Hosanagara: ಬಿಸಿ ಟೀ ಮೈ ಮೇಲೆ ಬಿದ್ದು ಗಂಭೀರ ಗಾಯಗೊಂಡಿದ್ದ ಎರಡು ವರ್ಷದ ಮಗು ಸಾವು

Team Udayavani, Nov 1, 2024, 4:14 PM IST

20-hosanagara

ಹೊಸನಗರ: ಬಿಸಿ ಟೀ ಮೈ ಮೇಲೆ ಬಿದ್ದು ಗಂಭೀರ ಗಾಯಗೊಂಡಿದ್ದ 2 ವರ್ಷದ ಮಗುವೊಂದು ಚಿಕಿತ್ಸೆ ಫಲಿಸದೆ ನ.1ರ ಶುಕ್ರವಾರ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕು ನಗರ ಸಮೀಪದ ಹಿರಿಮನೆ ಎಂಬಲ್ಲಿ ಸಂಭವಿಸಿದೆ.

ಶಾಸಕ ಆರಗ ಜ್ಞಾನೇಂದ್ರ ಅವರ ಹೊಸನಗರ ಭಾಗದ ಆಪ್ತ ಸಹಾಯಕ ರಾಜೇಶ್ ಹಿರಿಮನೆ ಹಾಗೂ ತಾ.ಪಂ. ಮಾಜಿ ಸದಸ್ಯೆ ಅಶ್ವಿನಿ ಪಾಟೀಲ್ ಅವರ 2 ವರ್ಷದ ಪುತ್ರ ಅಥರ್ವ‌ ನ ಮೈಮೇಲೆ ಅ. 24ರ ಗುರುವಾರ ಬಿಸಿ ಟೀ ಚೆಲ್ಲಿ ಗಂಭೀರವಾಗಿ ಗಾಯಗೊಂಡಿದ್ದನು. ಕೂಡಲೇ ಆತನನ್ನು ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

8 ದಿನಗಳಿಂದ ಚಿಕಿತ್ಸೆ ನೀಡಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ನ.1ರ ಶುಕ್ರವಾರ ಬೆಳಗ್ಗೆ ಮೃತಪಟ್ಟಿದ್ದಾನೆ.

ಪರೋಪಕಾರ ತಂದ ಆಪತ್ತು:

ಘಟನೆಯ ವಿವರ: ಅಂದು ರಾಜೇಶ್ ಅವರ ನೆರೆಮನೆಯ ವ್ಯಕ್ತಿಯೊಬ್ಬರು ಮೃತಪಟ್ಟ ಹಿನ್ನೆಲೆ ರಾತ್ರಿ ಅಂತಿಮ ದರ್ಶನಕ್ಕೆ ಬಂದಿದ್ದವರಿಗೆ ರಾಜೇಶ್ ಮತ್ತು ಅವರ ಪತ್ನಿ ಟೀ ಮಾಡಿ ಪಾತ್ರೆಗೆ ಹಾಕಿ ತಮ್ಮ ಮನೆಯ ಜಗಲಿ ಮೇಲೆ ಇಟ್ಟಿದ್ದರು. ಆಟವಾಡುತ್ತಾ ಅಲ್ಲಿಗೆ ಬಂದ ಅಥರ್ವ ಪಾತ್ರೆಯನ್ನು ಎಳೆದನು. ಈ ಪರಿಣಾಮ ಬಿಸಿ-ಬಿಸಿ ಟೀ ಆತನ ಮೈಮೇಲೆ ಚೆಲ್ಲಿ ಗಾಯಗೊಂಡಿದ್ದ.

ಅಥರ್ವನ ಮೈಯೆಲ್ಲ ಸುಟ್ಟುಗಾಯಗಳಾದ ಪರಿಣಾಮ ಆತನನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತು. ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಲಾಯಿತು.

