26ಕ್ಕೆ ಹಿಂದೂ ಸಂಧ್ಯಾ ಸಂಗಮ-ಸನಾತನ ಧರ್ಮೋತ್ಸವ

ಭವಿಷ್ಯದ ಸವಾಲಿಗೆ ಜಾತಿ-ಭೇದ ಮರೆತು ಒಗ್ಗಟ್ಟಾಗಿ

Team Udayavani, Mar 21, 2022, 2:25 PM IST

sorabha

ಸೊರಬ: ಹಿಂದೂ ಸಮಾಜದೊಳಗಿನ ಜಾತಿ ವೈಷಮ್ಯ ಮತ್ತಿತರರ ಅಸಮಾನತೆಯನ್ನು ಹೋಗಲಾಡಿಸಿ ಹಿಂದೂ ಧರ್ಮದಲ್ಲಿ ಜಾಗೃತಿ ಮೂಡಿಸುವ ಜೊತೆಗೆ ಭವಿಷ್ಯದ ಸವಾಲುಗಳನ್ನು ಒಗ್ಗಟ್ಟಿನಿಂದ ಎದುರಿಸಲು ಸಮಾಜವನ್ನು ಸಜ್ಜುಗೊಳಿಸುವ ಉದ್ದೇಶದಿಂದ ಪಟ್ಟಣದಲ್ಲಿ ಮಾ.26ರಂದು ಹಿಂದೂ ಸಂಧ್ಯಾ ಸಂಗಮ-ಸನಾತನ ಧರ್ಮೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ವಿಶ್ವ ಹಿಂದೂ ಪರಿಷತ್‌ ತಾಲೂಕು ಅಧ್ಯಕ್ಷ ಎಂ.ಎಸ್‌. ಕಾಳಿಂಗರಾಜ್‌ ತಿಳಿಸಿದರು.

ಪಟ್ಟಣದ ದಾನಮ್ಮ ಕಾಂಪ್ಲೆಕ್ಸ್‌ ಸಭಾಂಗಣದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾವೇಶಕ್ಕೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ತಾಲೂಕು ಮಟ್ಟದ ಕಾರ್ಯಕ್ರಮಕ್ಕೆ ಪಟ್ಟಣವನ್ನು ಕೇಂದ್ರವನ್ನಾಗಿಟ್ಟುಕೊಂಡು ನಡೆಸಲಾಗುತ್ತಿದೆ. ಹಿಂದೂ ಧರ್ಮದ ಒಗ್ಗಟ್ಟಿಗೆ ಸಮಾವೇಶ ಕೊಡುಗೆ ನೀಡಲಿದೆ. ಭವಿಷ್ಯದ ಸವಾಲುಗಳನ್ನು ಎದುರಿಸಲು ಹಿಂದೂ ಸಮಾಜ ಜಾತಿ-ಭೇದ ಮರೆತು ಒಗ್ಗಟ್ಟಾಗಬೇಕು. ವಿಶ್ವ ಹಿಂದೂ ಪರಿಷತ್‌ ಮತ್ತು ಭಜರಂಗದಳ ಸೇರಿದಂತೆ ಸಂಘ-ಪರಿವಾರದಲ್ಲಿ ಜಾತಿಯ ಪರಿಕಲ್ಪನೆಯೇ ಇಲ್ಲ. ಇಲ್ಲಿ ಎಲ್ಲ ಹಿಂದೂಗಳನ್ನು ಸಮಾನತೆಯಿಂದ ಪರಿಗಣಿಸಲಾಗುತ್ತದೆ. ಹಾಗೂ ಸಂಘಟನೆಯು ಯಾವುದೇ ಪಕ್ಷದ ಮುಖವಾಣಿಯಲ್ಲ. ನಮ್ಮದು ಹಿಂದೂ ಧರ್ಮಕ್ಕಾಗಿ ಕೆಲಸ ಮಾಡುವ ಸಂಘಟನೆ ಎಂದು ಸ್ಪಷ್ಟಪಡಿಸಿದರು.

ವಿಶ್ವ ಹಿಂದೂ ಪರಿಷತ್‌ , ಭಜರಂಗದಳದಿಂದ ಹಮ್ಮಿಕೊಂಡಿರುವ ಕಾರ್ಯಕ್ರಮಕ್ಕೆ ಸುಮಾರು ಮೂರು ಸಾವಿರಕ್ಕೂ ಅಧಿಕ ಜನತೆ ಸೇರುವ ನಿರೀಕ್ಷೆ ಇದ್ದು, ಅಂದು ಮಧ್ಯಾಹ್ನ 2ಕ್ಕೆ ಪಟ್ಟಣದ ಕಾನುಕೇರಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಿಂದ ವಿವಿಧ ವಾಧ್ಯ ಮೇಳಗಳು ಹಾಗೂ ಕಲಾತಂಡಗಳೊಂದಿಗೆ ಬೃಹತ್‌ ಶೋಭಾಯಾತ್ರೆ ನಡೆಯಲಿದೆ. ಶ್ರೀ ಸ್ವಾಮಿ ವಿವೇಕಾನಂದ ಶಾಲೆಯ ಮುಖಾಂತರ, ಸಾಗರ ರಸ್ತೆಯ ಪಿಎಲ್‌ಡಿ ಬ್ಯಾಂಕ್‌ ತಲುಪಿ, ನಂತರ ಖಾಸಗಿ ಬಸ್‌ ನಿಲ್ದಾಣ ವೃತ್ತದಿಂದ ಮುಖ್ಯರಸ್ತೆ ಮಾರ್ಗವಾಗಿ ಶ್ರೀ ರಂಗನಾಥ ದೇವಸ್ಥಾನದಿಂದ ಸಭಾ ಕಾರ್ಯಕ್ರಮ ನಡೆಯಲಿರುವ ಶ್ರೀ ಚನ್ನವೀರ ದೇಶೀಕೇಂದ್ರ ಬಾಲಿಕಾ ಪ್ರೌಢಶಾಲೆ ಆವರಣ ತಲುಪಲಿದೆ ಎಂದರು.

