Holehonnur: ಗಣಪತಿ ಮೆರವಣಿಗೆ ವೇಳೆ ಡೊಳ್ಳು ಬಾರಿಸುವ ವಿಚಾರಕ್ಕೆ ಗಲಾಟೆ
ಪೊಲೀಸ್ ಸೇರಿದಂತೆ 6 ಮಂದಿಗೆ ಗಾಯ
Team Udayavani, Sep 8, 2024, 11:14 AM IST
ಹೊಳೆಹೊನ್ನೂರು: ಗಣಪತಿ ಮೂರ್ತಿ ಮೆರವಣಿಗೆ ವೇಳೆ ಡೊಳ್ಳು ಬಾರಿಸುವ ವಿಚಾರಕ್ಕೆ ಗಲಾಟೆ ನಡೆದ ಘಟನೆ ಸಮೀಪದ ಅರಬೀಳಚಿ ಕ್ಯಾಂಪಿನಲ್ಲಿ ಸೆ.7ರ ಶನಿವಾರ ರಾತ್ರಿ ನಡೆದಿದೆ.
ಅಕ್ಕಪಕ್ಕದ ಪೆಂಡಾಲ್ ನವರು ಒಂದೇ ತಂಡದವರನ್ನು ನೇಮಿಸಿದ ಪರಿಣಾಮ ಗಲಾಟೆ ನಡೆದಿರುವುದಾಗಿ ಹೇಳಲಾಗುತ್ತಿದೆ. ಗಲಾಟೆಯಲ್ಲಿ ಪೊಲೀಸರಿಗೂ ಸಣ್ಣಪುಟ್ಟ ಗಾಯವಾಗಿದ್ದು, ಗಲಾಟೆ ತಾರಕಕ್ಕೆ ಏರಿದ ಪರಿಣಾಮ ಪೊಲೀಸರು ಮಧ್ಯಪ್ರವೇಶಿಸಿ ಗಣಪತಿ ವಿಸರ್ಜನೆ ಮಾಡಿರುವುದಾಗಿ ಎಸ್ಪಿ ಮಿಥುನ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಅರಬಿಳಚಿ ಕ್ಯಾಂಪ್‌ನಲ್ಲಿ 2 ಗಣಪತಿ ಪೆಂಡಾಲ್‌ಗಳ ನಡುವೆ ಗಲಾಟೆ ನಡೆದಿದ್ದು, ಗಲಾಟೆಯಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ಸೇರಿದಂತೆ 6 ಮಂದಿಗೆ ಗಾಯವಾಗಿದೆ.
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅರಬಿಳಚಿ ಕ್ಯಾಂಪಿನ 2 ಕಾಲೋನಿಯಲ್ಲಿ ಗಣಪತಿ ಪ್ರತಿಷ್ಠಾಪನೆ ನಡೆದಿದೆ. ಗಣಪತಿ ಪ್ರತಿಷ್ಠಾಪನೆ ಮೆರವಣಿಗೆಗೆ 2 ಕಡೆಯಿಂದ ಒಂದೇ ತಂಡದವರಿಂದ ಡೊಳ್ಳು ಬಾರಿಸಲು ಮಾತುಕತೆ ನಡೆದಿತ್ತು. 2 ಸಮುದಾಯದವರಿಂದ ಒಂದೇ ಸಮಯಕ್ಕೆ ಮೆರವಣಿಗೆ ಹೊರಟಿತ್ತು. ನಮ್ಮ ಗಣಪತಿ ಮೆರವಣಿಗೆಗೆ ಡೊಳ್ಳು ಬಾರಿಸು ಎಂದು 2 ಗುಂಪಿನ ನಡುವೆ ಡೊಳ್ಳು ಬಾರಿಸುವವರ ಜೊತೆ ವಾಗ್ವಾದ ನಡೆದಿದೆ. ವಾಗ್ವಾದ ವಿಕೋಪಕ್ಕೆ ತಿರುಗಿ ಪೊಲೀಸ್ ಸೇರಿದಂತೆ 6 ಮಂದಿಗೆ ಗಾಯವಾಗಿದೆ. ಗಾಯಾಳುಗಳು ಭದ್ರಾವತಿ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.
ಘಟನೆ ಕುರಿತು ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thirthahalli: ತುಂಗಾ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ
Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Infectious Disease: ರಾಜ್ಯಕ್ಕೂ ಬೇಕಿದೆ “ವಿಷಾಣು ಯುದ್ಧ ಅಭ್ಯಾಸ್”
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.