ಆರಂಭ ಪರವಾಗಿಲ್ಲ ಮಗು ಚೇತರಿಸಿಕೊಳ್ಳುತ್ತಿದೆ ಎಂಬ ವೈದ್ಯರ ಧೈರ್ಯದ ಮಾತುಗಳು ಸಮಾಧಾನ ತಂದಿತ್ತು. ಆದರೆ ದುರದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೇ ಇಂದು (ನ.1) ಬೆಳಿಗ್ಗೆ ಮೃತಪಟ್ಟಿದೆ.

ಮದ್ಯರಾತ್ರಿ ಎದ್ದು ಪರೋಪಕಾರ ಮಾಡುವ ಆಶಯ ತೋರಿದ್ದೇ ರಾಜೇಶ್ ದಂಪತಿಗಳ ಪಾಲಿಗೆ ದುರಂತವಾಗಿದ್ದು ಮಾತ್ರ ದೇವರಿಗೆ ಪ್ರೀತಿ ಎಂಬಂತಾಗಿದೆ.

ರಾಜೇಶ್-ಅಶ್ವಿನಿ ದಂಪತಿಗೆ ಒಂದು ಗಂಡು ಮತ್ತು ಒಂದು ಹೆಣ್ಣು ಮಗುವಿದ್ದು ಇದೀಗ ಪುತ್ರನನ್ನು ಕಳೆದುಕೊಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಇಡೀ ಗ್ರಾಮದಲ್ಲಿ ಸ್ಮಶಾನ ಮೌನ ಆವರಿಸಿದೆ.

ಟಾಪ್ ನ್ಯೂಸ್

Sagara: ಭೀಕರ ಅಪಘಾತ… ರಿಕ್ಷಾ ಚಾಲಕ ಸೇರಿ ಇಬ್ಬರು ಮೃತ್ಯು, ಮೂವರಿಗೆ ಗಾಯ

Sagara: ಭೀಕರ ಅಪಘಾತ… ರಿಕ್ಷಾ ಚಾಲಕ ಸೇರಿ ಇಬ್ಬರು ಮೃತ್ಯು, ಮೂವರಿಗೆ ಗಾಯ

Waqf issue: ವಕ್ಫ್ ಬೋರ್ಡ್ ರದ್ದತಿಗೆ ಪತ್ರ ಚಳವಳಿ ನಡೆಸಬೇಕು: ಎಂ.ಪಿ.ರೇಣುಕಾಚಾರ್ಯ ಆಗ್ರಹ

Waqf issue: ವಕ್ಫ್ ಬೋರ್ಡ್ ರದ್ದತಿಗೆ ಪತ್ರ ಚಳವಳಿ ನಡೆಸಬೇಕು: ಎಂ.ಪಿ.ರೇಣುಕಾಚಾರ್ಯ ಆಗ್ರಹ

prahlad-joshi

Mallikarjun kharge; ಹೇಳಿಕೆಯಿಂದ ಗ್ಯಾರಂಟಿ ಚುನಾವಣೆಗಾಗಿ ಎನ್ನುವುದು ಸ್ಪಷ್ಟ : ಜೋಶಿ

1-a-kharge

Poll promises; ಖರ್ಗೆ, ರಾಹುಲ್ ಗಾಂಧಿ ಕ್ಷಮೆಗೆ ಒತ್ತಾಯಿಸಿದ ಬಿಜೆಪಿ

INDvsNZ: ಮತ್ತೆ ಬ್ಯಾಟಿಂಗ್‌ ಕುಸಿತ; ಮುಂಬೈನಲ್ಲೂ ಸಂಕಷ್ಟಕ್ಕೆ ಸಿಲುಕಿದ ಭಾರತ

INDvsNZ: ಮತ್ತೆ ಬ್ಯಾಟಿಂಗ್‌ ಕುಸಿತ; ಮುಂಬೈನಲ್ಲೂ ಸಂಕಷ್ಟಕ್ಕೆ ಸಿಲುಕಿದ ಭಾರತ

Darshan (3)

Darshan; ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾದ ನಟ: ಬಿಗಿ ಪೊಲೀಸ್ ಬಂದೋಬಸ್ತ್

