ಸೊರಬ: ಸಡಗರದಿಂದ ನಡೆದ ಹೋರಿ ಬೆದರಿಸುವ ಹಬ್ಬ


Team Udayavani, Apr 4, 2022, 7:42 PM IST

Untitled-1

ಸೊರಬ: ಮಲೆನಾಡು ಹಾಗೂ ಬಯಲುಸೀಮೆ ಭಾಗದ ರೈತರ ಹಬ್ಬವಾಗಿರುವ ಜನಪದ ಕ್ರೀಡೆ, ಸಾಂಪ್ರದಾಯಿಕ ರಾಜ್ಯ ಮಟ್ಟದ ಹೋರಿ ಬೆದರಿಸುವ ಹಬ್ಬ ತಾಲೂಕಿನ ಕುಬಟೂರು ಗ್ರಾಮದಲ್ಲಿ ಸೋಮವಾರ ಜರುಗಿತು.

ಗ್ರಾಮೀಣ ಪ್ರದೇಶಗಳಲ್ಲಿ ಹೋರಿ ಬೆದರಿಸುವ ಹಬ್ಬ ಮಹತ್ವವನ್ನು ಪಡೆದಿದ್ದು, ಅಖಾಡದಲ್ಲಿ ಹೋರಿಗಳು ಓಡಿ ಹೋಗುವುದನ್ನು ನೋಡಲು ತಾಲೂಕಿನ ವಿವಿಧ ಗ್ರಾಮಗಳು ಸೇರಿದಂತೆ ನೆರೆಯ ತಾಲೂಕು, ಜಿಲ್ಲೆಗಳಿಂದ ಭಾರಿ ಸಂಖ್ಯೆಯಲ್ಲಿ ಹೋರಿ ಪ್ರೀಯರು ಆಗಮಿಸಿದ್ದರು. ಅಖಾಡದಲ್ಲಿ ಪೈಲ್ವಾನರ ಕೈಗೆ ಸಿಗದಂತೆ ಹೋರಿಗಳು ಓಡಿ ಹೋಗುವ ದೃಶ್ಯ ನೋಡುಗರ ಮೈನವಿರೇಳಿಸಿತು.

