ಪ್ರತಿ ಹಳ್ಳಿಗೆ ತೆರಳಿ ಕೋವಿಡ್ ಜಾಗೃತಿ
Team Udayavani, Apr 18, 2020, 4:47 PM IST
ಹೊನ್ನಾಳಿ: ನ್ಯಾಮತಿ ತಾಲೂಕು ದೊಡ್ಡೇರಿ ಗ್ರಾಮದಲ್ಲಿ ಉದ್ಯೋಗ ಖಾತ್ರಿ ಯೋಜನೆ ಯಡಿ ಕೆರೆ ಹೂಳೆತ್ತುವ ಕಾಮಗಾರಿಗೆ ಶಾಸಕ ಎಂ.ಪಿ.ರೇಣುಕಾ ಚಾರ್ಯ ಚಾಲನೆ ನೀಡಿದರು.
ಹೊನ್ನಾಳಿ: ಹೊನ್ನಾಳಿ, ನ್ಯಾಮತಿ ತಾಲೂಕುಗಳ ಜನತೆಯ ಹಿತರಕ್ಷಣೆ ನನಗೆ ಮುಖ್ಯವಾಗಿದ್ದು, ಕೋವಿಡ್ ವೈರಸ್ ಸೋಂಕು ತಡೆಗಟ್ಟಲು ಕಳೆದ ಒಂದು ತಿಂಗಳಿನಿಂದ ಕ್ಷೇತ್ರದ ಪ್ರತಿ ಹಳ್ಳಿಗೂ ತೆರಳಿ ಜಾಗೃತಿ ಮೂಡಿಸುತ್ತಿದ್ದೇನೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ, ರೇಣುಕಾಚಾರ್ಯ ಹೇಳಿದರು.
ನ್ಯಾಮತಿ ತಾಲೂಕು ದೊಡ್ಡೇರಿ ಗ್ರಾಮದಲ್ಲಿ ಶುಕ್ರವಾರ ಉದ್ಯೋಗ ಖಾತ್ರಿ ಯೋಜನೆಯಡಿ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಮುಖ್ಯಮಂತ್ರಿ ಯಡಿಯೂರಪ್ಪನವರು ಕೋವಿಡ್ ಸೋಂಕು ತಡೆಗಟ್ಟಲು ಅನೇಕ ಕ್ರಮಗಳನ್ನು ಜಾರಿಗೊಳಿಸಿದ್ದಾರೆ ಪ್ರಾರಂಭದಲ್ಲಿ ಸೋಂಕು ಪೀಡಿತರ ಸಂಖ್ಯೆಯಲ್ಲಿ 3ನೇ ಸ್ಥಾನದಲ್ಲಿತ್ತು ಕರ್ನಾಟಕ ಈಗ 11ನೇ ಸ್ಥಾನದಲ್ಲಿದೆ ಎಂದರು.
ಪ್ರಧಾನಿ ನರೇಂದ್ರ ಮೋದಿಯವರು ಎರಡನೇ ಹಂತದ ಲಾಕ್‌ಡೌನ್ ಘೋಷಿಸಿದ್ದಾರೆ. ಮನೆಯಿಂದ ಹೊರಗೆ ಬಾರದಂತೆ ವಿಧಿಸಿದ ಕಠಿಣ ಪರಿಸ್ಥಿತಿ ಬಡ ಜನತೆಗೆ ನುಂಗಲಾರದ ತುತ್ತಾಗಿದೆ. ಕೂಲಿ ಕಾರ್ಮಿಕರ ದುಡಿಯುವ ಕೈಗಳಿಗೆ ಕೆಲಸವಿಲ್ಲದೇ ದಿನನಿತ್ಯದ ಜೀವನ ನಡೆಸುವುದೇ ಕಷ್ಟವಾದ ಈ ಸಮಯದಲ್ಲಿ ಉದ್ಯೋಗ ಖಾತ್ರಿ ಕಾಮಗಾರಿಗಳನ್ನು ಸಮರೋಪಾದಿಯಲ್ಲಿ ಕೈಗೊಂಡು ನರೇಗಾ ಕಾರ್ಮಿಕರಿಗೆ ಉದ್ಯೋಗ ನೀಡುವಂತೆ ನಮ್ಮ ಸರ್ಕಾರ ಆದೇಶಿಸಿದೆ. ಕಾಮಗಾರಿ ಕೈಗೊಳ್ಳುವ ಸ್ಥಳದಲ್ಲಿ ಕೂಲಿ ಕಾರ್ಮಿಕರ ಹಿತರಕ್ಷಣೆಗಾಗಿ ಪ್ರಥಮ ಚಿಕಿತ್ಸಾ ಪೆಟ್ಟಿಗೆ, ಸರ್ಜಿಕಲ್ ಮಾಸ್ಕ್, ಸ್ಯಾನಿಟೈಸರ್, ಶುದ್ಧ ಕುಡಿಯುವ ನೀರು, ನೆರಳಿಗೆ ಶಾಮಿಯಾನ ವ್ಯವಸ್ಥೆ ಕಲ್ಪಿಸಲು ತಾಪಂ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Holehonnur: ಎರಡು ಪ್ರತ್ಯೇಕ ರಸ್ತೆ ಅಪಘಾತ
Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
PM Modi: ಇಂದು ಕೆನ್-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ
A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್ ಬಿಹಾರಿ ವಾಜಪೇಯಿ
Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ
Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!
Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.