20-hosanagara

Hosanagara: ಬಿಸಿ ಟೀ ಮೈ ಮೇಲೆ ಬಿದ್ದು ಗಂಭೀರ ಗಾಯಗೊಂಡಿದ್ದ ಎರಡು ವರ್ಷದ ಮಗು ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಭೀಕರ ಅಪಘಾತ… ರಿಕ್ಷಾ ಚಾಲಕ ಸೇರಿ ಇಬ್ಬರು ಮೃತ್ಯು, ಮೂವರಿಗೆ ಗಾಯ

Sagara: ಭೀಕರ ಅಪಘಾತ… ರಿಕ್ಷಾ ಚಾಲಕ ಸೇರಿ ಇಬ್ಬರು ಮೃತ್ಯು, ಮೂವರಿಗೆ ಗಾಯ

Anandapura: ಬಟ್ಟೆ ತೊಳೆಯಲು ಹೋದ ಮಹಿಳೆ ಕೆರೆಗೆ ಬಿದ್ದು ಮೃತ್ಯು

Anandapura: ಬಟ್ಟೆ ತೊಳೆಯಲು ಹೋದ ಮಹಿಳೆ ಕೆರೆಗೆ ಬಿದ್ದು ಮೃತ್ಯು

13-anadapura

Anandapura: ಚಾಲಕನ ನಿಯಂತ್ರಣ ತಪ್ಪಿದ ಬಸ್; ಹಲವರಿಗೆ ಗಾಯ

Hosanagara: ಹಾಡುಹಗಲೇ ಮನೆಯ ಬೀಗ ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

Hosanagara: ಹಾಡುಹಗಲೇ ಮನೆಯ ಬೀಗ ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

9

Sagara: ಮೊಟ್ಟೆ ಬೇಡ, ಹಾಲೇ ಕೊಡಿ; ವೀರಶೈವರ ಮನವಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-hampi-1

Deepawali; ಸರಣಿ‌ ರಜೆ :ಹಂಪಿಯಲ್ಲಿ ಪ್ರವಾಸಿಗರ ದಂಡು, ಪರದಾಟ!

Sagara: ಭೀಕರ ಅಪಘಾತ… ರಿಕ್ಷಾ ಚಾಲಕ ಸೇರಿ ಇಬ್ಬರು ಮೃತ್ಯು, ಮೂವರಿಗೆ ಗಾಯ

Sagara: ಭೀಕರ ಅಪಘಾತ… ರಿಕ್ಷಾ ಚಾಲಕ ಸೇರಿ ಇಬ್ಬರು ಮೃತ್ಯು, ಮೂವರಿಗೆ ಗಾಯ

Waqf issue: ವಕ್ಫ್ ಬೋರ್ಡ್ ರದ್ದತಿಗೆ ಪತ್ರ ಚಳವಳಿ ನಡೆಸಬೇಕು: ಎಂ.ಪಿ.ರೇಣುಕಾಚಾರ್ಯ ಆಗ್ರಹ

Waqf issue: ವಕ್ಫ್ ಬೋರ್ಡ್ ರದ್ದತಿಗೆ ಪತ್ರ ಚಳವಳಿ ನಡೆಸಬೇಕು: ಎಂ.ಪಿ.ರೇಣುಕಾಚಾರ್ಯ ಆಗ್ರಹ

1-dee

Kulgeri Cross; ನಾಡಿನಲ್ಲಿಯೇ ಪ್ರಥಮ…ತಾಯಿ ಭುವನೇಶ್ವರಿ ರಥೋತ್ಸವ

Padubidri: ರಸ್ತೆ ದಾಟುತ್ತಿದ್ದ ವೇಳೆ ಸ್ಕೂಟರ್‌ ಢಿಕ್ಕಿ… ಮಹಿಳೆಗೆ ಗಾಯ

Padubidri: ರಸ್ತೆ ದಾಟುತ್ತಿದ್ದ ವೇಳೆ ಸ್ಕೂಟರ್‌ ಢಿಕ್ಕಿ… ಮಹಿಳೆಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.