ನೋಡುಗರ ಮೈನವಿರೇಳಿಸಿದ ಹೋರಿ ಬೆದರಿಸುವ ಹಬ್ಬ

Team Udayavani, Nov 9, 2021, 9:51 AM IST

2hori

ಸೊರಬ: ಗ್ರಾಮೀಣ ಭಾಗದ ರೈತರ ಹಬ್ಬವಾಗಿರುವ ಜನಪದ ಕ್ರೀಡೆ, ಸಾಂಪ್ರದಾಯಿಕ ಹೋರಿ ಬೆದರಿಸುವ ಹಬ್ಬ ತಾಲೂಕಿನ ಯಲವಳ್ಳಿ ಗ್ರಾಮದಲ್ಲಿ ಸೋಮವಾರ ಜರುಗಿತು.

ದೀಪಾವಳಿಯ ನಂತರದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಹೋರಿ ಬೆದರಿಸುವ ಹಬ್ಬ ಮಹತ್ವವನ್ನು ಪಡೆದಿದ್ದು, ಅಖಾಡದಲ್ಲಿ ಹೋರಿಗಳು ಓಡಿ ಹೋಗುವುದನ್ನು ನೋಡಲು ತಾಲೂಕಿನ ವಿವಿಧ ಗ್ರಾಮಗಳು ಸೇರಿದಂತೆ ನೆರೆಯ ತಾಲೂಕು, ಜಿಲ್ಲೆಗಳಿಂದ ಭಾರಿ ಸಂಖ್ಯೆಯಲ್ಲಿ ಹೋರಿ ಪ್ರೀಯರು ಆಗಮಿಸಿದ್ದರು. ಅಖಾಡದಲ್ಲಿ ಪೈಲ್ವಾನರ ಕೈಗೆ ಸಿಗದಂತೆ ಹೋರಿಗಳು ಓಡಿ ಹೋಗುವ ದೃಶ್ಯ ನೋಡುಗರ ಮೈನವಿರೇಳಿಸಿತು.

ಹೋರಿಗಳ ಮಾಲೀಕರು ಹೋರಿಗಳಿಗೆ ವಿವಿಧ ಬಗೆಯ ಜೂಲಗಳನ್ನು ಹೊದಿಸಿ, ಬಣ್ಣ ಬಣ್ಣದ ಬಲೂನುಗಳು ಹಾಗೂ ಕೊಬ್ಬರಿ ಕಟ್ಟಿ ಶೃಂಗರಿಸಿದ್ದರು. ಅಖಾಡದಲ್ಲಿ ಪುನೀತ್ ರಾಜ್‍ಕುಮಾರ್ ಸವಿನೆನಪಿಗಾಗಿ ಆನವಟ್ಟಿಯ ಪವರ್ ಸ್ಟಾರ್, ಹಿರೇಕಸವಿ ಹಂತಕ, ತಡಸನಹಳ್ಳಿ ಡಾನ್, ಬಿಳಕಿ ಕೆಪಿಆರ್ ಕಿಂಗ್, ಮಾವಲಿ ಗೌಡ್ರು ಮಗ, ಬೈರೇಕೊಪ್ಪದ ಮದಗಜ, ಕೊಡಕಣಿ ಕದಂಬ, ಶಿರಾಳಕೊಪ್ಪದ ವೀರಕೇಸರಿ, ಸೊರಬದ ಶ್ರೀರಾಮ, ಚಿಕ್ಕಸವಿ ಜನಮೆಚ್ಚಿದ ಮಗ, ಕೊಡಕಣಿ ಬಸವ, ಯಲವಳ್ಳಿ ಗ್ರಾಮದ ಹೋರಿಗಳಾದ ಪಾಳೇಗಾರ, ಜಮೀನ್ದಾರ, ಗರುಡ, ಅಭಿಮನ್ಯು, ಕಂಸ ಹೋರಿ ಸವಿನೆನಪಿಗಾಗಿ ಕಲ್ಲೇಶ, ಸೇರಿದಂತೆ ವಿವಿಧ ಹೆಸರುಗಳ ಹೋರಿಗಳು ಅಖಾಡದಲ್ಲಿ ಓಡಿದವು. ಯುವಕರು ಹೋರಿಗಳನ್ನು ಹಿಡಿದು ಬಲ ಪ್ರದರ್ಶಿಸಿದರೆ, ಜನತೆ ಅದನ್ನು ನೋಡಿ ರೋಮಾಂಚನಗೊಂಡರು.

ಇದನ್ನೂ ಓದಿ:ಪತ್ರಕರ್ತರ ಸಮ್ಮೇಳನದ ಲಾಂಛನ ಬಿಡುಗಡೆ

ಗ್ರಾಮ ಸಮಿತಿಯವರು ಅಖಾಡದಲ್ಲಿ ಎರಡು ಬದಿಯಲ್ಲಿ ಸುರಕ್ಷತಾ ಕ್ರಮ ಕೈಗೊಂಡು, ಅಖಾಡದಲ್ಲಿ ಕ್ರಮವಾಗಿ ಒಂದೊಂದೆ ಹೋರಿಗಳನ್ನು ಓಡಿಸಿದರು. ಇದರಿಂದ ಯಾವುದೇ ಅಪಾಯಗಳು ಸಂಭವಿಸಲಿಲ್ಲ. ಸಮಿತಿಯವರು ಉತ್ತಮ ರೀತಿಯಲ್ಲಿ ಸುರಕ್ಷತೆಗೆ ಗಮನ ನೀಡಿದ್ದರು. ಇದು ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಯಿತು. ಅಖಾಡದಲ್ಲಿ ಉತ್ತಮವಾಗಿ ಓಡಿದ ಹೋರಿಗಳು ಹಾಗೂ ಬಲ ಪ್ರದರ್ಶನ ತೋರಿದ ಯುವಕರನ್ನು ಗುರುತಿಸಲಾಯಿತು.

ಟಾಪ್ ನ್ಯೂಸ್

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Na-Desoza-sagara

ಸಾಗರಕ್ಕೆ ಆಗಮಿಸಿದ ಡಾ.ನಾ.ಡಿಸೋಜಾ ಪಾರ್ಥಿವ ಶರೀರ; ಗಣ್ಯರು, ಅಧಿಕಾರಿಗಳಿಂದ ಅಂತಿಮ ದರ್ಶನ

Hosnagara-Bus

Hosanagar: ಪ್ರಪಾತಕ್ಕೆ ಉರುಳಿದ ಬಸ್; ಸಣ್ಣ ಪುಟ್ಟ ಗಾಯಗಳಿಂದ ಪ್ರಯಾಣಿಕರು ಪಾರು

Sarji sweet box case: ಲವ್‌ ಫೈಲ್ಯೂರ್‌ ಆಗಿದ್ದಕ್ಕೆ ಕೃತ್ಯ ಮಾಡಿದ್ದ ಲಾಯರ್!

Sarji sweet box case: ಲವ್‌ ಫೈಲ್ಯೂರ್‌ ಆಗಿದ್ದಕ್ಕೆ ಸೇಡಿಗಾಗಿ ಕೃತ್ಯ ಮಾಡಿದ್ದ ಲಾಯರ್!

ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…

ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…

Na-Dsoza-Family

ಸಾಹಿತ್ಯದಾಚೆಗೂ ಬೆಳೆದು ನಿಂತ ಸಾಗರದ ನಾ.ಡಿ’ಸೋಜಾ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1

Karinja: ಅಪಾಯಕಾರಿ ವಿದ್ಯುತ್‌ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.