ಏ.15ರಿಂದ ಮನೆಗಣತಿ
Team Udayavani, Mar 3, 2020, 2:51 PM IST
ಶಿವಮೊಗ್ಗ: ಜನಗಣತಿಗೆ ಪೂರ್ವಭಾವಿಯಾಗಿ ಏಪ್ರಿಲ್ 15 ರಿಂದ ಮೇ 29ರವರೆಗೆ ಜಿಲ್ಲೆಯಾದ್ಯಂತ ಮನೆ ಪಟ್ಟಿ ಮತ್ತು ಮನೆಗಣತಿ ಹಾಗೂ ರಾಷ್ಟ್ರೀಯ ಜನಸಂಖ್ಯಾ ರಿಜಿಸ್ಟರ್ ಪರಿಷ್ಕರಣೆ ಕಾರ್ಯ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಹೊಸ ಸಭಾಂಗಣದಲ್ಲಿ ಜನಗಣತಿ ಅಧಿಕಾರಿಗಳ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಈ ಬಾರಿ ಮನೆಗಣತಿ ಕಾರ್ಯವನ್ನು ಮೊಬೈಲ್ ಆ್ಯಪ್ ಮೂಲಕ ಸಹ ನಡೆಸಲು ಅವಕಾಶ ಕಲ್ಪಿಸಲಾಗಿದೆ. ದೇಶ ಸ್ವಾತಂತ್ರ್ಯ ಪಡೆದ ಬಳಿಕ ನಡೆಯುತ್ತಿರುವ 8ನೇ ಜನಗಣತಿ ಇದಾಗಿದ್ದು, ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ ಕೈಗೊಳ್ಳಲಾಗುತ್ತಿದೆ. ಮನೆಗಣತಿ ಪೂರ್ಣಗೊಂಡ ಬಳಿಕ ಮುಂದಿನ ವರ್ಷದ ಫೆ.9 ರಿಂದ 28ರವರೆಗೆ ವೈಯಕ್ತಿಕ ಜನಗಣತಿ ನಡೆಯಲಿದೆ ಎಂದರು.
ಜನಗಣತಿ ಕಾರ್ಯ ಮುಂದಿನ 10 ವರ್ಷಗಳ ಅವಧಿಗೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಜನಗಣತಿಯಲ್ಲಿ ಸಂಗ್ರಹಿಸಲಾಗುವ ಮಾಹಿತಿ ಆಧಾರದಲ್ಲಿ ಪ್ರತಿಯೊಂದು ಯೋಜನೆಗಳನ್ನು ರೂಪಿಸಲಾಗುತ್ತದೆ. ಆದ್ದರಿಂದ ಗಣತಿ ಸಂದರ್ಭದಲ್ಲಿ ನಿಖರ ಮಾಹಿತಿ ಸಂಗ್ರಹಿಸಬೇಕು. ಯಾವುದೇ ಗೊಂದಲಕ್ಕೆ ಆಸ್ಪದವಿಲ್ಲದಂತೆ ಗಣತಿ ಕಾರ್ಯ ಕೈಗೊಳ್ಳಬೇಕು ಎಂದರು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಭಾರತೀಯ ಜನಗಣತಿ ನಿರ್ದೇಶನಾಲಯದ ಹಿರಿಯ ಅಧಿಕಾರಿ ಕೇಶ್ಯಾ ನಾಯ್ಕ ಮಾತನಾಡಿ, ಮನೆ ಪಟ್ಟಿ ಮತ್ತು ಮನೆಗಣತಿ ಸಂದರ್ಭದಲ್ಲಿ ಮನೆ, ಕಟ್ಟಡ ಸೇರಿದಂತೆ ಎಲ್ಲಾ ನಿರ್ಮಾಣಗಳ ಮೂಲ ಸೌಲಭ್ಯಗಳಿಗೆ ಸಂಬಂಧಿಸಿದಂತೆ ಒಟ್ಟು 34 ಪ್ರಶ್ನೆಗಳಿದ್ದು, ಪ್ರತಿಯೊಂದು ಮಾಹಿತಿಗಳನ್ನು ಸಂಗ್ರಹಿಸಬೇಕು. 650 ರಿಂದ 800 ಜನರಿಗೆ ಅಥವಾ 150 ರಿಂದ 180 ಮನೆಗಳಿಗೆ ತಲಾ ಒಬ್ಬರು ಗಣತಿದಾರರನ್ನು ನೇಮಕ ಮಾಡಲಾಗುವುದು. ಪ್ರತಿ 6 ಗಣತಿದಾರರಿಗೆ ಒಬ್ಬರು ಮೇಲ್ವಿಚಾರಕರನ್ನು ನೇಮಕ ಮಾಡಲಾಗಿದೆ ಎಂದರು.
ಜನಗಣತಿಯ ಸಂದರ್ಭದಲ್ಲಿ ಪಡೆದ ಮಾಹಿತಿ ಗೌಪ್ಯವಾಗಿದ್ದು, ಅದನ್ನು ಸಾಕ್ಷಿಯಾಗಿ ಸಹ ಸ್ವೀಕರಿಸುವಂತಿಲ್ಲ. ಮನೆಗಣತಿ ಸಂದರ್ಭದಲ್ಲಿ ಯಾವುದೇ ದಾಖಲೆಗಳನ್ನು ಪಡೆಯಲಾಗುವುದಿಲ್ಲ. 2010ರಲ್ಲಿ ಸಂಗ್ರಹಿಸಲಾಗಿರುವ ಎನ್.ಪಿ.ಆರ್. ಮಾಹಿತಿಯನ್ನು ಇದೇ ಸಂದರ್ಭದಲ್ಲಿ ಪರಿಷ್ಕರಣೆ ಮಾತ್ರ ಮಾಡಲಾಗುತ್ತಿದೆ ಎಂದರು.
ಎನ್‌ಪಿಆರ್ ಪರಿಷ್ಕರಣೆ ಸಂದರ್ಭದಲ್ಲಿ 23 ಮಾಹಿತಿ ಸಂಗ್ರಹಿಸಲಾಗುವುದು. ಆದರೆ ಸಂಗ್ರಹಿಸುವ ಮಾಹಿತಿಗೆ ಪೂರಕವಾಗಿ ಯಾವುದೇ ದಾಖಲೆಗಳನ್ನು ಕೇಳುವುದಾಗಲೀ, ಪರಿಶೀಲಿಸುವುದಾಗಲಿ ಮಾಡುವುದಿಲ್ಲ. ಬಯೋಮೆಟ್ರಿಕ್ ಸಹ ಪಡೆಯಲಾಗುವುದಿಲ್ಲ ಎಂದರು.
ಅಪರ ಜಿಲ್ಲಾಧಿಕಾರಿ ಜಿ.ಅನುರಾಧಾ ಮಾತನಾಡಿದರು. ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ, ಯೋಜನಾ ನಿರ್ದೇಶಕ ಡಾ| ನಾಗೇಂದ್ರ ಹೊನ್ನಳ್ಳಿ, ಜಿಲ್ಲಾ ಸಾಂಖೀಕ ಅಧಿಕಾರಿ ಬ್ರಿಜೆಟ್ ವರ್ಗೀಸ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
MUST WATCH
ಹೊಸ ಸೇರ್ಪಡೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.