Hosanagar: ಶೈಕ್ಷಣಿಕ ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ಅಪಘಾತ: 29 ಮಂದಿಗೆ ಗಾಯ
Team Udayavani, Nov 18, 2024, 5:21 PM IST
ಹೊಸನಗರ: ಶಾಲಾ ಮಕ್ಕಳ ಶೈಕ್ಷಣಿಕ ಪ್ರವಾಸ ಹೊರಟಿದ್ದ ಬಸ್ಸೊಂದು ಅಪಘಾತಕ್ಕೆ ತುತ್ತಾಗಿ 29 ಜನರು ಗಾಯಗೊಂಡ ಘಟನೆ ಮುಂಡಳ್ಳಿ ಸಮೀಪ ನರ್ತಿಗೆ ಬಳಿ ಸೋಮವಾರ (ನ.18) ನಡೆದಿದೆ.
ಚಾಮರಾಜನಗರ ಆಳಂದೂರು ಖಾಸಗಿ ಶಾಲೆಯ ವಿದ್ಯಾರ್ಥಿಗಳಿದ್ದ ಪ್ರವಾಸಿ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಮರವೊಂದಕ್ಕೆ ಡಿಕ್ಕಿ ಹೊಡೆದಿದ್ದು, ಡಿಕ್ಕಿಯಾದ ರಭಸಕ್ಕೆ ಬಸ್ಸಿನ ಮುಂಭಾಗ ನಜ್ಜುಗುಜ್ಜಾಗಿದೆ.
ಗಾಯಗೊಂಡವರನ್ನು ಕೂಡಲೇ ಎರಡು ಅಂಬುಲೆನ್ಸ್ ನಲ್ಲಿ ನಗರ ಆಸ್ಪತ್ರೆಗೆ ಸಾಗಿಸಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಹೊಸನಗರ ತಾಲೂಕು ಆಸ್ಪತ್ರೆಗೆ ಹಾಗೂ ಹೆಚ್ಚು ಗಾಯಗೊಂಡವರನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಪಂದನೆ:
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ದೌಡಾಯಿಸಿದ ಸ್ಥಳೀಯರು ಪೊಲೀಸರೊಂದಿಗೆ ಕೈಜೋಡಿಸಿ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು. ಇದೇ ವೇಳೆ ನಗರ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು. ನಗರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಕರವೇ ತಾಲೂಕು ಅಧ್ಯಕ್ಷರ ಮನೆ ಮೇಲೆ ಅರಣ್ಯಾಧಿಕಾರಿಗಳಿಂದ ದಾಳಿ; ಜಿಂಕೆ ಮಾಂಸ ವಶ
40 percent commission ಸುಳ್ಳು ಸಾಬೀತು : ಕಾಂಗ್ರೆಸಿಗರಿಗೆ ತಾಕೀತು ಮಾಡಿದ ಯಡಿಯೂರಪ್ಪ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Shimoga; ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ
Covid ವೇಳೆ ಜೀವ ಉಳಿಸುವ ಕೆಲಸ ಮಾಡಿದ್ದೇವೆ: ಬಿಎಸ್‌ವೈ
MUST WATCH
ಹೊಸ ಸೇರ್ಪಡೆ
Kasaragod: ಅಪರಾಧ ಸುದ್ದಿಗಳು
Shirva: ಹಿಂದೂ ಜೂನಿಯರ್ ಕಾಲೇಜು ದಶಮಾನೋತ್ಸವ: ಕೊಲ್ಲಿ ರಾಷ್ಟ್ರದಲ್ಲಿ ಸಮಾಲೋಚನಾ ಸಭೆ
Kerala: ಆ್ಯಂಬುಲೆನ್ಸ್ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್ ರದ್ದು!
Anmol Bishnoi: ಅಮೆರಿಕದಲ್ಲಿ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಬಿಷ್ಣೋಯ್ ಬಂಧನ
Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.