Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
Team Udayavani, Apr 27, 2024, 1:16 PM IST
ಹೊಳೆಹೊನ್ನೂರು: ರಾಜ್ಯದಲ್ಲಿ ಹಗಲಲ್ಲೇ ಹೆಣ್ಣು ಮಕ್ಕಳು ನಿರಾತಂಕವಾಗಿ ಓಡಾಡುವುದು ಕಷ್ಟವಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆರೋಪಿಸಿದರು.
ಅವರು ಸಮೀಪದ ಆನವೇರಿಯಲ್ಲಿ ಶುಕ್ರವಾರ ಪಟ್ಟಣ ಮಂಡಲ ಯುವ ಮೋರ್ಚಾ ಹಾಗೂ ಬಿಜೆಪಿ ಮಂಡಲ ವತಿಯಿಂದ ಅರಬಿಳಚಿ ಕ್ಯಾಂಪ್ ನಿಂದ ಆನವೇರಿಯವರೆಗೂ ಹಮ್ಮಿಕೊಂಡಿದ್ದ ಬೈಕ್ ರ್‍ಯಾಲಿ ಹಾಗೂ ಬಹಿರಂಗ ಪ್ರಚಾರ ಸಭೆ ಉದ್ಘಾಟಿಸಿ ಮಾತನಾಡಿದರು.
ರಾಜ್ಯದಲ್ಲಿ ಇತ್ತೀಚಿಗೆ 10 ಹಿಂದೂಗಳ ಕೊಲೆಗಳು ನಡೆದಿವೆ. ಯಾವುದಕ್ಕೂ ತಲೆ ಕೆಡಿಸಿಕೊಳ್ಳದ ಕಾಂಗ್ರೆಸ್‌ಗೆ ಗ್ಯಾರಂಟಿಗಳು ಕಣ್ಣುಕಟ್ಟಿವೆ. ಕಾಂಗ್ರೆಸ್‌ನ ಉಚಿತ ಭಾಗ್ಯಗಳಿಂದಾಗಿ ಕಳೆದ 10 ತಿಂಗಳಲ್ಲಿ ರಾಜ್ಯ 1.25 ಕೋಟಿ ಕುಟುಂಬಗಳು ಬಡತನ ನಿವಾರಣೆಯಾಗಿದೆ ಎಂದರೆ 60 ವರ್ಷಗಳಿಂದ ಈ ಸಾಧನೆ ಯಾಕೆ ಮಾಡಲಿಲ್ಲ ಎಂದು ಪ್ರಶ್ನಿಸಿದರು.
ವಿಧಾನಸಭೆಯ ಬಹುಮತದೊಂದಿಗೆ ಕಾಂಗ್ರೆಸ್ ಸರ್ಕಾರ ರಾಜ್ಯಕ್ಕೆ ಬರಗಾಲವನ್ನು ತಂದಿಕ್ಕಿದೆ. ಬರಗಾಲದಲ್ಲಿ ರೈತರ ಹಿತ ಕಾಪಾಡಬೇಕಾದ ಸರ್ಕಾರ ಗ್ಯಾರಂಟಿಗಳ ಬೆನ್ನು ಬಿದ್ದು ರಾಜ್ಯಕ್ಕೆ ಆರ್ಥಿಕ ಸಂಕಷ್ಠ ತಂದಿಕ್ಕುತ್ತಿದೆ. ಜಾಹೀರಾತುಗಳಿಗೆ ಸಾವಿರಾರು ಕೋಟಿ ರೂಪಾಯಿ ನೀಡುತ್ತಿರುವ ಕಾಂಗ್ರೆಸ್‌ಗೆ ಜನ ಹಿತ ಬೇಡವಾಗಿದೆ ಎಂದು ಹೇಳಿದರು.
ಹಿಂದುಳಿದ ವರ್ಗಗಳನ್ನು ಕಡೆಗಣಿಸಿ ಅಲ್ಪಸಂಖ್ಯಾತರ ಒಲೈಕೆಗೆ ಕಸರತ್ತು ನಡೆಸುತ್ತಿದ್ದಾರೆ. ರಾಜ್ಯದ ಅಭಿವೃದ್ದಿ ಅಕ್ಷರ ಸಹ ಮರೀಚಿಕೆಯಾಗಿದೆ. ರಾಜ್ಯ ಸರ್ಕಾರ ದುರಾಡಳಿತಕ್ಕೆ ಸಿಲುಕಿ ಜನತೆ ನಲುಗುತ್ತಿದ್ದಾರೆ ಎಂದರು.