ಹೋರಿಗಳ ಮಾಲೀಕರು ಹೋರಿಗಳಿಗೆ ವಿವಿಧ ಬಗೆಯ ಜೂಲಗಳನ್ನು ಹೊದಿಸಿ, ಬಣ್ಣ ಬಣ್ಣದ ಬಲೂನುಗಳು ಹಾಗೂ ಕೊಬ್ಬರಿ ಕಟ್ಟಿ ಶೃಂಗರಿಸಿದ್ದರು. ಅಖಾಡದಲ್ಲಿ ಚಾಮುಂಡಿ ಎಕ್ಸ್‍ಪ್ರೆಸ್, ಅಗಸನಹಳ್ಳಿ ನರಸಿಂಹ, ನಲ್ಲಿಕೊಪ್ಪದ ಬಸವ, ಶಿಕಾರಿಪುರ ಹಿಟ್ಲರ್, ಎನ್‍ಟಿಸಿ ಸಾಹುಕಾರ, ಹೊಸಳ್ಳಿ ವಾರಸುದಾರ, ನಿಟ್ಟಕ್ಕಿ ಸಿಪಾಯಿ ದಂಗೆ, ಶಿಕಾರಿಪುರ ಅಘೋರ, ಮಲೆನಾಡ ಮಹಾರಾಜ, ಮರೂರು ತಾರಕಾಸುರ, ಬಿಳವಾಣಿ ಮಣಿಕಂಠ, ಶಿಕಾರಿಪುರದ ಸಿಂಹ, ಕೊಡಕಣಿ ಡೇಂಜರ್ ಬಸವ, ಮಲೆನಾಡ ಮಾಣಿಕ್ಯ, ಅಗಸನಹಳ್ಳಿ ಹೊಯ್ಸಳ, ಕರ್ನಾಟಕದ ನಂದಿ, ಹಾನಗಲ್ಲ ಟೈಗರ್, ತಾವರೆಕೊಪ್ಪದ ಪೈಲ್ವಾನ್, ಸೊರಬದ ಪ್ರಳಯ, ಮಧುರವಳ್ಳಿ ಡೇಂಜರ್‍ಮುತ್ತು, ಹೋತನಕಟ್ಟಿ ರಾಜಕುಮಾರ, ಸೊರಬದ ಭಾರತರತ್ನ, ಹಿರೇಇಡಗೋಡು ಉಡಾಳ ಕರಿಯ, ದೊಡ್ಡಿಕೊಪ್ಪದ ಜಂಪಿಂಗ್ ಸ್ಟಾರ್, ಹಾಲಗಳಲೆ ಹೆಬ್ಬುಲಿ ಹಾಗೂ ಹಿಂದೂ ಹುಲಿ ಹರ್ಷ ಸವಿನೆನಪಿಗಾಗಿ ಉದ್ರಿ ಮಣಿಕಂಠ ಸೇರಿದಂತೆ ವಿವಿಧ ಹೆಸರುಗಳ ಹೋರಿಗಳು ಅಖಾಡದಲ್ಲಿ ಓಡಿದವು. ಯುವಕರು ಹೋರಿಗಳನ್ನು ಹಿಡಿದು ಬಲ ಪ್ರದರ್ಶಿಸಿದರೆ, ಜನತೆ ಅದನ್ನು ನೋಡಿ ರೋಮಾಂಚನಗೊಂಡರು. ಅಖಾಡದಲ್ಲಿ ತೇರಿನಂತೆ ಕಾಣುವ ಪೀಪಿ ಹೋರಿಗಳು ಓಡಿ ಬರುತ್ತಿದ್ದಂತೆ ನೆರೆದವರಿಂದ ಕೇಕೆ, ಶಿಳ್ಳೆ, ಚಪ್ಪಾಳೆಗಳು ಜೋರಾಗಿಯೇ ಕೇಳಿಬಂದಿತು.

ಹೋರಿ ಹಬ್ಬದ ಆಯೋಜಿಸಿದ್ದ ಕುಬಟೂರು ಗ್ರಾಮಸ್ಥರು ಅಖಾಡದಲ್ಲಿ ಎರಡು ಬದಿಯಲ್ಲಿ ಸುರಕ್ಷತಾ ಕ್ರಮ ಕೈಗೊಂಡು, ಅಖಾಡದಲ್ಲಿ ಕ್ರಮವಾಗಿ ಒಂದೊಂದೆ ಹೋರಿಗಳನ್ನು ಓಡಿಸಿದರು. ಇದರಿಂದ ಯಾವುದೇ ಅಪಾಯಗಳು ಸಂಭವಿಸಲಿಲ್ಲ. ಆಯೋಜಕರು ಉತ್ತಮ ರೀತಿಯಲ್ಲಿ ಸುರಕ್ಷತೆಗೆ ಗಮನ ನೀಡಿದ್ದರು. ಇದು ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಯಿತು. ಅಖಾಡದಲ್ಲಿ ಉತ್ತಮವಾಗಿ ಓಡಿದ ಹೋರಿಗಳು ಹಾಗೂ ಬಲ ಪ್ರದರ್ಶನ ತೋರಿದ ಯುವಕರನ್ನು ಗುರುತಿಸಲಾಯಿತು.

 

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

B.-Y.-Raghavendra

B. Y. Raghavendra: 10 ವರ್ಷದಲ್ಲಿ ವಕ್ಫ್ ಆಸ್ತಿ ಶೇ.135 ಹೆಚ್ಚಳ

8

Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿಟ್ಟು ವ್ಯಕ್ತಿ ನಾಪತ್ತೆ ಪ್ರಕರಣ; ಶವ ಪತ್ತೆ

ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?

ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?

Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ

Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.