Holehonnur: ಖಾಸಗಿ ಬಸ್ ಅಪಘಾತ; ಪ್ರಯಾಣಿಕರಿಗೆ ಗಾಯ
Team Udayavani, Jul 9, 2024, 8:28 PM IST
ಹೊಳೆಹೊನ್ನೂರು: ಶಿವಮೊಗ್ಗ- ಹೊಳೆಹೊನ್ನುರು ರಾಷ್ಟ್ರೀಯ ಹೆದ್ದಾರಿ ಮಾರ್ಗ ಮದ್ಯೆ ಪಿಳ್ಳಂಗೆರೆ ಗ್ರಾಮದಲ್ಲಿ ಸೋಮವಾರ ರಾತ್ರಿ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಕ್ಕದ ಮೋರಿಗೆ ಬಿದ್ದು, ಅಪಘಾತಕ್ಕೀಡಾಗಿದ್ದು ಚಾಲಕ ಹಾಗೂ ಕೆಲ ಪ್ರಯಾಣಿಕರಿಗೆ ಗಾಯಗಳಾಗಿದೆ.
ಸೋಮವಾರ ರಾತ್ರಿ ಖಾಸಗಿ ಸ್ಲೀಪರ್ ಬಸ್ ಸಾಗರದಿಂದ ಶಿವಮೊಗ್ಗ, ಚಿತ್ರದುರ್ಗ ಮೂಲಕ ಬೆಂಗಳೂರಿಗೆ ಹೊರಟಿದೆ. ಶಿವಮೊಗ್ಗದಲ್ಲೂ ಪ್ರಯಾಣಿಕರನ್ನು ಹತ್ತಿಸಿಕೊಂಡು ತಡರಾತ್ರಿ ಶಿವಮೊಗ್ಗದಿಂದ ಬೆಂಗಳೂರು ಕಡೆಗೆ ಸಾಗುವಾಗ ಮಾರ್ಗ ಮದ್ಯೆ ಚಾಲಕನ ನಿಯಂತ್ರಣ ಕಳೆದುಕೊಂಡಿದೆ.
ಈ ಪರಿಣಾಮ ಬಸ್ಸಿನ ವೇಗಕ್ಕೆ ರಸ್ತೆಯ ಬಲಭಾಗದಲ್ಲಿರುವ ಕಾಂಕ್ರಿಟ್ ಚರಂಡಿ ಹತ್ತಿ ಕೆಳಗೆ ನಿಲ್ಲಿಸಿದ್ದ ಮಾರುತಿ ವ್ಯಾನ್‌ಗೆ ಗುದ್ದಿ ಸುಮಾರು 50 ಮೀಟರ್ ದೂರಕ್ಕೆ ಎಳೆದುಕೊಂಡು ಹೋಗಿ ಅಲ್ಲಿದ್ದ ಮಣ್ಣಿನ ದಿಬ್ಬಕ್ಕೆ ತಾಗಿ ನಿಂತಿದೆ. ನಿದ್ರೆಯಲ್ಲಿದ್ದ ಇನ್ನೊಬ್ಬ ಚಾಲಕ ಹಾಗೂ ಬಸ್‌ನಲ್ಲಿ ಬಾಲಕಿಯೊಬ್ಬಳಿಗೆ ಪೆಟ್ಟಾಗಿದ್ದು ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ಬೆಳಗ್ಗೆ ಮೆಸ್ಕಾಂ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಹತ್ತಿರದಲಿದ್ದ ವಿದ್ಯುತ್ ಸಂಪರ್ಕ ಕಡಿತಗೊಳಿಸಿದರು. ಈ ಬಗ್ಗೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.