕ್ ತಲುಪಿ, ನಂತರ ಖಾಸಗಿ ಬಸ್ ನಿಲ್ದಾಣ ವೃತ್ತದಿಂದ ಮುಖ್ಯರಸ್ತೆ ಮಾರ್ಗವಾಗಿ ಶ್ರೀ ರಂಗನಾಥ ದೇವಸ್ಥಾನದಿಂದ ಸಭಾ ಕಾರ್ಯಕ್ರಮ ನಡೆಯಲಿರುವ ಶ್ರೀ ಚನ್ನವೀರ ದೇಶೀಕೇಂದ್ರ ಬಾಲಿಕಾ ಪ್ರೌಢ ಶಾಲೆಯ ಆವರಣವನ್ನು ತಲುಪಲಿದೆ ಎಂದರು.

ಸಂಜೆ 6 ಕ್ಕೆ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ಜಡೆ ಸಂಸ್ಥಾನ ಮಠದ ಶ್ರೀ ಡಾ. ಮಹಾಂತ ಸ್ವಾಮೀಜಿ, ಜಡೆ ಹಿರೇಮಠದ ಶ್ರೀ ಘನಬಸವ ಅಮರೇಶ್ವರ ಶಿವಾಚಾರ್ಯ ಸ್ವಾಮೀಜಿ, ಹಿರೇಹಡಗಲಿ ಹಾಲಸ್ವಾಮೀಜಿ ಮಹಾಸಂಸ್ಥಾನ ಮಠದ ಶ್ರೀ ಅಭಿನವ ಹಾಲಸ್ವಾಮೀಜಿ, ಚಿತ್ರದುರ್ಗ ಮಡಿವಾಳ ಗುರುಪೀಠದ ಶ್ರೀ ಬಸವ ಮಾಚಿದೇವ ಸ್ವಾಮೀಜಿ, ಸೂರಗುಪ್ಪೆ ಶಾಂತಿ ಯೋಗಾಶ್ರಮದ ಶ್ರೀ ರಾಜಯೋಗಿ ಮಹಾಬಲೇಶ್ವರ ಸ್ವಾಮೀಜಿ, ಲಕ್ಕವಳ್ಳಿ ಮೋಕ್ಷ ಮಂದಿರ ಜೈನ ಮಠದ ಶ್ರೀ ವೃಷಭಸೇನ ಭಟ್ಟಾರಕ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಬಜರಂಗದಳ ದಕ್ಷಿಣ ಪ್ರಾಂತ್ಯ ಸಂಯೋಜಕ್ ಕೆ.ಆರ್. ಸುನೀಲ್ ಕುಮಾರ್ ಕಾರ್ಕಳ ಅವರು ದಿಕ್ಸೂಚಿ ಭಾಷಣ ಮಾಡುವರು. ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ವಾಸುದೇವ ಅಧ್ಯಕ್ಷತೆ ವಹಿಸುವರು ಎಂದರು.

ಮಾತೃ ಮಂಡಳಿಯ ಪ್ರಮುಖ್ ವಾಸಂತಿ ನಾವುಡಾ ಮಾತನಾಡಿ, ದೇಶಿಯ ಸಂಸ್ಕೃತಿಯಲ್ಲಿ ಪೂಜ್ಯನೀಯ ಸ್ಥಾನವನ್ನು ನೀಡಲಾಗುತ್ತದೆ. ಮಹಿಳೆಯರಿಗೆ ಗೌರವ ನೀಡುವ ನಾಡು ಸುಭೀಕ್ಷವಾಗಿರುತ್ತದೆ ಎಂದ ಅವರು, ಕಾರ್ಯಕ್ರಮಕ್ಕೆ ತಾಲೂಕಿನ ಸ್ತ್ರಿ ಶಕ್ತಿ ಸಂಘಟನೆಯವರು, ವಿವಿಧ ಮಹಿಳಾ ಸಂಘಟನೆಗಳು ಸಹ ಆಗಮಿಸುವಂತೆ ಕೋರಿದರು.

ಸುದ್ದಿಗೋಷ್ಠಿಯಲ್ಲಿ ವಿಶ್ವ ಹಿಂದೂ ಪರಿಷತ್ ತಾಲೂಕು ಉಪಾಧ್ಯಕ್ಷ ಹರೀಶ್ ಭಟ್, ನಗರ ಅಧ್ಯಕ್ಷ ರಾಜು ಹಿರಿಯಾವಲಿ, ನಗರ ಉಪಾಧ್ಯಕ್ಷ ಅಶೋಕ್ ಚಿಲ್ಲೂರು, ಬಜರಂಗದಳ ತಾಲೂಕು ಸಂಚಾಲಕ ರಂಗನಾಥ ಮೊಗವೀರ್, ತಾಲೂಕು ಸಹ ಸಂಚಾಲಕ ಲೋಕೇಶ್, ದುರ್ಗಾವಾಹಿನಿಯ ಕೃತಿಕಾ ಪುರಾಣಿಕ್, ಬಜರಂಗದಳ ಪ್ರಮುಖರಾದ ಎನ್. ರಾಘವೇಂದ್ರ ಆಚಾರ್, ಪುರಸಭೆ ಮಾಜಿ ಉಪಾಧ್ಯಕ್ಷೆ ಗೌರಮ್ಮ ಭಂಡಾರಿ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

mohammed shami

‌Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

13-

Anandapura: ನಿಂತಿದ್ದ ಕಾರಿಗೆ ಇನ್ನೊಂದು ಕಾರು ಡಿಕ್ಕಿ ಹೊಡೆದು ಕಾರು ಪಲ್ಟಿ

12-sagara

Sagara: ವಿದ್ಯುತ್ ಟ್ರಾನ್ಸ್‌ ಫಾರ್ಮರ್‌ಗೆ ನೇಣು ಬಿಗಿದು ಯುವಕ ಆತ್ಮಹತ್ಯೆ

6-

Sagara: ಮಿಡಿ ಮಾವು, ವಿಶ್ವವಿದ್ಯಾಲಯದ ನಡೆದಾಡುವ ವಿಶ್ವಕೋಶ ಬಿ.ವಿ.ಸುಬ್ಬರಾವ್ ಇನ್ನಿಲ್ಲ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

mohammed shami

‌Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!

SPB: ತಿರುವಳ್ಳೂರ್ ನಲ್ಲಿ ಎಸ್.ಪಿ. ಬಾಲಸುಬ್ರಹ್ಮಣ್ಯಂ ಸ್ಮಾರಕ ನಿರ್ಮಾಣ

SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ

naa ninna bidalare movie releasing today

Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1

Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.