ಬರ ಪರಿಹಾರ ನೀಡುವುದಕ್ಕೂ ಕೆಂದ್ರದ ಕಡೆ ಬೆರಳು ಮಾಡಿ ತೋರಿಸುವ ಸರ್ಕಾರ ಬರಗಾಳದಲ್ಲಿ ರೈತರ ಕೈ ಬಲ ಪಡಿಸುವ ಕೆಲಸ ಮಾಡದೆ ಕಾಲಹರಣ ಮಾಡುತ್ತಿದೆ. ಈ ಬಾರಿ ಜನತೆ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಲಿದ್ದಾರೆ. ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರಿನಲ್ಲಿ ನಮ್ಮ ಅಭ್ಯರ್ಥಿಗಳು ಅತಿ ಹೆಚ್ಚು ಬಹುಮತಗಳೊಂದಿಗೆ ಜಯಗಳಿಸುವುದರಲ್ಲಿ ಎರಡು ಮಾತಿಲ್ಲ. ಜಿಲ್ಲೆಯಲ್ಲಿ ಬಿಜೆಪಿ ಪರ ವಾತವರಣ ನಿರ್ಮಾಣವಾಗಿದೆ ಶಿವಮೊಗ್ಗದಲ್ಲಿ ಬಿ.ವೈ ರಾಘವೇಂದ್ರ 3 ಲಕ್ಷ ಅಧಿಕ ಮತಗಳಿಂದ ಗೆಲುವು ದಾಖಲಿಸುತ್ತಾರೆ ಎಂದು ಅವರು ಹೇಳಿದರು.
ಮಾಜಿ ಶಾಸಕ ಅಶೋಕ್ ನಾಯ್ಕ, ಕಳೆದ ವಿಧಾನ ಸಭೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಡೆದ ಒಟ್ಟು 1.50 ಲಕ್ಷ ಮತಗಳನ್ನು ಕ್ರೋಡಿಕರಿಸಿದರೆ. ಬಿವೈ ರಾಘವೇಂದ್ರ ಕೇಂದ್ರ ಮಂತ್ರಿಯಾಗುವುದು, ರಾಜ್ಯದಲ್ಲಿ ವಿಜಯೇಂದ್ರ ಮುಖ್ಯಮಂತ್ರಿಯಾಗುವುದು ತಡೆಯಲು ಯಾವ ಶಕ್ತಿಗಳಿಂದಲೂ ಸಾದ್ಯವಿಲ್ಲ. ಪ್ರತಿಯೊಂದು ಗ್ರಾಮದಲ್ಲೂ ಅದ್ಬುತ ಸ್ಪಂದನೆ ಸಿಗುತ್ತಿದೆ. ಕ್ಷೇತ್ರದಲ್ಲಿ ಮನೆ ಮನೆ ಪ್ರಚಾರ ಅದ್ಬುತವಾಗಿ ನಡೆದಿದೆ ಎಂದರು.
ಶಾಸಕಿ ಶಾರದ ಪೂರ್‍ಯಾನಾಯ್ಕ್, ಮಾಜಿ ಶಾಸಕ ಕುಮಾರಸ್ವಾಮಿ, ಪರಿಷತ್ ಸದಸ್ಯರಾದ ರುದ್ರೇಗೌಡ, ಭಾರತೀ ಶೆಟ್ಟಿ, ಬಿಜೆಪಿ ಯುವ ಅಧ್ಯಕ್ಷ ಕಿರಣ್‌ಗೌಡ, ವೈದ್ಯ ಡಾ|| ಧನಂಜಯ್ ಸರ್ಜಿ, ಮಂಡಲ ಅಧ್ಯಕ್ಷ ಮಲ್ಲೇಶಪ್ಪ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ವೀರಭದ್ರಪ್ಪ ಪೂಜಾರ್, ಸತೀಶ್ ಕೆ. ಶೆಟ್ಟಿ, ಕಾಂತರಾಜ್, ಎಸ್.ಶ್ರೀನಿವಾಸ್, ಡಿ.ಮಂಜುನಾಥ್, ಸುಬ್ರಮಣ್ಣಿ, ರಾಜೇಶ್ ಪಾಟೀಲ್, ಬಾಳೋಜಿ ಬಸವರಾಜ್, ರಾದಾಕೃಷ್ಣ, ಶಂಕರಮೂರ್ತಿ, ಮಹಾದೇವಪ್ಪ, ಕಿರಣ್ ಕುಮಾರ್ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
B. Y. Raghavendra: 10 ವರ್ಷದಲ್ಲಿ ವಕ್ಫ್ ಆಸ್ತಿ ಶೇ.135 ಹೆಚ್ಚಳ
Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿಟ್ಟು ವ್ಯಕ್ತಿ ನಾಪತ್ತೆ ಪ್ರಕರಣ; ಶವ ಪತ್ತೆ
ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?
Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.