ಸಂಜೆ 6ಕ್ಕೆ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ಜಡೆ ಸಂಸ್ಥಾನ ಮಠದ ಶ್ರೀ ಡಾ| ಮಹಾಂತ ಸ್ವಾಮೀಜಿ, ಜಡೆ ಹಿರೇಮಠದ ಶ್ರೀ ಘನಬಸವ ಅಮರೇಶ್ವರ ಶಿವಾಚಾರ್ಯ ಸ್ವಾಮೀಜಿ, ಹಿರೇಹಡಗಲಿ ಹಾಲಸ್ವಾಮೀಜಿ ಮಹಾಸಂಸ್ಥಾನ ಮಠದ ಶ್ರೀ ಅಭಿನವ ಹಾಲಸ್ವಾಮೀಜಿ, ಚಿತ್ರದುರ್ಗ ಮಡಿವಾಳ ಗುರುಪೀಠದ ಶ್ರೀ ಬಸವ ಮಾಚಿದೇವ ಸ್ವಾಮೀಜಿ, ಸೂರಗುಪ್ಪೆ ಶಾಂತಿ ಯೋಗಾಶ್ರಮದ ಶ್ರೀ ರಾಜಯೋಗಿ ಮಹಾಬಲೇಶ್ವರ ಸ್ವಾಮೀಜಿ, ಲಕ್ಕವಳ್ಳಿ ಮೋಕ್ಷ ಮಂದಿರ ಜೈನ ಮಠದ ಶ್ರೀ ವೃಷಭಸೇನ ಭಟ್ಟಾರಕ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಭಜರಂಗದಳ ದಕ್ಷಿಣ ಪ್ರಾಂತ್ಯ ಸಂಯೋಜಕ್‌ ಕೆ.ಆರ್‌. ಸುನೀಲ್‌ ಕುಮಾರ್‌ ಕಾರ್ಕಳ ಅವರು ದಿಕ್ಸೂಚಿ ಭಾಷಣ ಮಾಡುವರು. ವಿಶ್ವ ಹಿಂದೂ ಪರಿಷತ್‌ ಜಿಲ್ಲಾಧ್ಯಕ್ಷ ವಾಸುದೇವ ಅಧ್ಯಕ್ಷತೆ ವಹಿಸುವರು ಎಂದರು.

ಮಾತೃ ಮಂಡಳಿಯ ಪ್ರಮುಖ್‌ ವಾಸಂತಿ ನಾವುಡಾ ಮಾತನಾಡಿ, ದೇಶಿಯ ಸಂಸ್ಕೃತಿಯಲ್ಲಿ ಪೂಜ್ಯನೀಯ ಸ್ಥಾನವನ್ನು ನೀಡಲಾಗುತ್ತದೆ. ಮಹಿಳೆಯರಿಗೆ ಗೌರವ ನೀಡುವ ನಾಡು ಸುಭೀಕ್ಷವಾಗಿರುತ್ತದೆ ಎಂದರು. ಸುದ್ದಿಗೋಷ್ಠಿಯಲ್ಲಿ ವಿಶ್ವ ಹಿಂದೂ ಪರಿಷತ್‌ ತಾಲೂಕು ಉಪಾಧ್ಯಕ್ಷ ಹರೀಶ್‌ ಭಟ್‌, ನಗರ ಅಧ್ಯಕ್ಷ ರಾಜು ಹಿರಿಯಾವಲಿ, ನಗರ ಉಪಾಧ್ಯಕ್ಷ ಅಶೋಕ್‌ ಚಿಲ್ಲೂರು, ಭಜರಂಗದಳ ತಾಲೂಕು ಸಂಚಾಲಕ ರಂಗನಾಥ ಮೊಗವೀರ್‌, ತಾಲೂಕು ಸಹ ಸಂಚಾಲಕ ಲೋಕೇಶ್‌, ದುರ್ಗಾವಾಹಿನಿಯ ಕೃತಿಕಾ ಪುರಾಣಿಕ್‌, ಭಜರಂಗದಳ ಪ್ರಮುಖರಾದ ಎನ್‌. ರಾಘವೇಂದ್ರ ಆಚಾರ್‌, ಪುರಸಭೆ ಮಾಜಿ ಉಪಾಧ್ಯಕ್ಷೆ ಗೌರಮ್ಮ ಭಂಡಾರಿ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

B.-Y.-Raghavendra

B. Y. Raghavendra: 10 ವರ್ಷದಲ್ಲಿ ವಕ್ಫ್ ಆಸ್ತಿ ಶೇ.135 ಹೆಚ್ಚಳ

8

Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿಟ್ಟು ವ್ಯಕ್ತಿ ನಾಪತ್ತೆ ಪ್ರಕರಣ; ಶವ ಪತ್ತೆ

ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?

ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?

Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ

Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.